Homeಮುಖಪುಟವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ ಹಾಕಿದ್ದ ಆರೋಪಿ ಬಂಧನ

ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ ಹಾಕಿದ್ದ ಆರೋಪಿ ಬಂಧನ

- Advertisement -
- Advertisement -

ದೇಶಾದ್ಯಂತದ ವಿಮಾನ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆಗಳನ್ನು ಸರಣಿಯಾಗಿ ಮಾಡಿತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು 35 ವರ್ಷದ ಜಗದೀಶ್ ಶ್ರೀಯಾಮ್ ಉಯ್ಕೆ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನಾಗ್ಪುರ ಪೊಲೀಸರ ಮುಂದೆ ಹಾಜರುಪಡಿಸಿದ ನಂತರ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ವಿಮಾನ ನಿಲ್ದಾಣಗಳಿಗೆ

ಪೂರ್ವ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಅರ್ಜುನಿ ಮೋರ್ಗಾಂವ್‌ನ ನಿವಾಸಿಯಾಗಿರುವ ಆರೋಪಿ ಜಗದೀಶ್ ನಾಗ್ಪುರ ಪೊಲೀಸರು ತನಿಖೆಗೆ ಹಾಜರಾಗುವಂತೆ ನೋಟಿಸ್ ಕಳುಹಿಸಿದ ನಂತರ ವಿಮಾನದ ಮೂಲಕ ನಗರಕ್ಕೆ ಆಗಮಿಸಿ ಗುರುವಾರ ಸಂಜೆ ಶರಣಾದರು ಎಂದು ಅಧಿಕಾರಿಗಳು ಹೇಳಿದ್ದಾರೆ. ವಿಮಾನ ನಿಲ್ದಾಣಗಳಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 26 ರವರೆಗಿನ 13 ದಿನಗಳಲ್ಲಿ, ಭಾರತೀಯ ವಿಮಾನ ಸಂಸ್ಥೆಗಳ 300ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆಗಳನ್ನು ಮಾಡಲಾಗಿತ್ತು. ಹೆಚ್ಚಿನ ಬೆದರಿಕೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ನೀಡಲಾಗಿದ್ದು, ಅಕ್ಟೋಬರ್ 22 ರಂದು ಇಂಡಿಗೋ ಮತ್ತು ಏರ್ ಇಂಡಿಯಾದಿಂದ ತಲಾ 13 ವಿಮಾನಳು ಸೇರಿದಂತೆ ಸುಮಾರು 50 ವಿಮಾನಗಳಿಗೆ ಬೆದರಿಕೆಗಳು ಬಂದಿವೆ.

ಆರೋಪಿ ಅಕ್ಟೋಬರ್ 21 ರಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ಪೊಲೀಸ್ ಅಧಿಕಾರಿಗಳಿಗೆ ಕಳುಹಿಸಿದ್ದಾರೆ ಎನ್ನಲಾದ ಇಮೇಲ್ ನಂತರ ರೈಲ್ವೇ ನಿಲ್ದಾಣಗಳಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ.

ಆರೋಪಿಯು 2021 ರಲ್ಲಿ ಕೂಡಾ ಹುಸಿ ಬಾಂಬ್ ಬೆದರಿಕೆ ಬಗ್ಗೆ ಫೋನ್ ಕರೆ ಮಾಡಿದ್ದನು. ಅದರ ನಂತರ ಆತನನ್ನು ಬಂಧಿಸಲಾಗಿತ್ತು. ಬಿಡುಗಡೆಯಾದ ನಂತರ ತಾನಿದ್ದ ಅರ್ಜುನಿ ಮೋರ್ಗಾಂವ್‌ನಿಂದ ದೆಹಲಿಗೆ ನಿವಾಸ ಬದಲಾಯಿಸಿದ್ದ ಎಂದು ಅಧಿಕಾರಿ ತಿಳಿಸಿದ್ದಾರೆ.

ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ಶ್ವೇತಾ ಖೇಡ್ಕರ್ ನೇತೃತ್ವದ ತನಿಖಾಧಿಕಾರಿಗಳು, ಆರೋಪಿ ವಿವಿಧ ಸಂಸ್ಥೆಗಳಿಗೆ ಕಳುಹಿಸಿದ್ದ ಇಮೇಲ್‌ಗಳನ್ನು ಆಧರಿಸಿ ಆತನನ್ನು ಬಂಧಿಸಿದ್ದಾರೆ. XI ವರೆಗೆ ಶಾಲೆಗೆ ಹೋಗಿದ್ದ ಆರೋಪಿಯು ಭಯೋತ್ಪಾದನೆಯ ಕುರಿತು ‘ಆತಂಕ್ವಾದ್ – ಏಕ್ ತುಫಾನಿ ರಾಕ್ಷಸ್’ ಎಂಬ ಪುಸ್ತಕವನ್ನು ಬರೆದಿದ್ದಾನೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ದೀಪಾವಳಿ | ‘ಸುರಕ್ಷಿತ’ ಮಿತಿಗಿಂತ 14 ಪಟ್ಟು ಹೆಚ್ಚಾದ ದೆಹಲಿಯ ವಾಯುಮಾಲಿನ್ಯ

ದೀಪಾವಳಿ | ‘ಸುರಕ್ಷಿತ’ ಮಿತಿಗಿಂತ 14 ಪಟ್ಟು ಹೆಚ್ಚಾದ ದೆಹಲಿಯ ವಾಯುಮಾಲಿನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...