Homeಮುಖಪುಟಅಜಿತ್ ಪವಾರ್ ಎಂದಿಗೂ ಮುಖ್ಯಮಂತ್ರಿಯಾಗುವುದಿಲ್ಲ: ಶರದ್ ಪವಾರ್

ಅಜಿತ್ ಪವಾರ್ ಎಂದಿಗೂ ಮುಖ್ಯಮಂತ್ರಿಯಾಗುವುದಿಲ್ಲ: ಶರದ್ ಪವಾರ್

- Advertisement -
- Advertisement -

ಅಜಿತ್ ಪವಾರ್ ಎಂದಿಗೂ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುವುದಿಲ್ಲ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರು ತಮ್ಮ ಸೋದರಳಿಯ ಮತ್ತು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಬಿಜೆಪಿ ದೇಶದ 70 ಪ್ರತಿಶತ ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿಲ್ಲ ಮತ್ತು ಮಹಾರಾಷ್ಟ್ರದಲ್ಲಿಯೂ ಅದು ಅಧಿಕಾರವನ್ನು ಕಳೆದುಕೊಳ್ಳುತ್ತದೆ” ಎಂದು ಹೇಳಿದರು.

”ಎನ್‌ಸಿಪಿಯನ್ನು ಮುರಿದು ಶಿವಸೇನೆ-ಬಿಜೆಪಿ ಸರ್ಕಾರಕ್ಕೆ ಸೇರ್ಪಡೆಯಾದ ನಂತರ ಜುಲೈನಲ್ಲಿ ಉಪಮುಖ್ಯಮಂತ್ರಿಯಾದ ಅಜಿತ್ ಪವಾರ್ ಅವರು ಶೀಘ್ರದಲ್ಲೇ ರಾಜ್ಯದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸುತ್ತಾರೆ ಎಂಬ ಊಹಾಪೋಹಗಳ ಕುರಿತು ಕೇಳಿದ ಪ್ರಶ್ನೆಗೆ, ಶರದ್ ಪವಾರ್ ಅವರು, ಅಜಿತ್ ಪವಾರ್ ಮುಖ್ಯಮಂತ್ರಿಯಾಗುವ ಕನಸು ಕನಸಾಗಿಯೇ ಉಳಿಯುತ್ತದೆ” ಎಂದು ಹೇಳಿದರು.

2024ರ ಚುನಾವಣೆಯ ನಂತರ ಮಹಾರಾಷ್ಟ್ರದಲ್ಲಿ ಶಿವಸೇನೆ (ಯುಬಿಟಿ), ಎನ್‌ಸಿಪಿ (ಶರದ್ ಪವಾರ್ ಗುಂಪು) ಮತ್ತು ಕಾಂಗ್ರೆಸ್‌ನ ಮಹಾ ವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇತರ ರಾಜಕೀಯ ಪಕ್ಷಗಳನ್ನು ಒಡೆಯುವ ಮೂಲಕ ಕೆಲವು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತು ಆದರೆ ಅದು 70 ಪ್ರತಿಶತ ರಾಜ್ಯಗಳಲ್ಲಿ ಅಧಿಕಾರದಲ್ಲಿಲ್ಲ ಎಂದು ಶರದ್ ಪವಾರ್ ಹೇಳಿದರು.

ವಂಚಿತ್ ಬಹುಜನ ಅಘಾಡಿ ನಾಯಕ ಪ್ರಕಾಶ್ ಅಂಬೇಡ್ಕರ್ ಅವರು ಪ್ರತಿಪಕ್ಷಗಳ INDIA ಮೈತ್ರಿಕೂಟಕ್ಕೆ ಸೇರ್ಪಡೆಗೊಂಡ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪವಾರ್, ಅವರು ಸಕಾರಾತ್ಮಕವಾಗಿದ್ದಾರೆ ಎಂದು ಹೇಳಿದರು.

ಅವರ ಮಾಜಿ ಸಹೋದ್ಯೋಗಿ ಛಗನ್ ಭುಜಬಲ್ ಒಮ್ಮೆ ಸುಪ್ರಿಯಾ ಸುಲೆ ಅವರನ್ನು ಎನ್‌ಸಿಪಿ ಅಧ್ಯಕ್ಷರನ್ನಾಗಿ ಮಾಡಬೇಕೆಂದು ಪ್ರಸ್ತಾಪಿಸಿದ್ದರು, ಆದರೆ ಭುಜಬಲ್ ಸ್ವತಃ ಈಗ ಇನ್ನೊಂದು ಬದಿಗೆ ಬದಲಾಗಿದ್ದಾರೆ ಎಂದರು.

ಇದನ್ನೂ ಓದಿ: ‘ಮಾಟ ಮಂತ್ರದಿಂದಲೇ‌ ನಾವು ಸೋತಿದ್ದು’: ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪೂರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...