Homeಮುಖಪುಟಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

- Advertisement -
- Advertisement -

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್ ರೆಕಾರ್ಡರ್‌ಗಳು ಬೆಂಕಿಯಿಂದ ಹಾನಿಗೊಳಗಾಗಿವೆ ಎಂದು ಖಚಿತಪಡಿಸಿದೆ.

ವಿಮಾನ ಅಪಘಾತದ ತನಿಖಾ ಸಂಸ್ಥೆಯಾದ ವಿಮಾನ ಅಪಘಾತ ತನಿಖಾ ದಳ (ಎಎಐಬಿ) ಬಾರಾಮತಿಯಲ್ಲಿ ಅಪಘಾತಕ್ಕೀಡಾದ ಲಿಯರ್‌ಜೆಟ್ 45 ಏರ್‌ಕ್ರಾಫ್ಟ್‌ VT-SSKಗೆ ಸಂಬಂಧಿಸಿದಂತೆ ಸಮಗ್ರ ತನಿಖೆಯನ್ನು ನಡೆಸುತ್ತಿದೆ ಎಂದು ಹೇಳಿಕೆ ತಿಳಿಸಿದೆ.

ಈ ತನಿಖೆಯನ್ನು ವಿಮಾನ (ಅಪಘಾತಗಳು ಮತ್ತು ಘಟನೆಗಳ ತನಿಖೆ) ನಿಯಮಗಳು, 2017ರ ಪ್ರಕಾರ ಮತ್ತು ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ ಅನೆಕ್ಸ್ 13ರ ಅಂತಾರಾಷ್ಟ್ರೀಯ ಮಾನದಂಡಗಳು ಹಾಗೂ ಶಿಫಾರಸುಗಳಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿ ನಡೆಸಲಾಗುತ್ತಿದೆ ಎಂದು ಹೇಳಿದೆ.

ವಿಮಾನವು ಎರಡು ಸ್ವತಂತ್ರ ಫ್ಲೈಟ್ ರೆಕಾರ್ಡರ್‌ಗಳನ್ನು ಹೊಂದಿತ್ತು. ಅಪಘಾತದ ಸಮಯದಲ್ಲಿ ಈ ಎರಡೂ ರೆಕಾರ್ಡರ್‌ಗಳು ದೀರ್ಘಕಾಲದವರೆಗೆ ಅತಿಯಾದ ಶಾಖಕ್ಕೆ ಒಡ್ಡಿಕೊಂಡಿದ್ದರಿಂದ, ಬೆಂಕಿಯಿಂದ ಹಾನಿಗೊಳಗಾಗಿವೆ ಎಂದು ಅಧಿಕೃತ ಹೇಳಿಕೆ ವಿವರಿಸಿದೆ.

ಎಲ್3-ಕಮ್ಯುನಿಕೇಷನ್ಸ್ ಸಂಸ್ಥೆ ತಯಾರಿಸಿರುವ ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್ (ಡಿಎಫ್‌ಡಿಆರ್) ಅನ್ನು ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ)ದ ಫ್ಲೈಟ್ ರೆಕಾರ್ಡರ್ ಪ್ರಯೋಗಾಲಯದಲ್ಲಿ ಯಶಸ್ವಿಯಾಗಿ ಡೌನ್‌ಲೋಡ್ ಮಾಡಲಾಗಿದೆ. ವಿಮಾನದ ಹಾರಾಟದ ದತ್ತಾಂಶಗಳನ್ನು ಹೊಂದಿರುವ ಈ ರೆಕಾರ್ಡರ್ ತನಿಖೆಗೆ ಅತ್ಯಂತ ಪ್ರಮುಖವಾಗಿದೆ. ಆದರೆ, ಹನಿವೆಲ್ ಕಂಪನಿ ತಯಾರಿಸಿರುವ ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ (ಸಿವಿಆರ್) ತೀವ್ರವಾಗಿ ಹಾನಿಗೊಳಗಾಗಿರುವ ಕಾರಣ, ಅದರಿಂದ ಮಾಹಿತಿ ಪಡೆಯಲು ತಯಾರಕ ರಾಷ್ಟ್ರವಾದ ಅಮೆರಿಕದ ತಜ್ಞರ ನೆರವನ್ನು ಕೋರಲಾಗಿದೆ.

ಸಂಪೂರ್ಣ, ವಸ್ತುನಿಷ್ಠ ಮತ್ತು ಪುರಾವೆ ಆಧಾರಿತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಎಎಐಬಿ ಸಂಸ್ಥೆಯು ಸೂಚಿಸಲಾದ ಎಲ್ಲಾ ತಾಂತ್ರಿಕ ಮತ್ತು ಕಾರ್ಯವಿಧಾನದ ನಿಯಮಾವಳಿಗಳನ್ನು ಅತ್ಯಂತ ಶ್ರದ್ಧೆಯಿಂದ ಪಾಲಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸಂಪೂರ್ಣ ಪಾರದರ್ಶಕತೆಗೆ ಬ್ಯೂರೋ (ಎಎಐಬಿ) ಬದ್ಧವಾಗಿದ್ದು, ತನಿಖೆಯ ಸೂಕ್ತ ಹಂತದಲ್ಲಿ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳಲಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಹೇಳಲಾಗಿದೆ.

ಸಂಬಂಧಪಟ್ಟ ಎಲ್ಲಾ ವ್ಯಕ್ತಿಗಳು ಮತ್ತು ಸಂಸ್ಥೆಗಳು ಈ ಘಟನೆಯ ಬಗ್ಗೆ ಊಹಾಪೋಹಗಳನ್ನು ಹರಡಬಾರದು ಮತ್ತು ನಿಗದಿಪಡಿಸಿದ ಕಾರ್ಯವಿಧಾನಗಳ ಪ್ರಕಾರ ತನಿಖಾ ಪ್ರಕ್ರಿಯೆಯು ಮುಂದುವರಿಯಲು ಸಹಕರಿಸಬೇಕೆಂದು ಎಎಐಬಿ ಗೌರವಪೂರ್ವಕವಾಗಿ ವಿನಂತಿಸುತ್ತದೆ ಎಂದು ಅಧಿಕೃತ ಹೇಳಿಕೆಯು ಮನವಿ ಮಾಡಿದೆ.

ಜನವರಿ 28, 2026 ರಂದು ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಒಟ್ಟು ಐದು ಮಂದಿ ಮೃತಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...