Homeಮುಖಪುಟಮಹಾರಾಷ್ಟ್ರ ಸರ್ಕಾರಕ್ಕೆ ಅಜಿತ್ ಪವಾರ್ ಎನ್‌ಸಿಪಿ ಬಣ ಸೇರ್ಪಡೆ: ಶಿಂಧೆ ಶಿವಸೇನೆ ಶಾಸಕರಲ್ಲಿ ಭುಗಿಲೆದ್ದ ಅಸಮಾಧಾನ

ಮಹಾರಾಷ್ಟ್ರ ಸರ್ಕಾರಕ್ಕೆ ಅಜಿತ್ ಪವಾರ್ ಎನ್‌ಸಿಪಿ ಬಣ ಸೇರ್ಪಡೆ: ಶಿಂಧೆ ಶಿವಸೇನೆ ಶಾಸಕರಲ್ಲಿ ಭುಗಿಲೆದ್ದ ಅಸಮಾಧಾನ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರಕ್ಕೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣ ಸೇರ್ಪಡೆಗೊಂಡಂತೆ ಸಿಎಂ ಏಕನಾಥ್‌ ಶಿಂಧೆಯವರ ಶಿವಸೇನೆ ಬಣದ ಶಾಸಕರಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಶಿವಸೇನಾ ಶಾಸಕ ಸಂಜಯ್ ಶಿರ್ಸಾತ್ ಮಾತನಾಡಿ, “ಪಕ್ಷದ ಕೆಲವು ನಾಯಕರು ಅಜಿತ್ ಪವಾರ್ ಅವರ ಎನ್‌ಸಿಪಿ ಬಣವನ್ನು ಸರ್ಕಾರಕ್ಕೆ ಸೇರಿಸಿಕೊಳ್ಳುವುದರ ಬಗ್ಗೆ ಅಸಮಾಧಾನ ಹೊಂದಿದ್ದಾರೆ” ಎಂದು ಹೇಳಿದ್ದಾರೆ.

“ರಾಜಕೀಯದಲ್ಲಿ ನಮ್ಮ ಎದುರಾಳಿ ಗ್ಯಾಂಗ್ ನಮ್ಮೊಂದಿಗೆ ಸೇರಲು ಬಯಸಿದಾಗ, ನಾವು ಅವರನ್ನು ತೆಗೆದುಕೊಳ್ಳಬೇಕು. ಹಾಗಾಗಿ ಬಿಜೆಪಿ ಅವರನ್ನು ಬರಮಾಡಿಕೊಂಡಿದೆ. ಆದರೆ ಎನ್‌ಸಿಪಿ ಶಾಸಕರು ನಮ್ಮೊಂದಿಗೆ ಸೇರಿಕೊಂಡ ನಂತರ ನಮ್ಮ ಗುಂಪಿನಲ್ಲಿರುವ ಜನರು ಅಸಮಾಧಾನಗೊಂಡಿದ್ದಾರೆ. ಏಕೆಂದರೆ ನಮ್ಮ ಕೆಲವು ಶಾಸಕರಿಗೆ ಅವರು ಬಯಸಿದ ಸ್ಥಾನಗಳು ಸಿಗುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಶಿಂಧೆ ಸೇನೆಯ ಶಾಸಕರು ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿ ಈ ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಮಹಾರಾಷ್ಟ್ರದಲ್ಲಿ 43 ಸಚಿವ ಸ್ಥಾನಗಳಿವೆ. ಅದರಲ್ಲಿ ಇದುವರೆಗೂ ಬಿಜೆಪಿಯ 10 ಸಚಿವರು ಮತ್ತು ಶಿಂಧೆ ಶಿವಸೇನೆ ಬಣದ 10 ಸಚಿವರುಗಳು ಇದ್ದರು. ಇನ್ನು 23 ಸ್ಥಾನಗಳು ಖಾಲಿ ಇದ್ದವು. ಅವುಗಳಲ್ಲಿ ಕನಿಷ್ಟ 11 ಸಚಿವ ಸ್ಥಾನಗಳು ಶಿಂಧೆಯ ಶಿವಸೇನೆ ಶಾಸಕರಿಗೆ ಸಿಗುತ್ತವೆ ಎಂಬ ವಿಶ್ವಾಸದಲ್ಲಿದ್ದರು. ಆದರೆ ಆ 23ರಲ್ಲಿ ಸದ್ಯ ಏಕಾಏಕಿ 9 ಸಚಿವ ಸ್ಥಾನಗಳು ಅಜಿತ್ ಪವಾರ್ ಬಣಕ್ಕೆ ದಕ್ಕಿವೆ. ಹಾಗಾಗಿ ಕೇವಲ 14 ಸ್ಥಾನಗಳು ಮಾತ್ರ ಖಾಲಿ ಇದ್ದು ಶಿಂಧೆ ಬಣಕ್ಕೆ 5 ಸಚಿವ ಸ್ಥಾನ ಸಿಗುವುದೇ ದೊಡ್ಡದು ಎನ್ನಲಾಗಿದೆ. ಇದು ಅವರ ಬಣದಲ್ಲಿ ಕಿತ್ತಾಟಕ್ಕೆ ಕಾರಣವಾಗಿದೆ.

ಇನ್ನೊಂದೆಡೆ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಅಜಿತ್ ಪವಾರ್ ಅವರು ಶಿವಸೇನೆ ಶಾಸಕರಿಗೆ ಅನುದಾನ ನೀಡುವುದರಲ್ಲಿ ತಾರತಮ್ಯ ಮಾಡುತ್ತಿದ್ದರು ಎಂದು ಹಲವು ಶಾಸಕರು ದೂರಿದ್ದರು. ತಾವು ಎಂವಿಎ ಸರ್ಕಾರದಿಂದ ಹೊರಬರಲು ಅದು ಸಹ ಒಂದು ಕಾರಣ ಎಂದು ಹೇಳಿದ್ದರು. ಆದರೆ ಈಗ ಅದೇ ಅಜಿತ್ ಪವಾರ್ ಶಿಂಧೆ ಸಂಪುಟದಲ್ಲಿಯೂ ಹಣಕಾಸು ಸಚಿವರಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದು ಶಿಂಧೆ ಬಣದ ಶಿವಸೇನೆ ಶಾಸಕರಿಗೆ ಇರಿಸು ಮುರಿಸು ಉಂಟು ಮಾಡಿದೆ.

ಇದನ್ನೂ ಓದಿ; ವಿಪಕ್ಷಗಳ ಮೈತ್ರಿ: ಬಿಜೆಪಿಯನ್ನು 2024ರಲ್ಲಿ ಅಧಿಕಾರದಿಂದ ದೂರವಿಡಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...