Homeಮುಖಪುಟಮುಖ್ಯಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿದ ಅಜಿತ್ ಪವಾರ್: ಸಿಎಂ ಬದಲಾವಣೆಯಿಲ್ಲವೆಂದ ಬಿಜೆಪಿ

ಮುಖ್ಯಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿದ ಅಜಿತ್ ಪವಾರ್: ಸಿಎಂ ಬದಲಾವಣೆಯಿಲ್ಲವೆಂದ ಬಿಜೆಪಿ

- Advertisement -
- Advertisement -

ಮಹಾರಾಷ್ಟ್ರದಲ್ಲಿನ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ. ಎನ್‌ಸಿಪಿಯಿಂದ ಸಿಡಿದು ಬಂದು ಮಹಾರಾಷ್ಟ್ರದ ಡಿಸಿಎಂ ಆಗಿರುವ ಅಜಿತ್ ಪವಾರ್ ತಾನೂ ಮುಖ್ಯಮಂತ್ರಿಯಾಗಬೇಕೆಂಬ ಬಯಕೆ ವ್ಯಕ್ತಪಡಿಸಿದ್ದಾರೆ. ಆದರೆ ಸದ್ಯಕ್ಕೆ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಸಿಎಂ ಆಗಲು ಬಯಸುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅಜಿತ್ ಪವಾರ್, “ಮುಂದೊಂದು ದಿನ ಮುಖ್ಯಮಂತ್ರಿಯಾಗಲು ಬಯಸುತ್ತೇನೆ” ಎಂದಿದ್ದಾರೆ. ಅಲ್ಲದೇ ಶರದ್‌ ಪವಾರ್‌ರವರಿಗೆ 83 ವರ್ಷ ವಯಸ್ಸಾಗಿದೆ. ಇನ್ನು ಎಷ್ಟು ದಿನ ನೀವೇ ಪಕ್ಷವನ್ನು ಮುನ್ನಡೆಸುತ್ತೀರಿ? ನಾನು ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದರು.

ಇದು ಸಿಎಂ ಏಕನಾಥ್ ಶಿಂಧೆ ಬಣದಲ್ಲಿ ತಲ್ಲಣ ಉಂಟು ಮಾಡಿದೆ. ಶಿಂಧೆ ಸೇರಿದಂತೆ 16 ಶಾಸಕರ ಅನರ್ಹತೆ ಅರ್ಜಿ ವಿಚಾರಣೆ ನಡೆಯುತ್ತಿದ್ದು ಕೆಲವೇ ದಿನಗಳಲ್ಲಿ ತೀರ್ಪು ಬರಲಿದೆ. ಅಲ್ಲದೇ ಸ್ಪೀಕರ್ ಈ ಬಗ್ಗೆ ಕ್ರಮ ತೆಗೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಾಗಾಗಿ ಆದಷ್ಟು ಬೇಗ ಮಂತ್ರಿಗಳಾಗಲು, ಕೇಂದ್ರ ಸರ್ಕಾರದ ಮಂತ್ರಿಗಳಾಗಲು ಕಾದು ಕುಳಿತಿದ್ದ ಶಿಂಧೆ ಬಣದ ಶಾಸಕರು ಮತ್ತು ಸಂಸದರಿಗೆ ಅಜಿತ್ ಪವಾರ್ ಹೇಳಿಕೆ ನಡುಕ ಹುಟ್ಟಿಸಿದೆ.

ಮಹಾರಾಷ್ಟ್ರದಲ್ಲಿ 43 ಸಚಿವ ಸ್ಥಾನಗಳಿವೆ. ಅದರಲ್ಲಿ ಇದುವರೆಗೂ ಬಿಜೆಪಿಯ 10 ಸಚಿವರು ಮತ್ತು ಶಿಂಧೆ ಬಣದ 10 ಸಚಿವರುಗಳು ಇದ್ದರು. ಇನ್ನು 23 ಸ್ಥಾನಗಳು ಖಾಲಿ ಇದ್ದವು. ಅವುಗಳಲ್ಲಿ ಕನಿಷ್ಟ 11 ಸಚಿವ ಸ್ಥಾನಗಳು ಶಿಂಧೆಯ ಶಿವಸೇನೆ ಶಾಸಕರಿಗೆ ಸಿಗುತ್ತವೆ ಎಂಬ ವಿಶ್ವಾಸದಲ್ಲಿದ್ದರು. ಆದರೆ ಆ 23ರಲ್ಲಿ ಸದ್ಯ ಏಕಾಏಕಿ 9 ಸಚಿವ ಸ್ಥಾನಗಳು ಅಜಿತ್ ಪವಾರ್ ಬಣಕ್ಕೆ ದಕ್ಕಿವೆ. ಹಾಗಾಗಿ ಕೇವಲ 14 ಸ್ಥಾನಗಳು ಮಾತ್ರ ಖಾಲಿ ಇದ್ದು ಶಿಂಧೆ ಬಣಕ್ಕೆ 5 ಸಚಿವ ಸ್ಥಾನ ಸಿಗುವುದೇ ದೊಡ್ಡದು ಎನ್ನಲಾಗಿದೆ.

ಆದರೆ ಸದ್ಯ ಸಿಎಂ ಬದಲಾವಣೆ ಇಲ್ಲ ಎಂದು ಬಿಜೆಪಿಯ ಹಿರಿಯ ನಾಯಕರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ನಾವು ಏಕನಾಥ್‌ ಶಿಂಧೆಯವರನ್ನು ಬದಿಗೆ ಸರಿಸುವುದು ಒಳ್ಳೆಯ ಸಂದೇಶ ನೀಡುವುದಿಲ್ಲ. ನಮ್ಮ ಗುರಿ ಏನಿದ್ದರೂ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಒಟ್ಟಾಗಿ ಎದುರಿಸುವುದಾಗಿದೆ. ಮೂರು ಪಕ್ಷಗಳು ಸೇರಿ ಉತ್ತಮ ಸ್ಪರ್ಧೆ ನಿಡುತ್ತೇವೆ ಮತ್ತು ಮಹಾ ವಿಕಾಸ್ ಅಘಾಡಿಯ ಶಕ್ತಿ ಕುಂದಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆಗೆ ಬಿಜೆಪಿ ಮಿತ್ರಪಕ್ಷ AIADMK ಯಿಂದ ವಿರೋಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read