Homeಮುಖಪುಟವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ. ದುರಂತದ ಹಿಂದೆ ಪಿತೂರಿಯ ಶಂಕೆ ವ್ಯಕ್ತಪಡಿಸಿರುವ ಅವರು, ದೇಶದ ರಾಜಕೀಯ ನಾಯಕರ ಸುರಕ್ಷತೆಯ ಕುರಿತು ಪ್ರಶ್ನೆ ಎತ್ತಿದ್ದಾರೆ.

ಅವಘಡದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಅಜಿತ್ ಪವಾರ್ ಅವರ ಸಾವಿನ ಸುದ್ದಿ ನನಗೆ ಆಘಾತ ತಂದಿದೆ. ಈ ಘಟನೆ ರಾಷ್ಟ್ರಕ್ಕೆ ಗಂಭೀರ ನಷ್ಟ ಎಂದಿದ್ದಾರೆ. ದೇಶದಲ್ಲಿ ರಾಜಕೀಯ ನಾಯಕರಿಗೂ ‘ಸುರಕ್ಷತೆ ಮತ್ತು ಭದ್ರತೆ ಇಲ್ಲ ಎಂದಿರುವ ಅವರು, ಅಜಿತ್ ಪವಾರ್ ಬಿಜೆಪಿ ತೊರೆಯುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಸೂಚಿಸುವ ಸಾಮಾಜಿಕ ಮಾಧ್ಯಮಗಳ ಇತ್ತೀಚಿನ ಹೇಳಿಕೆಗಳನ್ನು ಉಲ್ಲೇಖಿಸಿದ್ದಾರೆ.

“ಇಂದು ನಡೆದ ಘಟನೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆ ಮಾತ್ರ ವಿಶ್ವಾಸಾರ್ಹವಾಗಿರುತ್ತದೆ. ನಮಗೆ ಸುಪ್ರೀಂ ಕೋರ್ಟ್‌ ಮೇಲೆ ಮಾತ್ರ ನಂಬಿಕೆ ಇದೆ, ಬೇರೆ ಯಾವುದೇ ಸಂಸ್ಥೆಗಳ ಮೇಲೆ ಇಲ್ಲ. ತನಿಖಾ ಸಂಸ್ಥೆಗಳು ತಮ್ಮ ಸ್ವಾತಂತ್ರ್ಯವನ್ನು ಕಳೆದುಕೊಂಡಿವೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಅಜಿತ್ ಪವಾರ್ ಮತ್ತು ಇತರ ನಾಲ್ವರ ಸಾವಿಗೆ ಕಾರಣವಾಗಿರುವ ಬಾರಾಮತಿ ವಿಮಾನ ಅಪಘಾತದ ಬಗ್ಗೆ ಸರಿಯಾದ ಮತ್ತು ಸಮಗ್ರ ತನಿಖೆ ನಡೆಸಬೇಕೆಂದು ಹಲವಾರು ರಾಜಕೀಯ ನಾಯಕರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ವಂಚಿತ್ ಬಹುಜನ ಅಘಾಡಿ ನಾಯಕ ಪ್ರಕಾಶ್ ಅಂಬೇಡ್ಕರ್ ಸೇರಿದಂತೆ ಹಲವರು ಸಂತಾಪ ಸೂಚಿಸುತ್ತಾ ಘಟನೆಯ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸೋಮವಾರ (ಅ.26) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೊಸ ಮತದಾರರನ್ನು ಸೇರಿಸುವ 'ಫಾರಂ-6ರ' ಜೊತೆ ಸಲ್ಲಿಸುವಂತೆ ಸೂಚಿಸಲಾಗಿದ್ದ 'ಘೋಷಣಾ ಪತ್ರ' ಫಾರಂ-6ರ ಭಾಗವಾಗಿರಲಿಲ್ಲ ಎಂದು ಹೇಳಿದೆ. ಚುನಾವಣಾ ಆಯೋಗ ನಿರ್ಧಾರಗಳ ಕುರಿತು...

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...

ತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

ತಮಿಳುನಾಡಿನ ಆಂಡಿಪಟ್ಟಿ ಸಮೀಪದ ತೆಕ್ಕಂಪಟ್ಟಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿಯನ್ನು ಥಳಿಸಿ 17 ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಂಗಳವಾರ (ಅ.27) ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಜೈಲಿನಿಂದ ಪರಾರಿಯಾದವರ ಪೈಕಿ...

ಕರ್ನಾಟಕ ಎಸ್ಐಆರ್: ಅಂತಿಮ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರುಗಳು ಹೊರಕ್ಕೆ; ಮತದಾರರ ಸಂಖ್ಯೆ 4.55 ಕೋಟಿಗೆ ಕುಸಿತ: ವರದಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಮಂಗಳವಾರ ಪ್ರಕಟವಾಗಲಿರುವ ಅಂತಿಮ ಪಟ್ಟಿಯಲ್ಲಿ ರಾಜ್ಯದ...

‘ನ್ಯೂಸ್‌ರೂಮ್‌ಗಳೇ ಮುಚ್ಚಿಹೋಗಲಿವೆ’ : ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿಎನ್‌ಪಿಎ; ಕೇಂದ್ರ ಸರ್ಕಾರಕ್ಕೆ ನೋಟಿಸ್

ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ, 2023ರ (DPDP Act) ನಿಬಂಧನೆಗಳನ್ನು ಪ್ರಶ್ನಿಸಿ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA) ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.27) ನೋಟಿಸ್...

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು : ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಕೈಗೊಂಡ...

SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!

ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR)ಗೆ ಸಂಬಂಧಿಸಿದ ಎಲ್ಲಾ ಆದೇಶಗಳು ಸಂಪೂರ್ಣ ಒಮ್ಮತದಿಂದಲೇ ಹೊರಬಂದಿವೆ ಎಂದು ಭಾರತೀಯ...

ಎಸ್‌ಸಿ-ಎಸ್‌ಟಿ ಮತ್ತು ಮುಸ್ಲಿಮರ ಇತಿಹಾಸ, ಸಂಕಟ ಒಂದೇ, ಸಮಸಮಾಜ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಶೋಷಿತ ಸಮುದಾಯಗಳು ಒಂದಾಗಬೇಕಿದೆ: ರಿಜ್ವಾನ್ ಅರ್ಷದ್

ಸಮಾಜದಲ್ಲಿ ತಾರತಮ್ಯ ಮತ್ತು ಶೋಷಣೆಗೆ ಒಳಗಾದ ಸಮುದಾಯಗಳು ಒಗ್ಗಟ್ಟಾಗಿ ನಿಂತಾಗ ಮಾತ್ರ ಸಾಮಾಜಿಕ ನ್ಯಾಯ ಮತ್ತು ಸಮಾನ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್...

ಮಹಾರಾಷ್ಟ್ರ ಎಸ್‌ಐಆರ್‌ನಲ್ಲಿ ಹೆಸರು ಅಳಿಸಿದ ಬಳಿಕ ಮರು ನೋಂದಣಿ: ಮತದಾರರ ವಿರುದ್ಧ ಕ್ರಮವಿಲ್ಲ ಎಂದ ಸುಪ್ರೀಂ ಕೋರ್ಟ್ 

ನವದೆಹಲಿ: ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವೇಳೆ ಹೆಸರುಗಳನ್ನು ಅಳಿಸಿರುವ ಪ್ರಕರಣದಲ್ಲಿ, ಮರು ನೋಂದಣಿಗೆ ಅರ್ಜಿ ಸಲ್ಲಿಸುವ ಮತದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಸುಪ್ರೀಂ...