Homeಮುಖಪುಟಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

- Advertisement -
- Advertisement -

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು.

ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ, ಎನ್‌ಸಿಪಿ ನಾಯಕರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಅಜಿತ್ ಪವಾರ್ ಅವರ ಅಕಾಲಿಕ ನಿಧನದ ಹಿನ್ನೆಲೆ ಶನಿವಾರ ಸಭೆ ಸೇರಿದ ಎನ್‌ಸಿಪಿ ಶಾಸಕರು, ತಮ್ಮ ಶಾಸಕಾಂಗ ಪಕ್ಷದ ಹೊಸ ನಾಯಕಿಯಾಗಿ ಸುನೇತ್ರಾ ಪವಾರ್ ಅವರನ್ನು ಅವಿರೋಧ ಆಯ್ಕೆ ಮಾಡಿದರು.

ದಕ್ಷಿಣ ಮುಂಬೈನ ವಿಧಾನ ಭವನ ಸಂಕೀರ್ಣದ ನೆಲ ಮಹಡಿಯಲ್ಲಿರುವ ದಿವಂಗತ ಅಜಿತ್ ಪವಾರ್ ಅವರ ಕಚೇರಿಯಲ್ಲಿ ನಡೆದ ಪಕ್ಷದ ಶಾಸಕಾಂಗ ವಿಭಾಗದ ಸಭೆಯಲ್ಲಿ ಎನ್‌ಸಿಪಿ ಹಿರಿಯ ನಾಯಕ ದಿಲೀಪ್ ವಾಲ್ಸೆ ಪಾಟೀಲ್ ಅವರು ಸುನೇತ್ರಾ ಅವರ ಹೆಸರನ್ನು ಸೂಚಿಸಿದರು. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಛಗನ್ ಭುಜಬಲ್ ಅವರು ಅನುಮೋದಿಸಿದರು ಎಂದು ವರದಿಯಾಗಿದೆ.

ಸಭೆಯಲ್ಲಿ ಸುನೇತ್ರಾ ಪವಾರ್ ತಮ್ಮ ಪತಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಅವರ ಕಿರಿಯ ಮಗ ಜೈ ಕೂಡ ಹಾಜರಿದ್ದರು. ವಿಧಾನ ಭವನದ ಸಂಕೀರ್ಣಕ್ಕೆ ಆಗಮಿಸಿದಾಗ ಸಚಿವರು ಮತ್ತು ಶಾಸಕರು ತಮ್ಮ ಅಗಲಿದ ನಾಯಕ ಅಜಿತ್ ಪವಾರ್ ಅವರನ್ನು ನೆನೆದು ಭಾವುಕರಾದರು.

2024ರ ಲೋಕಸಭಾ ಚುನಾವಣೆಯವರೆಗೂ ಸುನೇತ್ರಾ ಪವಾರ್ ರಾಜಕೀಯದಿಂದ ದೂರ ಇದ್ದರು. ಮೊದಲ ಬಾರಿಗೆ ಲೋಕಸಭೆಯ ಚುನಾವಣೆಗೆ ಅವರು ಬಾರಾಮತಿಯಿಂದ ಎನ್‌ಸಿಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಅವರ ಅತ್ತಿಗೆ ಎನ್‌ಸಿಪಿ (ಎಸ್‌ಪಿ) ಯ ಸುಪ್ರಿಯಾ ಸುಳೆ ವಿರುದ್ದ ಸೋಲನುಭವಿಸಿದ್ದರು. ಬಳಿಕ ಸುನೇತ್ರಾ ಅವರು ರಾಜ್ಯಸಭೆಗೆ ಆಯ್ಕೆಯಾದರು.

ಸುನೇತ್ರಾ ಪವಾರ್ ಅವರನ್ನು ಪಕ್ಷದ ಶಾಸಕಾಂಗ ನಾಯಕಿಯಾಗಿ ಆಯ್ಕೆ ಮಾಡಿರುವ ಪತ್ರವನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಸಲ್ಲಿಸಲಾಗಿದ್ದು, ಅವರು ಅದನ್ನು ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರವಾನಿಸಿದ್ದಾರೆ ಎಂದು ಎನ್‌ಸಿಪಿ ಕಾರ್ಯಕಾರಿ ಅಧ್ಯಕ್ಷ ಪ್ರಫುಲ್ ಪಟೇಲ್ ತಿಳಿಸಿದ್ದಾರೆ.

ಶಾಸಕಾಂಗ ಪಕ್ಷದ ಸಭೆಯ ನಂತರ, ಎರಡು ಎನ್‌ಸಿಪಿ ಬಣಗಳ ಸಂಭಾವ್ಯ ವಿಲೀನದ ಬಗ್ಗೆ ಪ್ರತಿಕ್ರಿಯಿಸಲು ಪಟೇಲ್ ನಿರಾಕರಿಸಿದರು. ಪಕ್ಷದ ತಕ್ಷಣದ ಆದ್ಯತೆಯೆಂದರೆ ಶಾಸಕಾಂಗ ಪಕ್ಷದ ನಾಯಕಿಯ ಆಯ್ಕೆ ಮತ್ತು ಹೊಸ ಉಪಮುಖ್ಯಮಂತ್ರಿಯ ನೇಮಕ ಎಂದು ಪುನರುಚ್ಚರಿಸಿದರು.

ದೇವೇಂದ್ರ ಫಡ್ನವಿಸ್ ಸರ್ಕಾರದಲ್ಲಿ ಅಜಿತ್ ಪವಾರ್ ಉಪಮುಖ್ಯಮಂತ್ರಿ ಮಾತ್ರವಲ್ಲದೆ ಹಣಕಾಸು, ಯೋಜನೆ ಮತ್ತು ಅಬಕಾರಿ ಸೇರಿದಂತೆ ಪ್ರಮುಖ ಖಾತೆಗಳನ್ನು ಹೊಂದಿದ್ದರು. ಬೀಡ್ ಮತ್ತು ಪುಣೆ ಜಿಲ್ಲೆಗಳ ಉಸ್ತುವಾರಿ ಸಚಿವರಾಗಿದ್ದರು. ಕ್ರೀಡೆ ಮತ್ತು ಯುವಜನ ಕಲ್ಯಾಣ, ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಔಕಾಫ್ (ವಕ್ಫ್) ಇಲಾಖೆಗಳ ಹೆಚ್ಚುವರಿ ಉಸ್ತುವಾರಿಯನ್ನು ಹೊಂದಿದ್ದರು. ಸುನೇತ್ರಾ ಪವಾರ್ ಅವರಿಗೆ ಹಂಚಿಕೆಯಾಗಬೇಕಾದ ಖಾತೆಗಳ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ.

ಎನ್‌ಸಿಪಿ (ಎಸ್‌ಪಿ) ಜೊತೆಗಿನ ವಿಲೀನದ ಬಗ್ಗೆ ಯಾವುದೇ ನಿರ್ಧಾರವನ್ನು ಸುನೇತ್ರಾ ಪವಾರ್ ತೆಗೆದುಕೊಳ್ಳುತ್ತಾರೆ ಎಂದು ಹಿರಿಯ ಎನ್‌ಸಿಪಿ ನಾಯಕ ಛಗನ್ ಭುಜಬಲ್ ಹೇಳಿದ್ದಾರೆ. “ಇಂದು ನಮ್ಮ ಕೆಲಸ ಹೊಸ ನಾಯಕಿಯನ್ನು ಆಯ್ಕೆ ಮಾಡುವುದಾಗಿತ್ತು. ಹಾಗಾಗಿ, ಆ ವಿಷಯದ ಬಗ್ಗೆ ಮಾತ್ರ ಶಾಸಕರು ಗಮನಹರಿಸಿದ್ದಾರೆ. ವಿಲೀನದ ಬಗ್ಗೆ ಪಕ್ಷದ ನಾಯಕತ್ವವೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಎನ್‌ಸಿಪಿ ಶಾಸಕ ಸಂಗ್ರಾಮ್ ಜಗತಾಪ್ ಹೇಳಿದ್ದಾರೆ.

ಈ ನಡುವೆ ಶಿವಸೇನೆ (ಯುಬಿಟಿ) ವಕ್ತಾರ ಆನಂದ್ ದುಬೆ ಅವರು ಉಪಮುಖ್ಯಮಂತ್ರಿ ಹುದ್ದೆಯನ್ನು ಭರ್ತಿ ಮಾಡುವ ತುರ್ತು ಅಗತ್ಯವನ್ನು ಪ್ರಶ್ನಿಸಿದ್ದು, ಈ ಆತುರವು ರಾಜ್ಯದಲ್ಲಿ ನೈತಿಕ ಮತ್ತು ರಾಜಕೀಯ ಕಳವಳಗಳನ್ನು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿರುವ ದುಬೆ, ಹಿರಿಯ ನಾಯಕ ಶರದ್ ಪವಾರ್ ಅವರಿಗೂ ಈ ನಿರ್ಧಾರದ ಬಗ್ಗೆ ತಿಳಿದಿಲ್ಲ. ಹಾಗಾದರೆ ಇಲ್ಲಿ ಏನು ನಡೆಯುತ್ತಿದೆ? ಈ ಆತುರಕ್ಕೆ ಕಾರಣವೇನು? ಮಹಾರಾಷ್ಟ್ರಕ್ಕೆ ಈ ವಿಷಯದಲ್ಲಿ ಖುಷಿಯಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...