Homeಮುಖಪುಟ’ಅಜಿತ್ ಪವಾರ್‌ ಬೆನ್ನಿಗೆ ಇರಿದಿದ್ದಾರೆ’: ಶಿವಸೇನೆಯ ಸಂಜಯ್ ರಾವತ್ ಕಿಡಿ

’ಅಜಿತ್ ಪವಾರ್‌ ಬೆನ್ನಿಗೆ ಇರಿದಿದ್ದಾರೆ’: ಶಿವಸೇನೆಯ ಸಂಜಯ್ ರಾವತ್ ಕಿಡಿ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಬಿಜೆಪಿಯ ದೇವೇಂದ್ರ ಫಡ್ನವೀಸ್‌ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಶಿವಸೇನೆ ವಕ್ತಾರ ಸಂಜಯ್ ರಾವತ್‌ ಸುದ್ದಿಗೋಷ್ಠಿ ನಡೆಸಿ, ಎನ್‌ಸಿಪಿಯ ಅಜಿತ್ ಪವಾರ್ ವಿರುದ್ಧ ಕಿಡಿಕಾರಿದರು.

ಬಿಜೆಪಿ ಜತೆ ಎನ್‌ಸಿಪಿ ಮೈತ್ರಿ ಮಾಡಿಕೊಂಡು ಡಿಸಿಎಂ ಹುದ್ದೆಗೇರಿರುವ ಅಜಿತ್ ಪವಾರ್‌ ಜತೆಗೆ ಇದ್ದುಕೊಂಡೇ ಬೆನ್ನಿಗೆ ಇರಿದಿದ್ದಾರೆ ಎಂದು ಸಂಜಯ್ ರಾವತ್ ಹರಿಹಾಯ್ದರು. ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್‌ ಮೈತ್ರಿ ಸರ್ಕಾರ ರಚನೆ ಕುರಿತು ನಡೆದಿದ್ದ ನಿರ್ಣಾಯಕ ಸಭೆಯಲ್ಲಿ ಎನ್‌ಸಿಪಿಯ ಶರದ್‌ ಪವಾರ್‌ ಕೂಡ ಭಾಗಿಯಾಗಿದ್ದರು. ಆದರೆ ಅಜಿತ್ ಪವಾರ್ ಮಹಾರಾಷ್ಟ್ರ ಜನತೆಯ ಕಣ್ಣಿಗೆ ಮಣ್ಣೆರಚಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿನ್ನೆ ಸಂಜೆಯವರೆಗೆ ಎಲ್ಲವೂ ಚೆನ್ನಾಗಿತ್ತು. ಆದರೆ ಇದ್ದಕ್ಕಿದ್ದಂತೆ ಎನ್‌ಸಿಪಿಯ ಅಜಿತ್ ಪವಾರ್ ಮೊಬೈಲ್‌ ಸ್ವಿಚ್ಛ್‌ ಆಫ್‌ ಮಾಡಿಕೊಂಡಿದ್ದರು. ತಡರಾತ್ರಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸ್ವತಃ ಎನ್‌ಸಿಪಿ ನಾಯಕರಿಗೂ ಸಹ ಯಾವುದೇ ಮಾಹಿತಿಯಿಲ್ಲ. ಏನಾಗಿದೆ, ಏನಾಗುತ್ತಿದೆ ಎಂಬ ಬಗ್ಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಎನ್‌ಸಿಪಿ ಮೈತ್ರಿ: ಇದರಲ್ಲಿ ನನ್ನ ಪಾತ್ರವಿಲ್ಲ ಎಂದ ಶರದ್ ಪವಾರ್‌

ಇದೆಲ್ಲಾ ಅಜಿತ್ ಪವಾರ್ ಮಾಡಿರುವ ಗೇಮ್ ಪ್ಲಾನ್‌. ಅಜಿತ್ ಪವಾರ್‌ ನಿರ್ಧಾರಕ್ಕೂ ಶರದ್ ಪವಾರ್‌ಗೂ ಯಾವುದೇ ಸಂಬಂಧವಿಲ್ಲ. ಅಜಿತ್ ಪವಾರ್ ಮಾಡಿದ್ದನ್ನು ಛತ್ರಪತಿ ಶಿವಾಜಿ ಮತ್ತು ಮಹಾರಾಷ್ಟ್ರದ ಜನರು ಎಂದಿಗೂ ಕ್ಷಮಿಸುವುದಿಲ್ಲ ಎಂದು ರಾವತ್‌ ಹರಿಹಾಯ್ದರು.

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಅವರನ್ನು ಭೇಟಿಯಾಗಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ನಾಡಾ’ದಿಂದ ಕುಸ್ತಿಪಟು ಬಜರಂಗ್ ಪುನಿಯಾ ಅಮಾನತು: ವರದಿ

0
ಡೋಪಿಂಗ್ ಪರೀಕ್ಷೆ (ಮಾದಕವಸ್ತು ಪತ್ತೆ ಪರೀಕ್ಷೆ)ಗೆ ಸರಿಯಾದ ಸಮಯಕ್ಕೆ ಮೂತ್ರದ ಮಾದರಿಯನ್ನು ನೀಡದ ಆರೋಪದ ಮೇಲೆ ಒಲಿಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ...