Homeಮುಖಪುಟಅಜಿತ್‌ ಬಣವನ್ನು ಟೀಕಿಸಿದ ಆರೆಸ್ಸೆಸ್‌ ಮುಖವಾಣಿ: ಮತ್ತಷ್ಟು ಹಳಸಿದ ಅಜಿತ್-ಎನ್‌ಡಿಎ ಸಂಬಂಧ

ಅಜಿತ್‌ ಬಣವನ್ನು ಟೀಕಿಸಿದ ಆರೆಸ್ಸೆಸ್‌ ಮುಖವಾಣಿ: ಮತ್ತಷ್ಟು ಹಳಸಿದ ಅಜಿತ್-ಎನ್‌ಡಿಎ ಸಂಬಂಧ

- Advertisement -
- Advertisement -

ಅಜಿತ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ) ಬಿಜೆಪಿ-ಶಿವಸೇನೆ(ಶಿಂಧೆ) ಸರ್ಕಾರಕ್ಕೆ ಸೇರಿಸಿಕೊಂಡಿರುವುದು ಅಪ್ರಜ್ಞಾಪೂರ್ವಕ ಮತ್ತು ಅವಿವೇಕದ ಕ್ರಮ ಎಂದು ಆರೆಸ್ಸೆಸ್‌ ಮುಖವಾಣಿ ಆರ್ಗನೈಸರ್‌ನ ಇತ್ತೀಚಿನ ಆವೃತ್ತಿಯಲ್ಲಿ ಹೇಳಲಾಗಿದೆ. ಇದರಿಂದ ಕ್ಯಾಬಿನೆಟ್‌ ದರ್ಜೆಯ ಸಚಿವ ಸ್ಥಾನ ಸಿಗದೆ ಮುಣಿಸಿನಲ್ಲಿರುವ ಅಜಿತ್‌ ಬಣ ಮತ್ತು ಎನ್‌ಡಿಎ ನಡುವಿನ ಸಂಬಂಧ ಮತ್ತಷ್ಟು ಹಳಸಲು ಕಾರಣವಾಗಿದೆ.

ಲೋಕಸಭೆ ಚುನಾವಣಾ ಪ್ರಚಾರದಲ್ಲಿ ರಾಜಕೀಯ ಸೌಜನ್ಯದ ಕೊರತೆಯ ಬಗ್ಗೆ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿದೆ.

ಸ್ಥಳೀಯ ನಾಯಕತ್ವವನ್ನು ಕಡೆಗಣಿಸಿ ತ್ಯಾಗಿಗಳಂತೆ ಸೋಗು ಹಾಕಿದವರಿಗೆ ಹಲವು ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದೆ ಎಂದು ಅಂಕಣಕಾರ ಮತ್ತು ಆರೆಸ್ಸೆಸ್ ಸದಸ್ಯ ರತನ್ ಶರ್ದಾ ಅವರ ಲೇಖನದಲ್ಲಿ ಪ್ರತಿಪಾದಿಸಿದ್ದು, ತಡವಾಗಿ ಬಂದವರಿಗೆ ಅವಕಾಶ ಕಲ್ಪಿಸಲು ಉತ್ತಮವಾಗಿ ಕಾರ್ಯನಿರ್ವಹಿಸುವ ಸಂಸದರನ್ನು ನಿರ್ಲಕ್ಷಿಸಲಾಗಿದೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರವು ಅನವಶ್ಯಕ ರಾಜಕೀಯ ಮತ್ತು ತಪ್ಪಿಸಬಹುದಾದ ಕುತಂತ್ರಗಳಿಗೆ ಒಂದು ಪ್ರಮುಖ ಉದಾಹರಣೆಯಾಗಿದೆ. ಅನಗತ್ಯ ರಾಜಕಿಯ ಮತ್ತು ತಪ್ಪಿಸಬಹುದಾಗಿದ್ದ ಪರಿವರ್ತನೆಗೆ ಮಹಾರಾಷ್ಟ್ರ ಉತ್ತಮ ಉದಾಹರಣೆ. ಬಿಜೆಪಿ ಹಾಗೂ ಶಿವಸೇನೆ ಬಣ ಬಹುಮತ ಹೊಂದಿದ್ದರೂ, ಅಜಿತ್ ಪವಾರ್ ಬಣವನ್ನು ಸೇರಿಸಿಕೊಳ್ಳಲಾಗಿದೆ. ಎನ್ಸಿಪಿ ಆಂತರಿಕ ಕಚ್ಚಾಟದಿಂದ ಶಕ್ತಿಗುಂದುತ್ತಿತ್ತು. ಈ ಅವಿವೇಕದ ಹೆಜ್ಜೆಯನ್ನು ಯಾಕೆ ಇಡಲಾಗಿದೆ? ಕಾಂಗ್ರೆಸ್ ಸಿದ್ಧಾಂತದ ವಿರುದ್ಧ ಹಲವು ವರ್ಷ ಹೋರಾಡಿದ ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸಲಾಯಿತು. ಒಂದೇ ಹೊಡೆತದಲ್ಲಿ ಬಿಜೆಪಿ ತನ್ನ ಬ್ರಾಂಡ್ ಮೌಲ್ಯ ಕಳೆದುಕೊಂಡಿದೆ ಎಂದು ಲೇಖನದಲ್ಲಿ ಹೇಳಲಾಗಿದೆ.

ಅಜಿತ್ ನೇತೃತ್ವದ ಎನ್‌ಸಿಪಿ ಈ ಲೇಖನಕ್ಕೆ ಕಟುವಾಗಿ ಪ್ರತಿಕ್ರಿಯಿಸಿದೆ. ‘ಆರ್ಗನೈಸರ್‌’ ಆರೆಸ್ಸೆಸ್‌ನ ಅಧಿಕೃತ ಮುಖವಾಣಿಯಲ್ಲ, ಅದು ಆರೆಸ್ಸೆಸ್‌ ಸಿದ್ಧಾಂತವನ್ನು ಪ್ರತಿಬಿಂಬಿಸುವುದಿಲ್ಲ. ಬಿಜೆಪಿಯ ಉನ್ನತ ಪದಾಧಿಕಾರಿಗಳು ಯಾರು ಲೇಖನವನ್ನು ಬರೆದರೂ ಅದನ್ನು ಒಪ್ಪುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಒಬ್ಬರು ವೈಫಲ್ಯಕ್ಕೆ ವಿವಿಧ ಕಾರಣಗಳನ್ನು ಹುಡುಕುತ್ತಲೇ ಇರುತ್ತಾರೆ. ಪಕ್ಷಗಳು ಪರಸ್ಪರ ವಿರುದ್ಧವಾಗಿದ್ದಾಗ ಅವರು ತಪ್ಪುಗಳನ್ನು ಕಂಡುಕೊಳ್ಳುತ್ತಾರೆ ಮತ್ತು ರಾಜಕೀಯದಲ್ಲಿ ಆರೋಪಗಳನ್ನು ಮಾಡುವುದು ಸಹಜ, ಎಲ್ಲವು ಅಂತಿಮ ಫಲಿತಾಂಶಗಳ ಮೇಲೆ ಅವಲಂಬಿತವಾಗಿದೆ ಎಂದು ಉನ್ಮೇಶ್ ಪಾಟೀಲ್ ಹೇಳಿದ್ದಾರೆ.

ಇದನ್ನು ಓದಿ: ಜೈಪುರ: ಹಿಂದೂಯೇತರರಿಗೆ ಮನೆಗಳನ್ನು ಮಾರಾಟ ಮಾಡದಂತೆ ಪೋಸ್ಟರ್ ಹಾಕಿದ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...