Homeಮುಖಪುಟಮೋದಿಗೆ ಕ್ಲಾಸ್; ಪತ್ರಕರ್ತನನ್ನು ವಜಾಗೊಳಿಸಿದ ಆಜ್‌ತಕ್!

ಮೋದಿಗೆ ಕ್ಲಾಸ್; ಪತ್ರಕರ್ತನನ್ನು ವಜಾಗೊಳಿಸಿದ ಆಜ್‌ತಕ್!

- Advertisement -
- Advertisement -

ಪ್ರಧಾನಿ ಮೋದಿಯನ್ನು ಟೀಕಿಸಿದ್ದಕ್ಕೆ ತನ್ನನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಆಜ್‌ತಕ್‌ ಪತ್ರಕರ್ತ ಶ್ಯಾಮ್ ಮೀರಾ ಸಿಂಗ್ ಸೋಮವಾರ ಆರೋಪಿಸಿದ್ದಾರೆ. ಅವರು ಜುಲೈ 17 ರಂದು ತಮ್ಮ ಟ್ವಿಟರ್‌‌ ಖಾತೆಯಲ್ಲಿ ಮೋದಿ ನಾಚಿಕೆಯಿಲ್ಲದ ಪ್ರಧಾನಿ ಎಂದು ಟ್ವೀಟ್‌ ಮಾಡಿದ್ದರು.

ಪ್ರಧಾನಿ ಮೋದಿಯವರ ವಿರುದ್ದ ಈ ಎರಡು ಟ್ವೀಟ್‌ಗಳನ್ನು ಬರೆದಿದ್ದಕ್ಕಾಗಿ ನನ್ನ ಚಾನೆಲ್ ಆಜ್‌ತಕ್‌ನಿಂದ ನನ್ನನ್ನು ವಜಾಗೊಳಿಸಲಾಗಿದೆ ಎಂದು ಶ್ಯಾಮ್‌ ಸಿಂಗ್‌‌ ಇಂದು ಟ್ವೀಟ್ ಮಾಡಿದ್ದಾರೆ. ಟ್ವೀಟ್‌ನಲ್ಲಿ ಅವರು ಕಂಪೆನಿಯ ಪತ್ರ ಮತ್ತು ತಾನು ಮೋದಿ ವಿರುದ್ದ ಬರೆದಿದ್ದ ಎರಡು ಟ್ವೀಟ್‌ಗಳ ಚಿತ್ರ ಸಹಿತ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಪ್ರಾಜೆಕ್ಟ್: ಶೀಘ್ರದಲ್ಲೇ ನ್ಯಾಯಾಧೀಶರ ಹೆಸರು ಬಹಿರಂಗ!

ಶ್ಯಾಮ್‌ ಸಿಂಗ್ ಅವರು ಜುಲೈ 17 ರಂದು ಅಫ್ಘಾನ್‌ನಲ್ಲಿ ಹತರಾಗಿದ್ದ ಖ್ಯಾತ ಪತ್ರಕರ್ತ ದ್ಯಾನಿಶ್ ಸಿದ್ದೀಕಿ ಅವರಿಗೆ ಪ್ರಧಾನಿ ಮೋದಿ ಶ್ರದ್ದಾಂಜಲಿ ಕೋರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿ, ಅವರ ಸಂಸ್ಥೆಗೆ ಟ್ಯಾಗ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಅವರು, “ನಾನು ಟ್ವಿಟ್ಟರ್‌ನಲ್ಲಿ ಏನಾದರು ಬರೆದರೆ, ಕೆಲವರು ನನ್ನ ಕಂಪನಿಯನ್ನು ಟ್ಯಾಗ್ ಮಾಡುತ್ತಾರೆ. ಟ್ಯಾಗ್ ಮಾಡಿ ಇವರನ್ನು ಕೆಲಸದಿಂದ ತೆಗೆದುಹಾಕಿ ಎಂದು ಹೇಳುತ್ತಾರೆ. ಮುಂದಿನ ಟ್ವೀಟ್ ಅನ್ನು ನಾನು ಹೆಚ್ಚು ತೀವ್ರವಾಗಿ ಬರೆಯುತ್ತೇನೆ. ಆದರೆ ನಾನು ಅದನ್ನು ಬರೆಯುವುದರಿಂದ ಹಿಂದೆ ಸರಿಯುವುದಿಲ್ಲ, ಮೋದಿ ಒಬ್ಬ ನಾಚಿಕೆಯಿಲ್ಲದ ಪ್ರಧಾನಿ” ಎಂದು ಬರೆದಿದ್ದರು.

ಇದನ್ನೂ ಓದಿ: ಹೋರಾಟಗಾರನ ಫೇಸ್‌ಬುಕ್ ಪೋಸ್ಟ್‌ಗೆ NSA ಪ್ರಕರಣ: ಸಂಜೆಯೊಳಗೆ ಬಿಡುಗಡೆಗೊಳಿಸಿ ಎಂದ ಸುಪ್ರೀಂ

ಈ ಟ್ವಿಟ್‌ಗೂ ಕೆಲವರು ಆಕ್ಷೇಪ ವ್ಯಕ್ತಪಡಿಸಿ ಪ್ರಧಾನಿಗೆ ಗೌರವ ನೀಡುವಂತೆ ಸಲಹೆ ನೀಡಿದ್ದರು. ಅದಕ್ಕೆ ಮತ್ತೆ ಟ್ವೀಟ್‌ನಲ್ಲೆ ಉತ್ತರಿಸಿದ್ದ ಅವರು, “ಪ್ರಧಾನಮಂತ್ರಿಯನ್ನು ಗೌರವಿಸಿ ಎಂದು ಯಾರು ಹೇಳುತ್ತಾರೋ, ಅವರು ಮೊದಲು ಮೋದಿಯನ್ನು ಪ್ರಧಾನಿ ಹುದ್ದೆಗೆ ಗೌರವ ನೀಡುವಂತೆ ಕೇಳಿ” ಎಂದು ಹೇಳಿದ್ದರು.

ಇದೀಗ ತನ್ನ ಈ ಎರಡು ಟ್ವೀಟ್‌ಗಳನ್ನು ಉಲ್ಲೇಖಿಸಿ ಕೆಲಸದಿಂದ ವಜಾಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಆದರೆ, “ತಾನು ಮತ್ತೆ ಮತ್ತೆ ಪುನರುಚ್ಚರಿಸಲು ಬಯಸುತ್ತೇನೆ. ಹೌದು! ಮೋದಿ ನಾಚಿಕೆಯಿಲ್ಲದ ಪ್ರಧಾನಿ” ಎಂದು ಅವರು ತಮ್ಮ ಮಾತನ್ನು ಪುನರುಚ್ಚರಿಸಿದ್ದಾರೆ.

“ಜನರು ತಮ್ಮ ಪದವಿ, ಸಂಶೋಧನಾ ಪ್ರಬಂಧಗಳನ್ನು ತಮ್ಮ ಆದರ್ಶ ವ್ಯಕ್ತಿಗಳಿಗೆ ಅರ್ಪಿಸುತ್ತಾರೆ. ನನ್ನ ಕಂಪನಿ ಇಂಡಿಯಾ ಟುಡೇಯ ವಜಾ ಪತ್ರವನ್ನು ಹೊರತುಪಡಿಸಿ ನನಗೆ ತೋರಿಸಲು ಏನೂ ಇಲ್ಲ. ಹಾಗಾಗಿ ಅಫ್ಘಾನಿಸ್ತಾನದಲ್ಲಿ ಹುತಾತ್ಮರಾದ ನನ್ನ ಪ್ರೀತಿಯ ಸ್ನೇಹಿತ ದ್ಯಾನಿಶ್ ಸಿದ್ದಿಕಿ ಅವರಿಗೆ ನನ್ನ ವಜಾ ಪತ್ರವನ್ನು ಅರ್ಪಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ.

ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತರಾಗಿದ್ದರು. ವಿಶ್ವ ಪ್ರಸಿದ್ದ ಫೋಟೊ ಜರ್ನಲಿಸ್ಟ್‌ ಆಗಿದ್ದ ಅವರು 2018 ರಲ್ಲಿ ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟನ್ನು ದಾಖಲಿಸಿದ್ದ ಫೀಚರ್‌ ಫೋಟೊಗ್ರಾಫ್‌ಗಾಗಿ ಪ್ರತಿಷ್ಠಿತ ಪುಲಿಟ್ಜೆರ್ ಪ್ರಶಸ್ತಿಯನ್ನು ಪಡೆದಿದ್ದರು.

ಇದನ್ನೂ ಓದಿ: ದಿಟ್ಟ ಪತ್ರಕರ್ತ ದಾನಿಶ್ ಸಿದ್ದೀಕಿ ಹತ್ಯೆಗೆ ಪಿಎಂ ಮೋದಿ ಸಂತಾಪ ಸೂಚಿಸಲಿಲ್ಲವೇಕೆ?

ದಾನಿಶ್ ಅವರು, ಅಫ್ಘಾನಿಸ್ತಾನ ಮತ್ತು ಇರಾಕ್ ಯುದ್ಧಗಳು, ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟು, ಹಾಂಗ್ ಕಾಂಗ್ ಪ್ರತಿಭಟನೆಗಳು, ನೇಪಾಳ ಭೂಕಂಪಗಳು, ಉತ್ತರ ಕೊರಿಯಾದಲ್ಲಿ ನಡೆದ ಕ್ರೀಡಾಕೂಟಗಳ ವರದಿಗಳ ಸಹಿತ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪಿನ ವರದಿಗಳನ್ನು ಮಾಡಿದ್ದರು.

ಖ್ಯಾತ ಫೋಟೋ ಜರ್ನಲಿಸ್ಟ್‌ ಆಗಿದ್ದ ದ್ಯಾನಿಶ್‌ ನಿಧನಕ್ಕೆ ವಿಶ್ವಸಂಸ್ಥೆ ಮತ್ತು ಅಮೆರಿಕಾದ ಜೊ ಬಿಡೆನ್‌ ಆಡಳಿತ ಸಹಿತ ವಿಶ್ವದಾದ್ಯಂತ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದರು. ಆದರೆ ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿರಲಿಲ್ಲ.

ಕಳೆದ ವರ್ಷ ದೇಶದಲ್ಲಿ ಕೊರೊನಾ ಪತ್ತೆಯಾದಾಗ, ಯಾವುದೆ ಪೂರ್ವ ತಯಾರಿ ಇಲ್ಲದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಅವೈಜ್ಞಾನಿಕ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು ಪಟ್ಟ ಬವಣೆಗೆಗಳು, ಕೊರೊನಾ ಎರಡನೆ ಅಲೆಯ ಸಮಯದಲ್ಲಿ ದೇಶದ ಸ್ಮಶಾನದಲ್ಲಿನ ಚಿತ್ರಣಗಳನ್ನು ಅವರು ಸಮರ್ಪಕವಾಗಿ ಸೆರೆ ಹಿಡಿದು ಜನರ ಮುಂದೆ ಇಟ್ಟಿದ್ದರು. ಅಷ್ಟೇ ಅಲ್ಲದೆ CAA-NRC-NPR ವಿರೋಧಿ ಹೋರಾಟದ ಸಮಯದಲ್ಲಿ ನಡೆದ ಘಟನೆಗಳು ಹಾಗೂ ದೆಹಲಿ ಗಲಭೆಯ ಕ್ರೂರ ಚಿತ್ರಗಳನ್ನು ಅವರು ಸೆರೆ ಹಿಡಿದಿದ್ದರು.

ಇದನ್ನೂ ಓದಿ: ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...