Homeಮುಖಪುಟಎಸ್ಪಿ-ಕಾಂಗ್ರೆಸ್‌ ಸೀಟು ಹಂಚಿಕೆ ಘೋಷಿಸಿದ ಅಖಿಲೇಶ್‌: ಕಾಂಗ್ರೆಸ್ ಅಸಮ್ಮತಿ!

ಎಸ್ಪಿ-ಕಾಂಗ್ರೆಸ್‌ ಸೀಟು ಹಂಚಿಕೆ ಘೋಷಿಸಿದ ಅಖಿಲೇಶ್‌: ಕಾಂಗ್ರೆಸ್ ಅಸಮ್ಮತಿ!

- Advertisement -
- Advertisement -

ಬಿಹಾರ ಮತ್ತು ಪ.ಬಂಗಾಳದಲ್ಲಿ INDIA ಮೈತ್ರಿಯಲ್ಲಿ ಬಿರುಕು ಮೂಡಿರುವ ಬೆನ್ನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರು ಕಾಂಗ್ರೆಸ್ ಜೊತೆಗಿನ ತಮ್ಮ ಪಕ್ಷದ ಮೈತ್ರಿಯು ರಾಜ್ಯದಲ್ಲಿ 11 ಲೋಕಸಭಾ ಸ್ಥಾನಗಳೊಂದಿಗೆ ಆರಂಭವಾಗಿದೆ ಎಂದು ಹೇಳಿಕೊಂಡಿದೆ. ಆದರೆ ಇಂಡಿಯಾ ಟುಡೇ ವರದಿ ಪ್ರಕಾರ ಇದಕ್ಕೆ ಕಾಂಗ್ರೆಸ್‌ ಅಸಮ್ಮತಿಸಿದೆ ಎಂದು ಹೇಳಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಜತೆಗೆ ತಮ್ಮ ಪಕ್ಷವು ಮೈತ್ರಿ ಮಾಡಿಕೊಂಡಿರುವುದು ‘ಉತ್ತಮ ಬೆಳವಣಿಗೆ‘ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಅಖಿಲೇಶ್‌ ಯಾದವ್‌ ಹೇಳಿದ್ದಾರೆ. ಬಿಹಾರ ಸಿಎಂ ಮತ್ತು ಜನತಾ ದಳ (ಯುನೈಟೆಡ್) ಅಧ್ಯಕ್ಷ ನಿತೀಶ್ ಕುಮಾರ್ ಅವರು ಮಹಾಘಟಬಂಧನ್ ಸರ್ಕಾರವನ್ನು ಉರುಳಿಸಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎಗೆ ಮರಳಬಹುದು ಎಂಬ ಊಹಾಪೋಹಗಳು ಹರಡಿರುವ ಮಧ್ಯೆ ಅಖಿಲೇಶ್ ಅವರು ಹೇಳಿಕೆಯನ್ನು ನೀಡಿದ್ದಾರೆ.

ಕಾಂಗ್ರೆಸ್ ಜೊತೆಗಿನ ನಮ್ಮ ಸೌಹಾರ್ದಯುತ ಮೈತ್ರಿಯು 11 ಪ್ರಬಲ ಸ್ಥಾನಗಳ ಮೈತ್ರಿಯೊಂದಿಗೆ ಉತ್ತಮ ಆರಂಭವಾಗಿದೆ. ಈ ಮೈತ್ರಿಯು ಗೆಲುವಿನ ಸಮೀಕರಣದೊಂದಿಗೆ ಮುಂದುವರಿಯುತ್ತದೆ. INDIA ತಂಡ ಮತ್ತು ‘ಪಿಡಿಎ’ ತಂತ್ರಗಾರಿಕೆ ಇತಿಹಾಸವನ್ನು ಬದಲಾಯಿಸಲಿದೆ ಎಂದು ಅಖಿಲೇಶ್‌ ಯಾದವ್ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಹೇಳಿದ್ದಾರೆ.

ಮೂಲಗಳ ಪ್ರಕಾರ, ರಾಜ್ಯದ ಕಾಂಗ್ರೆಸ್ ನಾಯಕತ್ವವು ಈ ಒಪ್ಪಂದವನ್ನು ಒಪ್ಪಿಕೊಂಡಿಲ್ಲ, ನಿರ್ಧಾರವು ಅಖಿಲೇಶ್ ಯಾದವ್ ಅವರದ್ದು, ಕಾಂಗ್ರೆಸ್‌ನದ್ದಲ್ಲ ಎಂದು ಹೇಳಿದೆ.

ಉತ್ತರಪ್ರದೇಶವು 80 ಲೋಕಸಭಾ ಸ್ಥಾನಗಳನ್ನು ಹೊಂದಿದೆ, ಇದು ದೇಶದಲ್ಲೇ ಅತಿ ಹೆಚ್ಚು ಸಂಸತ್‌ ಸ್ಥಾನಗಳನ್ನು ಹೊಂದಿರುವ ರಾಜ್ಯವಾಗಿದೆ. 2019ರ ಚುನಾವಣೆಯಲ್ಲಿ, ಬಿಜೆಪಿ ಮತ್ತು ಅದರ ಮಿತ್ರ ಪಕ್ಷವಾದ ಅಪ್ನಾದಳ(ಎಸ್) 80 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಗೆದ್ದಿದ್ದರೆ, ಎಸ್‌ಪಿ-ಬಿಎಸ್‌ಪಿ ಮೈತ್ರಿಕೂಟ 15 ಸ್ಥಾನಗಳನ್ನು ಗೆದ್ದುಕೊಂಡಿದೆ ಮತ್ತು ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು.

ಲೋಕಸಭೆ ಚುನಾವಣೆಯಲ್ಲಿ 50 ಸ್ಥಾನಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಚಿಂತಿಸಿದೆ ಎಂದು ಪಕ್ಷದ ಮೂಲಗಳು ಈ ಹಿಂದೆ ತಿಳಿಸಿದ್ದವು. 11 ಸ್ಥಾನಗಳ ಮೈತ್ರಿಯನ್ನು ತಿರಸ್ಕರಿಸಿದ ಕಾಂಗ್ರೆಸ್ ನಾಯಕರ ವರದಿಗಳ ನಂತರ, ಸಮಾಜವಾದಿ ಪಕ್ಷವು ಸ್ಪಷ್ಟೀಕರಣವನ್ನು ನೀಡಿದೆ. ಇದು ಪ್ರಸ್ತಾಪವಾಗಿದೆ ಮತ್ತು ಹೆಚ್ಚು ಸ್ಥಾನಗಳನ್ನು ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ಕಾಂಗ್ರೆಸ್ ಅಖಿಲೇಶ್ ಯಾದವ್ ಅವರಿಗೆ ತಿಳಿಸಿದರೆ ಅದನ್ನು ಹೆಚ್ಚಿಸಬಹುದು ಎಂದು ಹೇಳಿಕೊಂಡಿದೆ.

ಶುಕ್ರವಾರ ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಅಖಿಲೇಶ್ ಯಾದವ್ ಅವರು INDIA ಬಣದಲ್ಲಿ ನಡೆಯುತ್ತಿರುವ ಬಿರುಕುಗಳಿಗೆ ಕಾಂಗ್ರೆಸ್‌ನ್ನು ದೂಷಿಸಿದ್ದಾರೆ ಮತ್ತು ಮೈತ್ರಿ ಪಾಲುದಾರರೊಂದಿಗೆ ಚರ್ಚಿಸಲು ಮತ್ತು ತೊಡಗಿಸಿಕೊಳ್ಳಲು ಪಕ್ಷವು ಉತ್ಸಾಹ ತೋರುತ್ತಿಲ್ಲ ಎಂದು ಹೇಳಿದ್ದರು.

ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡ ನಂತರ ತಮ್ಮ ಮಾಜಿ ಬದ್ಧ ಎದುರಾಳಿ ಲಾಲು ಪ್ರಸಾದ್ ಸ್ಥಾಪಿಸಿದ ರಾಷ್ಟ್ರೀಯ ಜನತಾ ದಳದೊಂದಿಗೆ ಮೈತ್ರಿ ಮಾಡಿಕೊಂಡಿದ್ದರು. ಬಿಹಾರದ ಸುದೀರ್ಘ ಅವಧಿಯ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಬಿಜೆಪಿಯನ್ನು ಎದುರಿಸಲು ದೇಶಾದ್ಯಂತ ಎಲ್ಲಾ ಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನವನ್ನು ಕೈಗೊಂಡಿದ್ದರು. ಲೋಕಸಭಾ ಚುನಾವಣೆ ಬಳಿಕ ಮುಖ್ಯಮಂತ್ರಿ ಸ್ಥಾನವನ್ನು ನಿತೀಶ್‌ ಅವರು ತೇಜಸ್ವಿ ಅವರಿಗೆ ಬಿಟ್ಟುಕೊಡಬೇಕು ಎಂದು ಈ ಹಿಂದೆ ಮಾತುಕತೆ ಆಗಿತ್ತು ಎನ್ನಲಾಗಿದೆ. ಅದಕ್ಕೆ ಮತ್ತೆ ಎನ್‌ಡಿಎ ಜೊತೆ ಹೋಗುತ್ತಾರೆ ಎನ್ನಲಾಗಿದೆ. ಅಲ್ಲದೆ ‘ಇಂಡಿಯಾ’ ಮೈತ್ರಿಕೂಟದ ಸಂಚಾಲಕ ಸ್ಥಾನ ಸೇರಿದಂತೆ ಇತರ ವಿಷಯಗಳಿಂದಾಗಿ ನಿತೀಶ್‌ ಮುನಿಸಿಕೊಂಡಿರಬಹುದು ಎಂದೂ ಕಾಂಗ್ರೆಸ್‌ ಮೂಲಗಳು ಹೇಳುತ್ತಿದೆ.

ಇದನ್ನು ಓದಿ: ಮೋದಿ, ಕೇಂದ್ರ ಸರ್ಕಾರವನ್ನು ಟೀಕಿಸಿ ಕಿರುನಾಟಕ ಪ್ರದರ್ಶನ: ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...