Homeಮುಖಪುಟಇವಿಎಂ ಜನರ ಮನಸ್ಸಿನಲ್ಲಿ ಅಪನಂಬಿಕೆ ಸೃಷ್ಟಿಸಿದೆ: ಅಖಿಲೇಶ್ ಯಾದವ್

ಇವಿಎಂ ಜನರ ಮನಸ್ಸಿನಲ್ಲಿ ಅಪನಂಬಿಕೆ ಸೃಷ್ಟಿಸಿದೆ: ಅಖಿಲೇಶ್ ಯಾದವ್

- Advertisement -
- Advertisement -

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್‌ ಬಳಕೆಗೆ ಆಗ್ರಹಿಸಿದ್ದು, ಇವಿಎಂಗಳನ್ನು ನೇರವಾಗಿ ಉಲ್ಲೇಖಿಸದೆ ಈ ಯಂತ್ರಗಳು ಮತ್ತು ಮತದಾನದ ಫಲಿತಾಂಶಗಳು ಜನರ ಮನಸ್ಸಿನಲ್ಲಿ ಅಪನಂಬಿಕೆಯ ಭಾವನೆಯನ್ನು ಮೂಡಿಸಿವೆ ಎಂದು ಹೇಳಿದ್ದಾರೆ.

ಅಮೆರಿಕ ಚುನಾವಣೆಯ ಬಗ್ಗೆ ಉದಾಹರಣೆಯನ್ನು ನೀಡಿದ ಯಾದವ್, ಭಾರತವು ಬರ್ಗರ್, ಪಿಝ್ಝಾ ಮತ್ತು ಜೀನ್ಸ್‌ನಲ್ಲಿ ಅಮೆರಿಕನ್ನರನ್ನು ಅನುಸರಿಸುತ್ತಿದೆ. ಅದರಂತೆ ಬ್ಯಾಲೆಟ್ ಪೇಪರ್‌ಗಳ ಬಳಕೆಯನ್ನು ಕೂಡ ಅನುಸರಿಸಬೇಕು ಎಂದು ಹೇಳಿದ್ದಾರೆ.

ನಾವು ತಂತ್ರಜ್ಞಾನವನ್ನು ಅರ್ಥಮಾಡಿಕೊಳ್ಳುತ್ತೇವೆ ಎಂದು ನಾನು ಹಲವಾರು ಬಾರಿ ಹೇಳಿದ್ದೆ. ನಾವು ತಂತ್ರಜ್ಞಾನದೊಂದಿಗೆ ಬೆಳೆದಿದ್ದೇವೆ. ಯುಪಿಯಲ್ಲಿ ಎಸ್‌ಪಿ ಸರ್ಕಾರವು ಗರಿಷ್ಠ ಸಂಖ್ಯೆಯ ಲ್ಯಾಪ್‌ಟಾಪ್‌ಗಳನ್ನು ವಿತರಿಸಿದೆ ಎಂದು ಹೇಳಿದ್ದಾರೆ.

ವಿಶ್ವದ ಅತ್ಯಂತ ಶಕ್ತಿಶಾಲಿ ದೇಶ ಅಮೆರಿಕ. ಅಲ್ಲಿ ತಿಂಗಳುಗಟ್ಟಲೆ ಮತದಾನ ಮಾಡಲಾಗುತ್ತದೆ ಮತ್ತು ನಂತರ ಎಣಿಕೆಗಾಗಿ ಸಮಯಾವಕಾಶವನ್ನು ತೆಗೆದುಕೊಳ್ಳಲಾಗುತ್ತದೆ. ಅಷ್ಟು ಪಾರದರ್ಶಕತೆಯಿಂದ ಮಾಡುತ್ತಾರೆ ಎಂದು ಹೇಳಿದ್ದಾರೆ.

140 ಕೋಟಿಗೂ ಹೆಚ್ಚು ಜನರು ದೇಶದ ಭವಿಷ್ಯವನ್ನು ನಿರ್ಧರಿಸುತ್ತಾರೆ. ನೀವು 3 ಗಂಟೆಗಳಲ್ಲಿ ಫಲಿತಾಂಶವನ್ನು ಏಕೆ ಬಯಸುತ್ತೀರಿ? ಒಂದು ತಿಂಗಳು ಏಕೆ ಎಣಿಕೆ ಮಾಡಬಾರದು? ಇಂದು ನಾವು ಬರ್ಗರ್, ಪಿಝ್ಝಾ ಅಥವಾ ಜೀನ್ಸ್ ಪ್ರತಿಯೊಂದು ವಿಚಾರದಲ್ಲೂ ಯುಎಸ್‌ನ್ನು ಅನುಸರಿಸುತ್ತಿದ್ದೇವೆ. ಅದರಂತೆ ನಾವು ಬ್ಯಾಲೆಟ್ ಪೇಪರ್‌ಗಳನ್ನು ಕೂಡ ನಕಲಿಸಬೇಕು ಎಂದು ಹೇಳಿದ್ದಾರೆ.

ಇತ್ತೀಚೆಗೆ ಉತ್ತರಾಖಂಡದ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಯುಎಸ್ ಯಂತ್ರಗಳು ವಿಫಲವಾಗಿದ್ದವು. ದೇಶದ ಯುವಕರು ಪ್ರಾಣವನ್ನು ಉಳಿಸಿದರು. 2022ರಲ್ಲಿ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ ಯಾದವ್‌ ಮತ್ತು ಮುಸ್ಲಿಂ ಸಮುದಾಯದ ಮತದಾರರನ್ನು ಸಾಮೂಹಿಕವಾಗಿ ಅಳಿಸಲಾಗಿದೆ ಎಂಬ ಆರೋಪವನ್ನು ಸಾಬೀತುಪಡಿಸಲು ಭಾರತದ ಚುನಾವಣಾ ಆಯೋಗವು ನನಗೆ ನೋಟಿಸ್ ನೀಡಿದೆ. ನಾನು ಮತದಾರರ ಹೆಸರುಗಳನ್ನು  ಅಫಿಡವಿಟ್‌ಗಳೊಂದಿಗೆ ಚುನಾವಣಾ ಆಯೋಗಕ್ಕೆ ಕಳುಹಿಸಿದ್ದೆ, ಆದರೆ ಆ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು  ಅವರು ಇದೇ ವೇಳೆ ಹೇಳಿದ್ದಾರೆ.

ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೇರಿದಂತೆ ಇತರ ಹಲವು ನಾಯಕರು, ಡೇಟಾ ದುರ್ಬಳಕೆ ಮತ್ತು ತಿರುಚುವಿಕೆ ಸಾಧ್ಯತೆ ಇರುವುದರಿಂದ ಎಲೆಕ್ಟ್ರಾನಿಕ್ ಯಂತ್ರಗಳನ್ನು ಬಳಸಬಾರದು. ಹಲವು ದೇಶಗಳಲ್ಲಿ ಇವಿಎಂ ಬಳಸುತ್ತಿಲ್ಲ ಎಂದು ಹೇಳಿದ್ದರು. ಎಕ್ಸಿಟ್ ಪೋಲ್‌ಗಳು ಪ್ರತಿಪಕ್ಷಗಳ ಗೆಲುವಿನ ಭವಿಷ್ಯ ನುಡಿದಿರುವ ಛತ್ತೀಸ್‌ಗಢದಂತಹ ರಾಜ್ಯಗಳಲ್ಲಿಯೂ ಕೂಡ ಬಿಜೆಪಿ ಚುನಾವಣೆಯನ್ನು ಗೆದ್ದ ನಂತರ ಇವಿಎಂ ದುರ್ಬಳಕೆಯ ಬಗ್ಗೆ ಮತ್ತೆ ಪ್ರಶ್ನೆಗಳು ಕಾಡುತ್ತಿದೆ.

ಇದನ್ನು ಓದಿ: ಗಾಝಾದಲ್ಲಿ ಮಕ್ಕಳ ರಕ್ತಪಾತಕ್ಕೆ ಅಮೆರಿಕ ನೇರ ಹೊಣೆ: ಪ್ಯಾಲೆಸ್ತೀನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...