Homeಮುಖಪುಟಉತ್ತರ ಪ್ರದೇಶ: ಮೈತ್ರಿಗಾಗಿ ಸಣ್ಣ ಪಕ್ಷಗಳಿಗೆ ಬಾಗಿಲು ತೆರೆದಿದೆ ಎಂದ ಅಖಿಲೇಶ್ ಯಾದವ್

ಉತ್ತರ ಪ್ರದೇಶ: ಮೈತ್ರಿಗಾಗಿ ಸಣ್ಣ ಪಕ್ಷಗಳಿಗೆ ಬಾಗಿಲು ತೆರೆದಿದೆ ಎಂದ ಅಖಿಲೇಶ್ ಯಾದವ್

- Advertisement -
- Advertisement -

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಸಮಾಜವಾದಿ ಪಕ್ಷ, ಚುನಾವಣೆಗು ಮುನ್ನ ಮೈತ್ರಿಯಾಗುವ ಸಣ್ಣ ಸಣ್ಣ ಪಕ್ಷಗಳಿಗೆ ತಮ್ಮ ಪಕ್ಷದ ಬಾಗಿಲುಗಳು ತೆರೆದಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಹೇಳಿದ್ದಾರೆ.

ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಸೇರಿ ಬಿಜೆಪಿಯನ್ನು ಸೋಲಿಸಲು ಪ್ರಯತ್ನಿಸುವುದಾಗಿ ಅಖಿಲೇಶ್ ಯಾದವ್ ಭಾನುವಾರ ಹೇಳಿದ್ದಾರೆ.

ತಮ್ಮ ಪಕ್ಷದ ಮೇಲೆ ವಿವಿಧ ವಿಷಯಗಳ ಮೇಲೆ ದಾಳಿ ಮಾಡುತ್ತಿರುವ ಕಾಂಗ್ರೆಸ್ ಮತ್ತು ಬಿಎಸ್‌ಪಿ ಮೇಲೆ ಕಿಡಿ ಕಾರಿರುವ ಅವರು, ಇವರು ತಮ್ಮ ಹೋರಾಟ ಬಿಜೆಪಿ ಜೊತೆಗಾ ಅಥವಾ ಸಮಾಜವಾದಿ ಪಕ್ಷದ ವಿರುದ್ಧವ ಎಂಬುದನ್ನು ನಿರ್ಧರಿಸಬೇಕು ಎಂದಿದ್ದಾರೆ.

“ನಮ್ಮ ಪಕ್ಷದ ಬಾಗಿಲುಗಳು ಎಲ್ಲಾ ಸಣ್ಣ ಪಕ್ಷಗಳಿಗೂ ತೆರೆದಿವೆ. ಅನೇಕ ಸಣ್ಣ ಪಕ್ಷಗಳು ಈಗಾಗಲೇ ನಮ್ಮೊಂದಿಗೆ ಮೈತ್ರಿ ಮಾಡಿಕೊಂಡಿವೆ. ಮತ್ತಷ್ಟು ಪಕ್ಷಗಳು ನಮ್ಮೊಂದಿಗೆ ಬರುತ್ತವೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಸ್ಥಳೀಯ ಸಂಸ್ಥೆ ಚುನಾವಣೆ: ಮತದಾರರ ಅಪಹರಣ, ಬಲ ಪ್ರಯೋಗದಿಂದ ಮತ ಚಲಾಯಿಸದಂತೆ ಮಾಡಲಾಗಿದೆ- ಅಖಿಲೇಶ್ ಯಾದವ್

 

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಕಾಂಗ್ರೆಸ್ ಮತ್ತು ಮಾಯಾವತಿ ಅವರ ಬಿಎಸ್‌ಪಿ ಜೊತೆ ಯಾವುದೇ ಮೈತ್ರಿಕೂಟ ಮಾಡಿಕೊಳ್ಳುವುದಿಲ್ಲ ಎಂದು ಈ ಹಿಂದೆಯೇ ಅಖಿಲೇಶ್ ಯಾದವ್‌ ಸ್ಪಷ್ಟಪಡಿಸಿದ್ದರು.

“ದೊಡ್ಡ ಪಕ್ಷಗಳೊಂದಿಗಿನ ನನ್ನ ಅನುಭವವು ಉತ್ತಮವಾಗಿಲ್ಲ, ನಾನು ಅವರೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ. ಬಿಜೆಪಿಯನ್ನು ಸೋಲಿಸಲು ಬಯಸುವವರು, ಸಮಾಜವಾದಿ ಪಕ್ಷಕ್ಕೆ ಸಹಾಯ ಮಾಡುವಂತೆ ನಾನು ಅವರಿಗೆ ಮನವಿ ಮಾಡುತ್ತೇನೆ”  ಎಂದು ಅಖಿಲೇಶ್ ಹೇಳಿದ್ದರು.

ಪೆಗಾಸಸ್ ಗೂಢಚರ್ಯೆಯ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು,”NDA ಲೋಕಸಭೆಯಲ್ಲಿ 350 ಕ್ಕಿಂತ ಹೆಚ್ಚು ಸ್ಥಾನಗಳನ್ನು ಹೊಂದಿದೆ. ಹಲವು ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ.  ಆದರೂ, ಸರ್ಕಾರ ಏನನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿತ್ತು..?” ಎಂದು ಅಖಿಲೇಶ್ ಯಾದವ್ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಯುಪಿ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ, ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಅಖಿಲೇಶ್ ಯಾದವ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...