Homeಮುಖಪುಟಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಿಲೇಶ್ ಯಾದವ್: ವಿಪಕ್ಷ ನಾಯಕನಾಗಲಿರುವ ಉದ್ದೇಶವೇನು?

ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಿಲೇಶ್ ಯಾದವ್: ವಿಪಕ್ಷ ನಾಯಕನಾಗಲಿರುವ ಉದ್ದೇಶವೇನು?

- Advertisement -
- Advertisement -

ಇತ್ತೀಚೆಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಾವು ಪ್ರತಿನಿಧಿಸುತ್ತಿದ್ದ ಅಜಂಘರ್ ಲೋಕಸಭಾ ಸಂಸತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆ ಮೂಲಕ ತಾವು ವಿಧಾನಸಭಾ ಸದ್ಯಸ್ಯರಾಗಿ ಮುಂದುವರೆಯಲು ಮತ್ತು ವಿಪಕ್ಷ ನಾಯಕನಾಗಿ ಕೆಲಸ ಮಾಡಲು ನಿರ್ಧರಿಸಿದ್ದಾರೆ.

ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ಜಯಗಳಿಸಿದ್ದ ಅಖಿಲೇಶ್ ಯಾದವ್ ಆ ಸ್ಥಾನಕ್ಕೆ ರಾಜೀನಾಮೆ ನೀಡಿ ಸಂಸದರಾಗಿ ಮುಂದುವರೆಯುತ್ತಾರೆ ಎನ್ನಲಾಗಿತ್ತು. ಆದರೆ ಅದನ್ನು ಉಲ್ಟಾ ಮಾಡಿರುವ ಅಖಿಲೇಶ್ ಯಾದವ್ ರಾಜ್ಯ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುವ ಮೂಲಕ 2024ರ ಸಂಸತ್ ಚುನಾವಣೆ ಮತ್ತು 2027ರ ಯುಪಿ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಮುಂದಾಗಿದ್ದಾರೆ.

ಸಾಮಾನ್ಯವಾಗಿ ಯುಪಿ ಮುಖ್ಯಮಂತ್ರಿಗಳಾಗುವವರು ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತಿರಲಿಲ್ಲ. ಈ ಬಾರಿ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಮತ್ತು ಬಿಜೆಪಿಯ ಯೋಗಿ ಆದಿತ್ಯನಾಥ್ ಇಬ್ಬರೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ ಯೋಗಿ ಆದಿತ್ಯನಾಥ್‌ರವರನ್ನು ಎದುರುಗೊಳ್ಳುವ ಆಯ್ಕೆ ಮಾಡಿಕೊಂಡಿದ್ದಾರೆ.

2017ರಲ್ಲಿ ಭಾರೀ ಸೋಲಿನ ನಂತರ ಅಖಿಲೇಶ್ ಯಾದವ್ ರಾಜ್ಯ ರಾಜಕಾರಣದಲ್ಲಿ ಸಕ್ರಿಯರಾಗಿರಲಿಲ್ಲ. 2019ರ ಲೋಕಸಭಾ ಚುನಾವಣೆಯಲ್ಲಿ ಅವರ ಪಕ್ಷ 05 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಲು ಸಾಧ್ಯವಾಗಿತ್ತು. ಆದರೆ ರೈತ ಹೋರಾಟ ಹುಟ್ಟು ಹಾಕಿದ ಅಲೆಯ ನಂತರ ಅವರು ಉತ್ತರ ಪ್ರದೇಶ ಚುನಾವಣೆಗಳತ್ತ ಗಮನ ಹರಿಸಿದ್ದರು. ಈ ಚುನಾವಣೆಯಲ್ಲಿ ಅವರ ಪಕ್ಷ 111 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೂ ಬಹುಮತದಿಂದ ದೂರವೇ ಉಳಿಯಿತು. ಇನ್ನು ಈ ಬಾರಿಯೂ ಅವರು ವಿಧಾನಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಪಕ್ಷದಲ್ಲಿ ಉತ್ಸಾಹ ಇರುವುದಿಲ್ಲ ಎಂಬುದನ್ನು ಅರಿತು ಅವರು ಶಾಸಕರಾಗಿ ಮುಂದುವರೆಯಲು ಬಯಸಿದ್ದಾರೆ ಎನ್ನಲಾಗಿದೆ.

ಅದೇ ರೀತಿ ಶಾಸಕರಾಗಿ ಆಯ್ಕೆಯಾಗಿರುವ ಪಕ್ಷದ ಅಜಂಖಾನ್ ಸಹ ತಮ್ಮ ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕರಾಗಿ ಮುಂದುವರೆಯಲಿದ್ದಾರೆ ಎನ್ನಲಾಗಿದೆ. ಆಗ ಪಕ್ಷದ ಸಂಸತ್ ಸದಸ್ಯರ ಸಂಖ್ಯೆ 03ಕ್ಕೆ ಇಳಿಯಲಿದೆ.


ಇದನ್ನೂ ಓದಿ: ‘ಜೇಮ್ಸ್‌’ ಸಿನಿಮಾ ತೆಗೆದು ‘ಕಾಶ್ಮೀರ್‌ ಫೈಲ್ಸ್‌’ ತೋರಿಸಲು ಒತ್ತಡ: ಜೇಮ್ಸ್‌ ನಿರ್ಮಾಪಕರು ಹೇಳುವುದೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ‘2024ರ ಯುನೆಸ್ಕೋ...

0
ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡದ ಬಗ್ಗೆ ವರದಿ ಮಾಡಿದ ಪ್ಯಾಲೆಸ್ತೀನ್ ಪತ್ರಕರ್ತರನ್ನು 2024ರ ಯುನೆಸ್ಕೋ/ಗಿಲ್ಲೆರ್ಮೊ ಕ್ಯಾನೊ ವರ್ಲ್ಡ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಂತರಾಷ್ಟ್ರೀಯ ಮಾಧ್ಯಮ ವೃತ್ತಿಪರ ತೀರ್ಪುಗಾರರ ಶಿಫಾರಸಿನ ಮೇರೆಗೆ ವಿಜೇತರನ್ನು...