Homeಮುಖಪುಟಟ್ರಾನ್ಸ್‌ಜೆಂಡರ್ ಸಮುದಾಯದ ಹೋರಾಟಗಾರ್ತಿ ಅಖೈ ಪದ್ಮಶಾಲಿ ಇಂದು ಕಾಂಗ್ರೆಸ್‌ಗೆ ಸೇರ್ಪಡೆ

ಟ್ರಾನ್ಸ್‌ಜೆಂಡರ್ ಸಮುದಾಯದ ಹೋರಾಟಗಾರ್ತಿ ಅಖೈ ಪದ್ಮಶಾಲಿ ಇಂದು ಕಾಂಗ್ರೆಸ್‌ಗೆ ಸೇರ್ಪಡೆ

2014 ರ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (NALSA) ತೀರ್ಪಿನ ಅನುಷ್ಠಾನ ಮತ್ತು 2018 ರಲ್ಲಿ ಐಪಿಸಿ ಸೆಕ್ಷನ್ 377 ರ ಕುರಿತ ಸುಪ್ರೀಂ ಕೋರ್ಟ್‌ನ ತೀರ್ಪಿನ ಬಗ್ಗೆ ನಾನು ಗಮನಹರಿಸಲು ಬಯಸುತ್ತೇನೆ. ಇತರೆ ರಾಜಕೀಯ ಪಕ್ಷಗಳಲ್ಲಿ, ಈ ವಿಷಯಗಳ ಬಗ್ಗೆ ಚರ್ಚಿಸಲು ಸ್ಥಳ ಅಥವಾ ವೇದಿಕೆ ಇಲ್ಲ.

- Advertisement -
- Advertisement -

ಕರ್ನಾಟಕದ ಮಂಗಳಮುಖಿಯರ (ಟ್ರಾನ್ಸ್‌ಜೆಂಡರ್) ಹಕ್ಕುಗಳ ಹೋರಾಟಗಾರರಾದ ಡಾ.ಅಕ್ಕೈ ಪದ್ಮಶಾಲಿ, ಕಾಂಗ್ರೆಸ್ ಸದಸ್ಯರಾಗಿ ಭಾನುವಾರ ಅಧಿಕೃತವಾಗಿ ಸೇರಿಕೊಂಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ LGBTQIA+ ಹಕ್ಕುಗಳಿಗಾಗಿ ಹೋರಾಡುತ್ತಿರುವ ಇವರು ಕರ್ನಾಟಕದಿಂದ ರಾಜಕೀಯಕ್ಕೆ ಕಾಲಿಡುತ್ತಿರುವ ಮೊಟ್ಟ ಮೊದಲ ಮಂಗಳಮುಖಿಯಾಗಿದ್ದಾರೆ.

ಪಕ್ಷಕ್ಕೆ ಸೇರ್ಪಡೆಗೊಂಡ ಮಂಗಳಮುಖಿಯರ ಸಂಘಟನೆ ‘ಒಂದೆಡೆ’ ಸಂಸ್ಥಾಪಕಿ ಅಕ್ಕೈ ಪದ್ಮಶಾಲಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಶಾಲು ಹೊದೆಸಿ, ಪುಷ್ಪಗುಚ್ಛ ನೀಡಿ ಬರಮಾಡಿಕೊಂಡು, ಮಾತನಾಡಿದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮಾತನಾಡಿ, “ಯಾರು ಜನರ ಮಧ್ಯೆ ಇದ್ದು, ಅವರ ಸಮಸ್ಯೆಗಳಿಗೆ ದನಿಯಾಗಿರುತ್ತಾರೋ ಅವರೇ ನಿಜವಾದ ನಾಯಕರು. ಈ ಗುಣ ಅಕ್ಕೈ ಪದ್ಮಶಾಲಿಯವರಲ್ಲಿದೆ. ಹಾಗಾಗಿ ಅವರಿಗೆ ಕರ್ನಾಟಕದ ಮಟ್ಟದಲ್ಲಿ ಮಾತ್ರವಲ್ಲದೇ ರಾಷ್ಟ್ರ ಮಟ್ಟದ ನಾಯಕರಾಗಲು ಅರ್ಹತೆಯಿದೆ ಎಂಬುದು ನನ್ನ ಅಭಿಪ್ರಾಯ. ವೈಯಕ್ತಿಕವಾಗಿ ನನಗೆ ಬಹಳ ಸಂತೋಷವಾಗಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಶಾಸಕಿಯರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಸೌಮ್ಯಾ ರೆಡ್ಡಿ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎಲ್ ಶಂಕರ್, ಉಪಮುಖ್ಯಸ್ಥರಾದ ವಿ.ಆರ್. ಸುದರ್ಶನ್, ಮಾಜಿ ಸಚಿವೆಯರಾದ ಉಮಾಶ್ರೀ, ಜಯಮಾಲ ಮತ್ತಿತರರು ಇದ್ದರು.

“ಟ್ರಾನ್ಸ್‌ಜೆಂಡರ್ ಸಮುದಾಯದಲ್ಲಿ ಬದಲಾವಣೆ ಮತ್ತು ಪರಿಣಾಮಕಾರಿ ಫಲಿತಾಂಶಗಳನ್ನು ತರಲು, ಯಾರಾದರೂ ಒಬ್ಬರು ವ್ಯವಸ್ಥೆಯ ಭಾಗವಾಗಿರಬೇಕು. ಈ ನಿರ್ಧಾರವು ಕಠಿಣವಾದದ್ದು. ಹಾಗಾಗಿ, ಲೈಂಗಿಕ ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಮುಖ್ಯವಾಹಿನಿಗೆ ತರಲು ನಾನು ನಿರ್ಧಾರವನ್ನು ತೆಗೆದುಕೊಂಡಿದ್ದೇನೆ” ಎಂದು ಅಕ್ಕೈ ಪದ್ಮಶಾಲಿ ಹೇಳಿದರು.

ಪ್ರಮಾಣವಚನ ಸ್ವೀಕರಿಸುವ ಮುನ್ನ ದಿ ನ್ಯೂಸ್ ಮಿನಿಟ್, ಅಕ್ಕೈ ಪದ್ಮಶಾಲಿಯವರನ್ನು ಸಂದರ್ಶನ ಮಾಡಿದೆ. ಅದರ ಸಾರಾಂಶ ಇಲ್ಲಿದೆ.

ನೀವು ಯಾಕೆ ರಾಜಕೀಯ ಪ್ರವೇಶಿಸಲು ನಿರ್ಧರಿಸಿದ್ದೀರಿ?

ಅಕ್ಕೈ ಪದ್ಮಶಾಲಿ: ರಾಜಕೀಯ ಪ್ರವೇಶಿಸಲು ಇದು ಸೂಕ್ತ ಸಮಯ ಎಂದು ನಾನು ಭಾವಿಸಿದ್ದೇನೆ. ಪ್ರಸ್ತುತ ಸಂದರ್ಭದಲ್ಲಿ ಸಾಂವಿಧಾನಿಕ ಮೌಲ್ಯ ಮತ್ತು ಒಳಗೊಳ್ಳುವಿಕೆಯ ಬಗ್ಗೆ ಬೆದರಿಕೆಯಿದೆ. ಸಂವಾದಗಳನ್ನು ಪ್ರಾರಂಭಿಸಿ, ಟ್ರಾನ್ಸ್‌ಜೆಂಡರ್ ಮತ್ತು ಲೈಂಗಿಕ ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಮುಖ್ಯವಾಹಿನಿಗೆ ತರುವುದು ಈ ಸಮಯದ ತುರ್ತಾಗಿದೆ. ಈ ನಿರ್ಧಾರವು, ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಸಮಸ್ಯೆಗಳನ್ನು ನ್ಯಾಯಯುತವಾಗಿ ಪರಿಹರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ನೀಲಿ-ಕೆಂಪು ಒಂದಾಗಬೇಕೆಂಬುದು ಆಕೆಯ ಆಸೆಯಾಗಿತ್ತು

ಕಾಂಗ್ರೆಸ್ ಪಕ್ಷವನ್ನೇ ಏಕೆ ಆಯ್ಕೆ ಮಾಡಿಕೊಂಡಿದ್ದೀರಿ?

ಅಕ್ಕೈ ಪದ್ಮಶಾಲಿ: ನಮ್ಮ ವಿಷಯಗಳ ಬಗ್ಗೆ ಮಾತನಾಡಲು ಕಾಂಗ್ರೆಸ್ ಅತ್ಯುತ್ತಮ ಪಕ್ಷ ಎಂದು ನಾನು ಭಾವಿಸುತ್ತೇನೆ. ಇಂದು, ವಿಶೇಷವಾಗಿ ಲೈಂಗಿಕ ಅಲ್ಪಸಂಖ್ಯಾತರಲ್ಲಿ ನಿರುದ್ಯೋಗ ಅತ್ಯಂತ ಹೆಚ್ಚಾಗಿದೆ. ಮಹಿಳಾ ಮೀಸಲಾತಿ ಮಸೂದೆಯ ವಿಷಯಕ್ಕೆ ಆದ್ಯತೆ ನೀಡಬೇಕಾಗಿದೆ. ಮಹಿಳೆಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರು ಎದುರಿಸುತ್ತಿರುವ ಸಮಸ್ಯೆಗಳನ್ನು ಮುನ್ನೆಲೆಗೆ ತರಲು ವೇದಿಕೆ ಒದಗಿಸಲು ಇರುವ ಪಕ್ಷ ಕಾಂಗ್ರೆಸ್ ಮಾತ್ರ ಎಂದು ನಾನು ನಂಬುತ್ತೇನೆ.

2014 ರ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ (NALSA) ತೀರ್ಪಿನ ಅನುಷ್ಠಾನ ಮತ್ತು 2018 ರಲ್ಲಿ ಐಪಿಸಿ ಸೆಕ್ಷನ್ 377 ರ ಕುರಿತ ಸುಪ್ರೀಂ ಕೋರ್ಟ್‌ನ ತೀರ್ಪಿನ ಬಗ್ಗೆ ನಾನು ಗಮನಹರಿಸಲು ಬಯಸುತ್ತೇನೆ. ಇತರೆ ರಾಜಕೀಯ ಪಕ್ಷಗಳಲ್ಲಿ, ಈ ವಿಷಯಗಳ ಬಗ್ಗೆ ಚರ್ಚಿಸಲು ಸ್ಥಳ ಅಥವಾ ವೇದಿಕೆ ಇಲ್ಲ. ಟ್ರಾನ್ಸ್‌ಜೆಂಡರ್ ಸಮುದಾಯದ ಪ್ರತಿನಿಧಿಯನ್ನು ಹೊಂದಿರುವ ರಾಜಕೀಯ ಪಕ್ಷವು ಇಡೀ ದಕ್ಷಿಣ ಭಾರತಕ್ಕೆ ಮಾದರಿಯಾಗಿರುತ್ತದೆ ಎಂದು ನಾನು ನಂಬುತ್ತೇನೆ.

ಶಾಸಕಾಂಗದ ಮೂಲಕ ಪರಿಣಾಮ ಬೀರುವ ಫಲಿತಾಂಶಗಳನ್ನು ತರಬಹುದು ಎಂಬುದು ನನ್ನ ಅಭಿಪ್ರಾಯ. ವ್ಯವಸ್ಥೆಯ ಭಾಗವಾಗದೆ, ಸಾಮಾಜಿಕವಾಗಿ ಒಳಗೊಂಡು ಸಮಾಜಕ್ಕೆ ಬದಲಾವಣೆಯನ್ನು ತರಲು ಯಾವುದೇ ಮಾರ್ಗವಿಲ್ಲ. ಇಂದಿರಾ ಗಾಂಧಿಯವರ ಕಾಲದಿಂದಲೂ ಕಾಂಗ್ರೆಸ್ ಲೈಂಗಿಕ ಅಲ್ಪಸಂಖ್ಯಾತರಿಗಾಗಿ ಕೆಲಸ ಮಾಡಿದೆ. ನಾನು 2009 ರಲ್ಲಿ ಪಕ್ಷಕ್ಕೆ ಸೇರಬೇಕೆಂದು ಕಾಂಗ್ರೆಸ್ ಮೊದಲು ಪ್ರಸ್ತಾಪಿಸಿತು. ನಿರ್ಧಾರ ತೆಗೆದುಕೊಳ್ಳಲು ನಾನು ಸ್ವಲ್ಪ ಸಮಯವನ್ನು ತೆಗೆದುಕೊಂಡಿದ್ದೆ. ನಾನು, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮತ್ತು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುಷ್ಮಿತಾ ಡೇ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಅವರು ನಮ್ಮ ಒಳಗೊಳ್ಳುವಿಕೆಯನ್ನು ಸ್ವಾಗತಿಸಿದ್ದಾರೆ. ನಮ್ಮ ಸಮಾಜಕ್ಕೆ ನನ್ನಿಂದ ಸಾಕಷ್ಟು ನಿರೀಕ್ಷೆಗಳಿವೆ. ಆದರೆ ಅವುಗಳನ್ನು ಸಾಕಾರಗೊಳಿಸುವುದು ಅಷ್ಟು ಸುಲಭವಲ್ಲ. ಆದರೂ ನಾನು ದೊಡ್ಡ ಬದಲಾವಣೆಯನ್ನು ತರಲು ಬಯಸುತ್ತೇನೆ.

ಇದನ್ನೂ ಓದಿ: ‘She Man’: ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

ನೀವು ಅಧಿಕೃತವಾಗಿ ಪಕ್ಷಕ್ಕೆ ಸೇರಿದ ನಂತರ ನಿಮ್ಮ ಮುಂದಿನ ಯೋಜನೆಗಳೇನು?

ಅಕ್ಕೈ ಪದ್ಮಶಾಲಿ: ನನ್ನ ಪ್ರಾಥಮಿಕ ಗಮನ, ಲೈಂಗಿಕ ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಮುನ್ನೆಲೆಗೆ ತರುವುದು. ಚುನಾವಣಾ ರಾಜಕೀಯದಲ್ಲಿ ಮಹಿಳೆಯರ ದೃಷ್ಟಿಕೋನವನ್ನು ತರಲು ಮತ್ತು NALSA ಮತ್ತು 2018 ಸುಪ್ರೀಂ ಎಸ್‌ಸಿ ತೀರ್ಪನ್ನು ಹೇಗೆ ಕಾರ್ಯಗತಗೊಳಿಸಬೇಕು ಎಂಬುದರ ಕುರಿತು ನಾಗರಿಕ ಸಮಾಜ ಆಂದೋಲನವನ್ನು ಪ್ರಾರಂಭಿಸಲು ನಾನು ಬಯಸುತ್ತೇನೆ. ನಂತರ ನಿರುದ್ಯೋಗವು ಲೈಂಗಿಕ ಅಲ್ಪಸಂಖ್ಯಾತರೂ ಸೇರಿದಂತೆ ಇತರರ ಮೇಲೆ ಹೇಗೆ ಪರಿಣಾಮ ಬೀರಿದೆ ಎಂಬುದನ್ನು ತಿಳಿದುಕೊಳ್ಳಬೇಕಿದೆ.

ಸಾಂವಿಧಾನಿಕ ಮೌಲ್ಯಗಳು ಮತ್ತು ಹಕ್ಕುಗಳ ಬಗ್ಗೆ ಮಾತನಾಡುವುದು ಸಹ ನನ್ನ ಆದ್ಯತೆಯಾಗಿದೆ. ದೇಶದಲ್ಲಿ ತುಂಬಾ ಅಸಹಿಷ್ಣುತೆ ಇದೆ. ಮತ್ತು ಭಿನ್ನಾಭಿಪ್ರಾಯವನ್ನು ನಿಗ್ರಹಿಸಲಾಗುತ್ತಿದೆ. ಆದರೆ ಭಿನ್ನಾಭಿಪ್ರಾಯ ನನ್ನ ಹಕ್ಕು! ಸಂವಿಧಾನದ ಮುನ್ನುಡಿಯಲ್ಲಿನ ಜಾತ್ಯತೀತ ತತ್ವಗಳನ್ನು ನನ್ನ ದೇಶಕ್ಕೆ ನೆನಪಿಸಬೇಕಾಗಿದೆ ಎಂದು ನಾನು ಭಾವಿಸುತ್ತೇನೆ.

ಸಲಿಂಗ ವಿವಾಹಗಳನ್ನು ಕಾನೂನುಬದ್ಧಗೊಳಿಸುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಈ ಕುರಿತು ನಿಮ್ಮ ಅಭಿಪ್ರಾಯಗಳೇನು?

ಅಕ್ಕೈ ಪದ್ಮಶಾಲಿ: ಡಿಸೆಂಬರ್ 11, 2013 ರಂದು, ಸುಪ್ರೀಂ ಕೋರ್ಟ್ ದೆಹಲಿ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿತು (ಸೆಕ್ಷನ್ 377ನ್ನು ರದ್ದುಪಡಿಸಿತು). ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ಅರ್ಜಿದಾರರಲ್ಲಿ ನಾನೂ ಒಬ್ಬಳಾಗಿದ್ದೆ. ಅವರು ಅದನ್ನು ಗೌಪ್ಯತೆ ಮತ್ತು ಘನತೆಯ ಹಕ್ಕಿನ ಆಧಾರದ ಮೇಲೆ ಪ್ರಶ್ನಿಸಿದರು. ಸುಪ್ರೀಂ ಕೋರ್ಟ್, 2018 ರಲ್ಲಿ ಸೆಕ್ಷನ್ 377 ಅನ್ನು ಕೈಗೆತ್ತಿಕೊಂಡಾಗ, ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಬಳಿ ನಮ್ಮ ಸಮಾಜವು ಕ್ಷಮೆಯಾಚಿಸಬೇಕಿದೆ ಎಂದು ಹೇಳಿತ್ತು.

ಸಲಿಂಗ ವಿವಾಹಗಳನ್ನು ಕಾನೂನುಬದ್ಧಗೊಳಿಸಲು ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ. ಲಿಂಗತ್ವ ಮತ್ತು ಲೈಂಗಿಕತೆ ಏನೆಂಬುದನ್ನು ಅರ್ಥಮಾಡಿಕೊಳ್ಳಲು ಜನರು ಸಜ್ಜಾಗಿದ್ದಾರೆ. ಇದರ ಬಗ್ಗೆ, ಶಾಲೆಗಳು ಮತ್ತು ಕಾಲೇಜುಗಳಿಂದ ಪ್ರಾರಂಭವಾಗುವ ಸಾರ್ವಜನಿಕ ಶಿಕ್ಷಣದಲ್ಲಿಯೇ ಅರಿವು ಮೂಡಿಸಬೇಕು ಎನ್ನುವುದು ನನ್ನ ಅಭಿಪ್ರಾಯ.

ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಅರಿವಿನ ಲೋಕ ವಿಸ್ತರಿಸುತ್ತಿರುವ ಉಮಾ

ಸಮುದಾಯದ ಸದಸ್ಯರ ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಿಮ್ಮ ಯೋಚನೆ ಏನು?

ಅಕ್ಕೈ ಪದ್ಮಶಾಲಿ: ಅಕ್ಟೋಬರ್ 25, 2017 ರಂದು ಕರ್ನಾಟಕ ಕ್ಯಾಬಿನೆಟ್ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ನೀತಿಯನ್ನು ಅಂಗೀಕರಿಸಿತು. ನೀತಿ ಉತ್ತಮವಾಗಿದೆ, ಆದರೆ ಇನ್ನೂ ಜಾರಿಗೆ ಬಂದಿಲ್ಲ.

ಅನೇಕ ಜನರು ಭಿಕ್ಷಾಟನೆ ಮತ್ತು ಲೈಂಗಿಕ ವೃತ್ತಿಯನ್ನು ತ್ಯಜಿಸಲು ಬಯಸುತ್ತಾರೆ. ಆದರೆ ಅದರ ಜೊತೆಗೆ ಪರ್ಯಾಯ ಉದ್ಯೋಗಾವಕಾಶಗಳನ್ನೂ ಬಯಸುತ್ತಾರೆ. ಅದನ್ನು ಮಾಡಲು ಸರ್ಕಾರಕ್ಕೆ ಅಧಿಕಾರವಿದೆ. ಆದರೆ ನೀತಿಯನ್ನು ಜಾರಿಗೆ ತರಲು ಸರ್ಕಾರ ಏನನ್ನೂ ಮಾಡುತ್ತಿಲ್ಲ. ಅದು ಕಣ್ಣು, ಕಿವಿ ಮತ್ತು ಬಾಯಿ ಮುಚ್ಚಿಕೊಂಡು ಕುಳಿತಿದೆ. ನಾವು ಎಷ್ಟು ದಿನಗಳವರೆಗೆ ಸರ್ಕಾರದ ಬಾಗಿಲು ಬಡಿಯಲು ಸಾಧ್ಯ? ಇದು ಬಹಳ ಕಾಲದಿಂದಲೂ ಬಾಕಿ ಉಳಿದಿದೆ. ಈ ನೀತಿಯನ್ನು ತಕ್ಷಣ ಜಾರಿಗೆ ತರಲು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ.

ಲಿಂಗಾಯತ ಸಮುದಾಯದ ಹಿರಿಯ ನಾಗರಿಕರಿಗಾಗಿ ನಿಮ್ಮ ಯೋಜನೆಗಳೇನು?

ಅಕ್ಕೈ ಪದ್ಮಶಾಲಿ: ಕಳಂಕ ಮತ್ತು ಆರ್ಥಿಕ ಭದ್ರತೆಯ ಕೊರತೆಯಿಂದಾಗಿ ಕಷ್ಟಕರ ಜೀವನವನ್ನು ನಡೆಸುತ್ತಿರುವ ವಯಸ್ಸಾದ ಟ್ರಾನ್ಸ್‌ಜೆಂಡರ್ ಜನರಿದ್ದಾರೆ. ವಯಸ್ಸಾದ ವ್ಯಕ್ತಿಗಳಿಗೆ ಅಲ್ಪಾವಧಿಯ ಮನೆಗಳ ಜೊತೆಗೆ ವೃದ್ಧಾಪ್ಯದ ಮನೆಗಳ ಅವಶ್ಯಕತೆಯಿದೆ. ಅಸ್ತಿತ್ವದಲ್ಲಿರುವ ವೃದ್ಧಾಪ್ಯದ ಮನೆಗಳು ಟ್ರಾನ್ಸ್‌ಜೆಂಡರ್ ಸ್ನೇಹಿಯಾಗಿಲ್ಲ. ನಮ್ಮ ಸಮುದಾಯದ ಪ್ರಮುಖ ಆದ್ಯತೆಯೆಂದರೆ, ಆಶ್ರಯ, ಉತ್ತಮ ಆಹಾರ ಮತ್ತು ಆರ್ಥಿಕ ಸುಸ್ಥಿರತೆ.

ನಮ್ಮ ಸಮುದಾಯದವರಿಗೆ ನೀಡುತ್ತಿರುವ ಪಿಂಚಣಿಯನ್ನು ಹೆಚ್ಚಿಸಿ, ಅಚರಿಗೆ ಉಚಿತ ಆರೋಗ್ಯ ಸೌಲಬ್ಯವನ್ನು ನಿಡಬೇಕು. ಇದಕ್ಕಾಗಿ ಹಲವು ಸರ್ಕಾರೇತರ ಸಂಘಟನೆಗಳಿಗೆ ಸರ್ಕಾರವು ಪ್ರೋತ್ಸಾಹವನ್ನು ಕೊಡಬೇಕು. ಇದರೊಂದಿಗೆ ಇನ್ನೂ ನಮ್ಮ ಸಮುದಾಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಿದೆ. ಗ್ರಾಮೀಣ ಮಟ್ಟದಲ್ಲಿರುವ ಲೈಂಗಿಕ ಅಲ್ಪಸಂಖ್ಯಾತರಿಗೆ ಅರಿವು ಮೂಡಿಸಿ, ಅವರನ್ನೂ ಮುನ್ನೆಲೆಗೆ ತರುವುದೇ ನನ್ನ ಆದ್ಯತೆ.


ಇದನ್ನೂ ಓದಿ: ಇವರ ಹೋರಾಟದ ಬದುಕಿಗೆ ನಮ್ಮದೊಂದು ಸಲಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...