Homeಸಿನಿಮಾಕ್ರೀಡೆಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿದರ್ಭ ತಂಡದ ಸ್ಪಿನ್ ಬೌಲರ್ ಅಕ್ಷಯ್ ಕರ್ನೇವಾರ್ ಮಣಿಪುರ ಎದುರು ನಡೆದು ಟಿ20 ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ

- Advertisement -
- Advertisement -

ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿದರ್ಭ ತಂಡದ ಸ್ಪಿನ್ ಬೌಲರ್ ಅಕ್ಷಯ್ ಕರ್ನೇವಾರ್ ವಿನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಮಣಿಪುರ ಎದುರು ನಡೆದ ಟಿ20 ಪಂದ್ಯದಲ್ಲಿ ಅವರು ತನ್ನ ಕೋಟಾದ ನಾಲ್ಕು ಓವರ್ ಬೌಲ್ ಮಾಡಿ ಒಂದೂ ರನ್ ನೀಡಿಲ್ಲ (4-4-0-2). ಅಂದರೆ ನಾಲ್ಕೂ ಓವರ್ ಮೇಡನ್ ಮಾಡಿದ್ದಲ್ಲದೆ 2 ವಿಕೆಟ್ ಗಳಿಸಿ ಈ ಸಾಧನೆಗೈದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಅಂತರಾಷ್ಟ್ರೀಯ ಟಿ20 ಅಥವಾ ಐಪಿಎಲ್ ಥರಹದ ಫ್ರಾಂಚೈಸಿಗಳು ನಡೆಸುವ ಲೀಗ್‌ಗಳಲ್ಲಿಯೂ ಸಹ ಯಾರೂ ಈ ಸಾಧನೆ ಮಾಡಿಲ್ಲ.

ಮೊದಲು ಬ್ಯಾಟ್ ಮಾಡಿದ ವಿದರ್ಭ 20 ಓವರ್‌ಗಳಲ್ಲಿ 222 ರನ್ ಗಳಿಸಿತು. ತಂಡದ ಜಿತೇಶ್ ಶರ್ಮಾ ಮತ್ತು ಅಪೂರ್ವ ವಾಖಂಡೆ  ಕ್ರಮವಾಗಿ 71 ಮತ್ತು 49 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಮಣಿಪುರ 16.3 ಓವರ್‌ಗಳಲ್ಲಿ ಕೇವಲ 55 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ವಿದರ್ಭದ ಸ್ಪಿನ್ ಬೌಲರ್‌ಗಳಾದ ಅಕ್ಷಯ್ ಕರ್ನೇವಾರ್ ಮತ್ತು ಅಥರ್ವ ದಾಳಿಗೆ ಮಣಿಪುರದ ಬ್ಯಾಟ್ಸ್‌ಮನ್‌ಗಳು ನಿರುತ್ತರರಾದರು. ಹಾಗಾಗಿ ವಿದರ್ಭ 167 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು.

ಮಣಿಪುರದ ಕರ್ಣಜಿತ್ ಯುಮ್ನಾನ್ ಮತ್ತು ನರಸಿಂಗ್ ಯಾದವ್ ಮಾತ್ರ ಕ್ರಮವಾಗಿ 18, 10 ರನ್ ಗಳಿಸಿದರು. ಉಳಿದವರು ಯಾರೂ ಎರಡಂಕಿ ಮುಟ್ಟಲಿಲ್ಲ. ಅಕ್ಷಯ್ ಕರ್ನೇವಾರ್ ಶಿಸ್ತುಬದ್ದ ದಾಳಿ ನಡೆಸಿ ಎರಡು ವಿಕೆಟ್ ಕಿತ್ತರು. ಅಲ್ಲದೆ ಒಂದೂ ರನ್ ಸಹ ಬಿಟ್ಟು ಕೊಡದೆ ವಿಶ್ವ ದಾಖಲೆ ಬರೆದರು. ಒಟ್ಟು ನಾಲ್ಕು ಪಂದ್ಯಗಳಲ್ಲಿ ಅಕ್ಷಯ್ 6 ವಿಕೆಟ್ ಗಳಿಸಿದ್ದಾರೆ.

ಒಂದು ದಿನ ಮೊದಲು ನಡೆದ ಪಂದ್ಯದಲ್ಲಿ ಮಧ್ಯ ಪ್ರದೇಶದ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಬಿಹಾರದ ಎದರು ನಾಲ್ಕು ಓವರ್ ಬೌಲ್ ಮಾಡಿ ಕೇವಲ ಎರಡು ರನ್ ನೀಡಿ, ಎರಡು ವಿಕೆಟ್ ಕಬಳಿಸಿದ್ದರು (4-2-2-2). ಎರಡು ಓವರ್ ಮೇಡನ್ ಮಾಡಿದ್ದ ಅವರು ಇನ್ನೆರೆಡು ಓವರ್‌ನಲ್ಲಿ ತಲಾ ಒಂದು ರನ್ ಮಾತ್ರ ಬಿಟ್ಟುಕೊಟ್ಟಿದ್ದರು. ಆ ದಾಖಲೆಯನ್ನು ಇಂದು ಅಕ್ಷಯ್ ಕರ್ನೇವಾರ್ ಮುರಿದಿದ್ದಾರೆ.

ಭಾರತವು ಮುಂದೆ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಆಡಲಿದ್ದು ಇಂತಹ ಉದಯೋನ್ಮುಕ ಬೌಲರ್‌ಗಳು ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿದೆ.


ಇದನ್ನೂ ಓದಿ: ಕೆಲವು ಕ್ರೀಡೆಗಳು ಸೃಷ್ಟಿಸುವ ಹೈಪರ್ ನ್ಯಾಷನಲಿಸಂ ಮತ್ತು ಕ್ರೀಡಾಪಟುಗಳ ಜಾತಿನಿಂದನೆ – ಇವುಗಳ ನಡುವೆ ಸಂಭ್ರಮಿಸುವುದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...