HomeಮುಖಪುಟPUBG ನಿಷೇಧದ ಬೆನ್ನಿಗೆ FAU-G ಅನಾವರಣಗೊಳಿಸಿದ ನಟ ಅಕ್ಷಯ್ ಕುಮಾರ್‌

PUBG ನಿಷೇಧದ ಬೆನ್ನಿಗೆ FAU-G ಅನಾವರಣಗೊಳಿಸಿದ ನಟ ಅಕ್ಷಯ್ ಕುಮಾರ್‌

- Advertisement -
- Advertisement -

ಜನಪ್ರಿಯ ಮೊಬೈಲ್ ಗೇಮ್ PUBG ಸೇರಿದಂತೆ 118 ಮೊಬೈಲ್ ಅಪ್ಲಿಕೇಶನ್‌ಗಳನ್ನು ಭಾರತ ನಿಷೇಧಿಸಿದ ಎರಡು ದಿನಗಳ ನಂತರ, ಬೆಂಗಳೂರು ಮೂಲದ ಎನ್‌ಕೋರ್ ಗೇಮ್ಸ್ ಶೀಘ್ರದಲ್ಲೇ ‘ಫಿಯರ್‌ಲೆಸ್ ಮತ್ತು ಯುನೈಟೆಡ್: ಗಾರ್ಡ್ಸ್ (FAU-G)’ ಎಂಬ ಹೊಸ ಮಲ್ಟಿಪ್ಲೇಯರ್ ಮಿಡ್-ಕೋರ್ ಗೇಮಿಂಗ್ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

ಇದನ್ನೂ ಓದಿ: ಕೇವಲ ಆಪ್‌ಗಳನ್ನು ನಿಷೇಧಿಸಿದರೆ ಸಾಲದು; ಚೀನಾಕ್ಕೆ ತಕ್ಕ ಉತ್ತರ ನೀಡಬೇಕು: ಮಮತಾ ಬ್ಯಾನರ್ಜಿ

ಎನ್‌ಕೋರ್ ಪ್ರಕಾರ, ಈ ಗೇಮ್‌ ಭಾರತೀಯ ಭದ್ರತಾ ಪಡೆ ಎದುರಿಸುತ್ತಿರುವ ದೇಶೀಯ ಮತ್ತು ವಿದೇಶಿ ಬೆದರಿಕೆಗಳ ನೈಜ ಸನ್ನಿವೇಶಗಳನ್ನು ಆಧರಿಸಿದೆ. ಐದು ಜನ ತಂಡವಾಗಿ ಇದನ್ನು ಆಡಬಹುದಾಗಿದೆ.

ಪ್ರಸ್ತುತ FAU:G ಅಕ್ಟೋಬರ್ ಅಂತ್ಯದಲ್ಲಿ ಬಿಡುಗಡೆಯಾಗಲಿದ್ದು, ಗೇಮ್‌ನ ಮೊದಲ ಲೆವೆಲ್ ಗಾಲ್ವಾನ್ ಕಣಿವೆಯ ಹಿನ್ನಲೆಯಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ. ಗೇಮ್‌ ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್‌ನಲ್ಲಿ ಲಭ್ಯವಿರುತ್ತದೆ.

ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೇಮ್‌ ಪ್ರಾರಂಭದ ಬಗ್ಗೆ ಟ್ವೀಟ್ ಮಾಡಿದ್ದು, ಆಟದಿಂದ ಬರುವ ನಿವ್ವಳ ಆದಾಯದ 20% ವನ್ನು ’ಭಾರತ್ ಕೆ ವೀರ್ ಪ್ರತಿಷ್ಠಾನ’ಕ್ಕೆ ನೀಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: PUBG ಸೇರಿದಂತೆ 118 ಜನಪ್ರಿಯ ಚೀನಿ ಅಪ್ಲಿಕೇಷನ್ ನಿಷೇಧಿಸಿದ ಭಾರತ

ಪ್ರಧಾನಿ ನರೇಂದ್ರ ಆತ್ಮನಿರ್ಭರ್ ಆಂದೋಲನವನ್ನು ಬೆಂಬಲಿಸಿ, FAU-G ಆಕ್ಷನ್ ಗೇಮ್‌ಅನ್ನು ಪ್ರಸ್ತುತಪಡಿಸಲು ಹೆಮ್ಮೆಯೆನಿಸುತ್ತದೆ. ಮನರಂಜನೆಯ ಜೊತೆಗೆ, ಆಟಗಾರರು ನಮ್ಮ ಸೈನಿಕರ ತ್ಯಾಗದ ಬಗ್ಗೆಯೂ ಕಲಿಯುತ್ತಾರೆ. ಗಳಿಸಿದ ನಿವ್ವಳ ಆದಾಯದ 20% ಅನ್ನು “ಭಾರತ್‌ಕೀವೀರ್ ಟ್ರಸ್ಟ್‌ಗೆ” ನೀಡಲಾಗುವುದು ಎಂದು ನಟ ಟ್ವೀಟ್ ಮಾಡಿದ್ದಾರೆ.

ಎನ್ಕೋರ್ ಪ್ರಕಾರ, “ಭಾರತ್ ಕೆ ವೀರ್ ಟ್ರಸ್ಟ್ ಅನ್ನು ಅಕ್ಷಯ್ ಕುಮಾರ್ ಅವರ ಪರಿಕಲ್ಪನೆಯಲ್ಲಿ ಮೂಡಿದ್ದಾಗಿದ್ದು, ಭಾರತದ ಸಶಸ್ತ್ರ ಪಡೆಗಳ ಹುತಾತ್ಮರ ಕುಟುಂಬಗಳನ್ನು ಬೆಂಬಲಿಸಲು ಗೃಹ ಸಚಿವಾಲಯವು ಇದನ್ನು ಜಾರಿಗೆ ತಂದಿದೆ” ಎಂದು ಹೇಳಿದೆ.

2018 ರಲ್ಲಿ ದಯಾನಿಧಿ ಎಂಜಿ ಮತ್ತು ವಿಶಾಲ್ ಗೊಂಡಾಲ್ ಸ್ಥಾಪಿಸಿದ ಎನ್‌ಕೋರ್ ಬೆಂಗಳೂರು ಮೂಲದ ಮೊಬೈಲ್ ಗೇಮಿಂಗ್ ಸ್ಟಾರ್ಟ್ಅಪ್ ಕಂಪೆನಿಯಾಗಿದೆ.


ಇದನ್ನೂ ಓದಿ: ತೆಲಂಗಾಣದ ಬಿಜೆಪಿ ಶಾಸಕನನ್ನು ನಿಷೇಧಿಸಿದ ಫೇಸ್‌ಬುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...