Homeಅಂತರಾಷ್ಟ್ರೀಯಅಲ್ಬೇನಿಯಾ ದಾಖಲೆ - ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

ಅಲ್ಬೇನಿಯಾ ದಾಖಲೆ – ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

- Advertisement -
- Advertisement -

ಏಪ್ರಿಲ್ 25 ರಂದು ಯುರೋಪಿನ ದೇಶವಾದ ಅಲ್ಬೇನಿಯಾದಲ್ಲಿ ನಡೆದ ಚುನಾವಣೆಯ ನಂತರ, ಅಲ್ಲಿನ ಪ್ರಧಾನಿ ‘ಎಡಿ ರಾಮ’ ತನ್ನ ಹೊಸ ಸಚಿವ ಸಂಪುಟವನ್ನು ಘೋಷಿಸಿದ್ದಾರೆ. ತನ್ನ ಹೊಸ ತಂಡದ 16 ಹುದ್ದೆಗಳಲ್ಲಿ 12 ಸ್ಥಾನಗಳನ್ನು ಮಹಿಳೆಯರಿಗೆ ನೀಡುವ ಮೂಲಕ ದೇಶದಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ.

ಹೀಗಾಗಿ ಅಲ್ಬೇನಿಯಾದ ಹೊಸ ಸರ್ಕಾರದ 12 ಸಚಿವಾಲಯಗಳಿಗೆ ಎಂಟು ಮಹಿಳಾ ಮತ್ತು ನಾಲ್ಕು ಪುರುಷರು ನೇತೃತ್ವ ವಹಿಸಲಿದ್ದಾರೆ. ಕ್ಯಾಬಿನೇಟ್‌‌ ದರ್ಜೆಯಿಲ್ಲದ ಇತರ ನಾಲ್ಕು ಮಂತ್ರಿ ಸ್ಥಾನಕ್ಕೆ ಮಹಿಳೆಯರೇ ಆಯ್ಕೆಯಾಗಿದ್ದಾರೆ. ಪ್ರಧಾನಿಯಿಂದ ಆಯ್ಕೆಯಾಗಿರುವ ಒಟ್ಟು 16 ಸಚಿವರಲ್ಲಿ ನಾಲ್ವರು ಮಂತ್ರಿಗಳು ರಾಜಕೀಯ ಅನನುಭವಿಗಳಾಗಿದ್ದು, ಉಳಿದ ಸಚಿವರು ರಾಜಕೀಯದಲ್ಲಿ ಸಕ್ರಿಯರಾಗಿರುವವರಾಗಿದ್ದಾರೆ.

ಇದನ್ನೂ ಓದಿ: ನಮ್ಮ ಆಡಳಿತದಲ್ಲಿ ‘ಎಮ್ಮೆ-ಗೂಳಿ-ಮಹಿಳೆ’ ಸುರಕ್ಷಿತ: ಆದಿತ್ಯನಾಥ್

ಮಾಜಿ ಹಣಕಾಸು ಸಚಿವರಾಗಿದ್ದ ಅರ್ಬೆನ್ ಅಹ್ಮೆತಾಜ್ ಅವರನ್ನು ದೇಶದ ಉಪ ಪ್ರಧಾನಿಯಾಗಿ ನೇಮಿಸಲಾಯಿತು. ವಿದೇಶಿ, ರಕ್ಷಣಾ, ಆಂತರಿಕ, ಮೂಲಸೌಕರ್ಯ, ಆರೋಗ್ಯ ಮತ್ತು ಶಿಕ್ಷಣ ಮತ್ತು ಸಂಸ್ಕೃತಿ ಸಚಿವಾಲಯಗಳಿಗೆ ಓಲ್ಟಾ ಕ್ಷಾಕಾ, ನಿಕೊ ಪೆಲೆಶಿ, ಬ್ಲೆಂಡಿ ಕುಸಿ ಬೆಲಿಂಡ ಬಲ್ಲುಕು, ಒಗೆರ್ಟಾ ಮನಸ್ತಿರ್ಲಿಯು, ಇವಿಸ್ ಕುಶಿ ಮತ್ತು ಎಲ್ವಾ ಮಾರ್ಗರಿಟಿಯನ್ನು ನೇಮಿಸಲಾಗಿದೆ.

ತೆರಿಗೆ ನಿರ್ದೇಶನಾಲಯದ ಮಾಜಿ ನಿರ್ದೇಶಕರಾದ ಡೆಲಿನಾ ಇಬ್ರಾಹಿಮಿಗೆ ಹಣಕಾಸು ಖಾತೆಯನ್ನು ನೀಡಲಾಗಿದ್ದು, ಕೃಷಿಗೆ ಸಹಾಯಧನ ನೀಡುವ ಮುಖ್ಯ ಸಂಸ್ಥೆಯಾದ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಏಜೆನ್ಸಿಯ ಮಾಜಿ ಮುಖ್ಯಸ್ಥೆ ಫ್ರಿಡಾ ಕ್ರಿಫ್ಕಾ ಅವರನ್ನು ಕೃಷಿ ಸಚಿವರನ್ನಾಗಿ ಮಾಡಲಾಗಿದೆ.

ಇದನ್ನೂ ಓದಿ: ದಲಿತ ಮಹಿಳೆಯರನ್ನು ಕಾನೂನುಬಾಹಿರವಾಗಿ ಸೇವೆಯಿಂದ ವಜಾಗೊಳಿಸಿದ ನಿಮ್ಹಾನ್ಸ್‌: ಆರೋಪ

ಕಾನೂನುಗಳ ಸಂಸದೀಯ ಆಯೋಗದ ಮಾಜಿ ಮುಖ್ಯಸ್ಥ ಉಲ್ಸಿ ಮಂಜ ಅವರನ್ನು ನ್ಯಾಯಾಂಗ ಸಚಿವರನ್ನಾಗಿ ನೇಮಿಸಲಾಯಿತು. ಕ್ಯಾಬಿನೇಟ್‌‌ ದರ್ಜೆ ಇಲ್ಲದ ನಾಲ್ವರು ಮಂತ್ರಿಗಳಲ್ಲಿ ಸಂಸತ್‌ ವ್ಯವಹಾರದ ಸಚಿವೆಯಾಗಿ ಎಲಿಸಾ ಸ್ಪಿರೊಪಾಲಿ, ಉದ್ಯಮಶೀಲತೆ ರಕ್ಷಣೆಯ ಮಂತ್ರಿಯಾಗಿ ಎಡೋನಾ ಬಿಲಾಲಿ, ಸೇವೆಗಳ ಸಚಿವರಾಗಿ ಮಿಲ್ವಾ ಎಕೊನೊಮಿ ಮತ್ತು ಯುವ ಮತ್ತು ಮಕ್ಕಳ ಸಚಿವರಾಗಿ ಬೋರಾ ಮುಝಾಕಿ ನೇಮಕವಾಗಿದ್ದಾರೆ.

ಪ್ರಧಾನಿ ಇಡಿ ರಾಮ ಅವರು ದೇಶದ ಎಡಪಂಥೀಯ ಪಕ್ಷವಾದ ಸೋಷಿಯಲಿಸ್ಟ್‌ ಪಾರ್ಟಿ ಆಫ್‌ ಅಲ್ಬೇನಿಯಾದ ಅಧ್ಯಕ್ಷರೂ ಆಗಿದ್ದಾರೆ. ಅವರು 2013 ರಿಂದ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಲ್ಬೇನಿಯಾ, ಆಗ್ನೇಯ ಯುರೋಪಿನ ಬಾಲ್ಕನ್ ಪರ್ಯಾಯ ದ್ವೀಪದಲ್ಲಿರುವ ದೇಶವಾಗಿದೆ. ‘ತಿರಾನಾ’ ದೇಶದ ರಾಜಧಾನಿಯಾಗಿದ್ದು, ದೇಶವು ಅನೇಕ ಕೋಟೆಗಳು ಮತ್ತು ಪುರಾತತ್ವ ಸ್ಥಳಗಳನ್ನು ಹೊಂದಿದೆ.

ಇದನ್ನೂ ಓದಿ: ಕೊರೊನಾ ಸಂಕಷ್ಟದಲ್ಲಿ ದೈಹಿಕ, ಮಾನಸಿಕವಾಗಿ ನಲುಗಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮಲ್ಲಿ ಇನ್ನೂ ಶೇಕಡಾ ೩೩ರಶ್ಟು ಮೀಸಲಾತಿಯನ್ನು ಮಹಿಳೆಯರಿಗೆ ಕೊಡಲು ಸಾಧ್ಯವಾಗಿಲ್ಲ.

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....