Homeಕರ್ನಾಟಕ🛑 Alert| ರಾಜ್ಯದಲ್ಲಿ ಅಂಬುಲೆನ್ಸ್‌ ಸೇವೆ ಅಸ್ತವ್ಯಸ್ತ; ಆತಂಕದಲ್ಲಿ ಜನತೆ

🛑 Alert| ರಾಜ್ಯದಲ್ಲಿ ಅಂಬುಲೆನ್ಸ್‌ ಸೇವೆ ಅಸ್ತವ್ಯಸ್ತ; ಆತಂಕದಲ್ಲಿ ಜನತೆ

- Advertisement -
- Advertisement -

ಶನಿವಾರ ಸಂಜೆಯಿಂದ ರಾಜ್ಯದಲ್ಲಿ ಅಂಬುಲೆನ್ಸ್ ಸೇವೆಯಲ್ಲಿ ಸಮಸ್ಯೆಯಾಗಿದ್ದು, ರಾಜ್ಯದ ಜನರು ಆತಂಕಪಡುವಂತಾಗಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಟ್ವೀಟ್ ಮಾಡಿದ್ದು, “ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ಅಪಘಾತ ಪ್ರಕರಣಗಳು, ವಿಷಕುಡಿದ ಪ್ರಕರಣಗಳು, ಹಾವು ಕಚ್ಚಿದ ಪ್ರಕರಗಳು, ಹೆರಿಗೆ ಪ್ರಕರಣಗಳು ಸೇರಿದಂತೆ ಅನೇಕ ತುರ್ತು ಚಿಕಿತ್ಸೆಗೆ ಅಂಬುಲೆನ್ಸ್ ಸೇವೆ ಅಗತ್ಯವಿದೆ. 108 ಅಂಬುಲೆನ್ಸ್ ಸೇವೆಯನ್ನು ಜಿವಿಕೆ ಸಂಸ್ಥೆ ನಡೆಸುತ್ತಾ ಇದ್ದು, ಶನಿವಾರ ಸಂಜೆಯಿಂದ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯಾದ್ಯಂತ ದಿನಕ್ಕೆ ಸುಮಾರು 8 ಸಾವಿರ ಕರೆಗಳು 108ಗೆ ಹೋಗುತ್ತವೆ. 8 ಸಾವಿರ ಕರೆಗಳಲ್ಲಿ 2 ಸಾವಿರ ಪ್ರಕರಣಗಳು ಗಂಭೀರ ಆಗಿರುತ್ತವೆ. ಆದರೆ ಈ ಅಂಬುಲೆನ್ಸ್ ಸೇವೆ ಸಿಗದೇ ಇದ್ದರೆ 2 ಸಾವಿರ ಗಂಭೀರ ಪ್ರಕರಣಗಳಲ್ಲಿ ಸಾವು ನೋವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಶನಿವಾರ ಸಂಜೆಯಿಂದ ಅಂಬುಲೆನ್ಸ್ ಸೇವೆ ಇಲ್ಲದ ಕಾರಣ ಜನರಿಗೆ ಸಮಸ್ಯೆ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದ 108 ಸೇವೆ ಲಭ್ಯವಾಗುತ್ತಿಲ್ಲ ಎಂದು ಜನರು ದೂರುತ್ತಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವ ಸುಧಾಕರ್‌, “ತಾಂತ್ರಿಕ ಸಮಸ್ಯೆಯಿಂದ 108 ಆರೋಗ್ಯ ಕವಚ ಆಂಬ್ಯುಲೆನ್ಸ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಹಾಗೂ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆ ವತಿಯಿಂದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದಿದ್ದಾರೆ.

“ಸ್ವಯಂಚಾಲಿತ ಕಾಲ್ ಸೆಂಟರ್ ವ್ಯವಸ್ಥೆ ಮೂಲಕ ಕರೆಗಳ ವಿತರಣೆಗೆ ಪರ್ಯಾಯವಾಗಿ ಮ್ಯಾನುವಲ್ ಐಡಿಗಳನ್ನು ಸೃಷ್ಟಿಸಿ ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗುತ್ತಿದ್ದು, ಇದರೊಂದಿಗೆ 104 ಕಾಲ್ ಸೆಂಟರ್ ನಲ್ಲಿ 108 ಆಂಬ್ಯುಲೆನ್ಸ್ ಸೇವೆಗೆ ಓವರ್ ಫ್ಲೋ ಕಾಲ್ ಸೆಂಟರ್ ಸ್ಥಾಪಿಸಲು ಸಹ ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಚೀನಾದಲ್ಲಿ ದಂಗೆ, ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಪದಚ್ಯುತಿ ವದಂತಿ!

“108 ಹಾಗೂ 112 ಕಾಲ್ ಸೆಂಟರ್ ಗಳಲ್ಲಿ ಅಧಿಕ ಕರೆ ಸ್ವೀಕರಿಸಲು ಅನುಕೂಲವಾಗುವಂತೆ ಪ್ರಸ್ತುತ ಇರುವ ಸಿಬ್ಬಂದಿಗಳ ಜೊತೆಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಅಂಬ್ಯುಲೆನ್ಸ್ ಡ್ರೈವರ್‌‌ಗಳಿಗೆ ತಮ್ಮ ಮೊಬೈಲ್ ಮೂಲಕ ಆಸ್ಪತ್ರೆಗಳಿಂದ ನೇರವಾಗಿ ಕರೆಗಳನ್ನು ಸ್ವೀಕರಿಸಲು ಸಹ ಸೂಚನೆ ನೀಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ತಾಂತ್ರಿಕ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಲು ಸಮರೋಪಾದಿಯಲ್ಲಿ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಪರ್ಯಾಯ ವ್ಯವಸ್ಥೆಗಳ ಮೂಲಕ ಸೇವೆಯಲ್ಲಿ ಉಂಟಾಗಿರುವ ತಾತ್ಕಾಲಿಕ ವ್ಯತ್ಯಯವನ್ನು ಕನಿಷ್ಠ ಮಟ್ಟದಲ್ಲಿಡಲು ಪ್ರಯತ್ನಿಸಲಾಗುತ್ತಿದೆ” ಎಂದಿದ್ದಾರೆ.

ಅಂಬುಲೆನ್ಸ್ ಬಾರದೆ ಮಹಿಳೆ ನಿಧನ

ತಾಂತ್ರಿಕ ಸಮಸ್ಯೆಯಿಂದ ‘108 ಅಂಬುಲೆನ್ಸ್’ ಸೇವೆ ಸ್ಥಗಿತಗೊಂಡಿದೆ. ಸಕಾಲಕ್ಕೆ ಅಂಬುಲೆನ್ಸ್​ ಸಿಗದೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಐಡಿಹಳ್ಳಿಯ ಜಯಮ್ಮ(65) ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹಲವು ಬಾರಿ ಅಂಬುಲೆನ್ಸ್ ಕರೆ ಮಾಡಲಾಗಿದೆ. ಆದ್ರೆ ಅಂಬುಲೆನ್ಸ್ ಬರದ ಕಾರಣ ಜಯಮ್ಮ ಮನೆಯಲ್ಲೇ ಪ್ರಾಣ ಬಿಟ್ಟಿದ್ದಾರೆ.

“108ಕ್ಕೆ ಕರೆ ಮಾಡಿ 1 ಗಂಟೆ ಕಳೆದರೂ ಅಂಬುಲೆನ್ಸ್‌ ಮನೆ ಬಳಿ ಬಂದಿಲ್ಲ. ಜಯಮ್ಮ ಕುಟುಂಬಸ್ಥರು ಮಧುಗಿರಿ ಟಿಹೆಚ್​ಒಗೆ ಕರೆ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ. ಟಿಹೆಚ್​ಒಗೆ ಕರೆ ಮಾಡಿದ ನಂತರ ಐಡಿಹಳ್ಳಿಗೆ ಅಂಬುಲೆನ್ಸ್​ ಬಂದಿದೆ. ಆದ್ರೆ 108 ಅಂಬುಲೆನ್ಸ್​ ಬರುವಷ್ಟರಲ್ಲಿ ಜಯಮ್ಮ ಮೃತಪಟ್ಟಿದ್ದರು. ಸಮಯಕ್ಕೆ ಸರಿಯಾಗಿ ಅಂಬುಲೆನ್ಸ್​ ಬಂದಿದ್ದರೆ ಪ್ರಾಣ ಉಳಿಯುತ್ತಿತ್ತು” ಎಂದು ಸ್ಥಳೀಯರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...