Homeಮುಖಪುಟಉತ್ತರಪ್ರದೇಶ: ಶಾಸಕಿ ಜೊತೆ ಅಸಭ್ಯವಾಗಿ ವರ್ತಿಸಿದ ಬಿಜೆಪಿ ಸಂಸದ

ಉತ್ತರಪ್ರದೇಶ: ಶಾಸಕಿ ಜೊತೆ ಅಸಭ್ಯವಾಗಿ ವರ್ತಿಸಿದ ಬಿಜೆಪಿ ಸಂಸದ

- Advertisement -
- Advertisement -

ಉತ್ತರಪ್ರದೇಶದ ಅಲಿಗಢ್‌ನ ಕೋಲ್ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಸಂಸದ ಸತೀಶ್ ಗೌತಮ್ ಅವರು ಶಾಸಕಿಯ ಜೊತೆಗಿನ ದುರ್ವತನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ.

ಬಿಜೆಪಿ ಸಂಸದ ಸತೀಶ್ ಗೌತಮ್ ಅವರು ವೇದಿಕೆಯಲ್ಲಿ ಶಾಸಕಿ ಮುಕ್ತಾ ರಾಜಾ ಅವರ ಭುಜದ ಮೇಲೆ ಕೈ ಹಾಕಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ವೇಳೆ ಶಾಸಕಿ ವಿರೋಧವನ್ನು ವ್ಯಕ್ತಪಡಿಸಿ ತಮ್ಮ ಆಸನವನ್ನು ಬದಲಿಸಿ ಬೇರೆಡೆ ಕುಳಿತುಕೊಂಡಿದ್ದಾರೆ.

ಸೆ.25ರಂದು ಶಾಸಕ ಅನಿಲ್ ಪರಾಶರ್ ಅವರು ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿದ ಅಂಗವಾಗಿ ಅಲಿಗಢದ ಶ್ರೀ ರಾಮ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಈ ಘಟನೆ ನಡೆದಿದೆ.

ಕಾರ್ಯಕ್ರಮದ ವೇದಿಕೆಯಲ್ಲಿ ಸಾರಿಗೆ ಸಚಿವ ದಯಾಶಂಕರ್ ಸಿಂಗ್, ಉನ್ನತ ಶಿಕ್ಷಣ ಸಚಿವ ಯೋಗೇಂದ್ರ ಉಪಾಧ್ಯಾಯ, ಮಾಜಿ ಮೇಯರ್ ಶಕುಂತಲಾ ಭಾರತಿ, ಬಿಜೆಪಿ ಕಾರ್ಯಕಾರಿಣಿ ಸದಸ್ಯೆ ಪೂನಂ ಬಜಾಜ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿಜಯ್ ಸಿಂಗ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ವೈರಲ್ ಆಗಿರುವ ವಿಡಿಯೋದಲ್ಲಿ ಸಂಸದ ಸತೀಶ್ ಗೌತಮ್ ಅವರು ಮಹಿಳಾ ಶಾಸಕಿಯ ಭುಜದ ಮೇಲೆ ಕೈಯಿಟ್ಟಿರುವುದು ಕಂಡು ಬಂದಿದೆ. ಇದಕ್ಕೆ ಶಾಸಕರು ವಿರೋಧಿಸಿ ತಮ್ಮ ಕುರ್ಚಿಯನ್ನು ಬದಲಾಯಿಸಿ ವೇದಿಕೆಯ ಮೇಲಿದ್ದ ಮತ್ತೊಂದು ಆಸನದಲ್ಲಿ ಕುಳಿತುಕೊಂಡಿದ್ದಾರೆ.

ಘಟನೆಯ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಬಿಜೆಪಿ ಸಂಸದನ ಅಸಭ್ಯ ವರ್ತನೆಗೆ ವ್ಯಾಪಕವಾದ ವಿರೋಧ ವ್ಯಕ್ತವಾಗಿದೆ. ಇದು ಸುಸಂಸ್ಕೃತ ಬಿಜೆಪಿಯ ನಿಜವಾದ ಮುಖ ಎಂದು ಕಾಂಗ್ರೆಸ್‌ ನಾಯಕ ಸುರೇಂದ್ರ ರಜಪೂತ್‌ ಅವರು ಟೀಕಿಸಿದ್ದಾರೆ.

ಇದನ್ನು ಓದಿ: ವಾಚತಿ ಬುಡಕಟ್ಟು ಗ್ರಾಮದಲ್ಲಿ ದೌರ್ಜನ್ಯ ಪ್ರಕರಣ: ಪೊಲೀಸರು ಸೇರಿ 215 ಅಧಿಕಾರಿಗಳಿಗೆ ವಿಧಿಸಿದ್ದ ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ | ಅಂಕಿತಾ ಭಂಡಾರಿ ನ್ಯಾಯಕ್ಕಾಗಿ ಪೋಷಕರಿಂದ ಆಹೋರಾತ್ರಿ ಧರಣಿ, ಕಾಂಗ್ರೆಸ್ ನಾಯಕರ ಸಾಥ್

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಹೆಸರು ತಳುಕು ಹಾಕಿಕೊಂಡಿದ್ದ ಬಿಜೆಪಿ ನಾಯಕ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ, ಅಂಕಿತಾ ಪೋಷಕರೊಂದಿಗೆ ಕಾಂಗ್ರೆಸ್ ನಾಯಕರು ದೆಹಲಿಯ ಇಂಡಿಯಾ...

ಶಾಂತಿಯುತ ಪ್ರತಿಭಟನಾಕಾರರು ಮತ್ತು ವಕೀಲರ ಮೇಲಿನ ಪೊಲೀಸ್ ದೌರ್ಜನ್ಯ: ಬಾಂಬೆ ಬಾರ್ ಅಸೋಸಿಯೇಷನ್‌ನಿಂದ ತೀವ್ರ ಖಂಡನೆ

ಅಕ್ಟೋಬರ್ 10, 2026 ರಂದು ನವದೆಹಲಿ ಮತ್ತು ಮುಂಬೈ ಸೇರಿದಂತೆ ವಿವಿಧ ನಗರಗಳಲ್ಲಿ ಶಾಂತಿಯುತ ಪ್ರತಿಭಟನಾಕಾರರು ಹಾಗೂ ವಕೀಲರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ, ದೈಹಿಕ ಹಲ್ಲೆ ಮತ್ತು ಕಾನೂನುಬಾಹಿರ ಬಂಧನಗಳನ್ನು 'ಬಾಂಬೆ...

‘ದೇಶವನ್ನು ದಾರಿ ತಪ್ಪಿಸಬೇಡಿ’: ಸಿಜೆಪಿ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಮಾಧ್ಯಮ ಸಂಚಾಲಕ ಆಶಿಶ್ ಉಷಾ ಆಕ್ರೋಶ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಕಾಕ್ರೋಚ್ ಜನತಾ...

ಎಸ್‌ಐಆರ್ ವಿರೋಧಿ ಹೋರಾಟಗಾರರ ಮೇಲೆ ಪೊಲೀಸರ ಕ್ರೌರ್ಯ: ವಿದ್ಯಾರ್ಥಿನಿಯ ಒಂದು ಕಿವಿಯ ಶ್ರವಣಶಕ್ತಿ ನಷ್ಟ, ರಾಹುಲ್ ಗಾಂಧಿ ಆರೋಪ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ಯುವ ಕಾಂಗ್ರೆಸ್ ಹಾಗೂ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರ ಮೇಲೆ...

SIR ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಂಸದ ಅಸಾದುದ್ದೀನ್ ಓವೈಸಿ

ಲೋಕಸಭಾ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ಚುನಾವಣಾ ಆಯೋಗದ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಇದೇ ರೀತಿಯ ಬಾಕಿ...

SIR ಫಾರಂ-6 ವಿವಾದ : ವಿಚಾರಣೆ ದಿನಾಂಕ ಬದಲಾಯಿಸಿದ ಸುಪ್ರೀಂ ಕೋರ್ಟ್

ದೆಹಲಿ ಎಸ್‌ಐಆರ್ ಪ್ರಕ್ರಿಯೆಯ ಭಾಗವಾಗಿ ಯಾರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆಯೋ, ಆ ಮತದಾರರ ಹೆಸರುಗಳನ್ನು ಮರುಸೇರ್ಪಡೆ ಮಾಡಲು ಫಾರಂ 6 ಅನ್ನು ಭರ್ತಿ ಮಾಡುವಂತೆ ಕೇಳಲಾಗುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್ ಇಂದು...

ನಮ್ಮನ್ನು ಪರಸ್ಪರ ಅನುಮಾನಿಸುವಂತೆ ಮಾಡುವುದು ಮೋದಿ ಸರ್ಕಾರದ ಉದ್ದೇಶ: ಸಿಇಸಿ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಿಗೆ ಅಭಿಜೀತ್ ದೀಪ್ಕೆ ಕರೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಭಾಗಿಯಾಗಿರುವವರನ್ನು ಪರಸ್ಪರ ಅನುಮಾನಿಸುವಂತೆ ಮಾಡಿ, ಹೋರಾಟವನ್ನು ದುರ್ಬಲಗೊಳಿಸುವುದು ಮೋದಿ ಸರ್ಕಾರದ ತಂತ್ರವಾಗಿದೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ)...

SIR ವಿವಾದ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ಮದನ್ ಲೋಕೂರ್ ನೇತೃತ್ವದಲ್ಲಿ ಅಕ್ಟೋಬರ್ 15ರಂದು ಸಾರ್ವಜನಿಕ ವಿಚಾರಣೆ!

ಭಾರತೀಯ ಚುನಾವಣಾ ಆಯೋಗವು ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ತೀವ್ರ ವಿವಾದಕ್ಕೆ ಹಾಗೂ ವಿರೋಧಕ್ಕೆ ಗುರಿಯಾಗಿರುವ ಬೆನ್ನಲ್ಲೇ, ಈ ಕುರಿತು...

DELHI PROTEST : ಸಿಜೆಪಿಯ ಸೌರವ್ ದಾಸ್, ಅಶುತೋಷ್ ರಾಂಕಾಗೆ 5 ದಿನಗಳ ನ್ಯಾಯಾಂಗ ಬಂಧನ

ಪ್ರತಿಭಟನಾ ಪ್ರದೇಶ ಎಂಬ ಮಾನ್ಯತೆಯನ್ನು ರದ್ದುಗೊಳಿಸಲಾಗಿರುವ ಜಂತರ್ ಮಂತರ್‌ಗೆ ಅಕ್ರಮವಾಗಿ ಪ್ರವೇಶಿಸುವ ಮೂಲಕ ಶಾಂತಿ ಕದಡುವುದಿಲ್ಲ ಎಂಬ ಬಾಂಡ್ ಉಲ್ಲಂಘಿಸಿದ ಆರೋಪದ ಮೇಲೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್...

ಎಸ್‌ಐಆರ್ ವಿರುದ್ಧದ ಹೋರಾಟಕ್ಕೆ ರೈತರ ಬೆಂಬಲ: ನವೆಂಬರ್ 26ರಂದು ದೇಶವ್ಯಾಪಿ ಪ್ರತಿಭಟನೆಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಬೆಂಬಲವಾಗಿ ದೇಶಾದ್ಯಂತ ರೈತರನ್ನು ಬೀದಿಗಿಳಿಸಲು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಿರ್ಧರಿಸಿದೆ. ಎಸ್‌ಐಆರ್ ಪ್ರಕ್ರಿಯೆಯನ್ನು...