HomeUncategorizedಅಲಿಘಢ| ಪಾಕ್‌ ಧ್ವಜದ ಮೇಲೆ ಮೂತ್ರ ವಿಸರ್ಜಿಸುವಂತೆ ಬಾಲಕನಿಗೆ ಬಲಪಂಥೀಯ ಗುಂಪಿನಿಂದ ಒತ್ತಾಯ

ಅಲಿಘಢ| ಪಾಕ್‌ ಧ್ವಜದ ಮೇಲೆ ಮೂತ್ರ ವಿಸರ್ಜಿಸುವಂತೆ ಬಾಲಕನಿಗೆ ಬಲಪಂಥೀಯ ಗುಂಪಿನಿಂದ ಒತ್ತಾಯ

- Advertisement -
- Advertisement -

ಹದಿಹರೆಯದ ಬಾಲಕನೊಬ್ಬ ಪಾಕಿಸ್ತಾನಿ ವಿರೋಧಿ ಪೋಸ್ಟರ್ ಅನ್ನು ಹರಿದು ಹಾಕಿದ್ದಾನೆ ಎಂದು ಆರೋಪಿಸಿ ಬಲಪಂಥೀಯ ಬೆಂಬಲಿಗರು ಪಾಕಿಸ್ತಾನಿ ಧ್ವಜದ ಮೇಲೆ ಮೂತ್ರ ವಿಸರ್ಜಿಸುವಂತೆ ಆತನನ್ನು ಒತ್ತಾಯಿಸಿರುವ ಘಟನೆ ಉತ್ತರ ಪ್ರದೇಶದ ಅಲಿಘರ್ ನಗರದಲ್ಲಿ ಬೆಳಕಿಗೆ ಬಂದಿದೆ.

ಬಾಲಕನ ಸ್ನೇಹಿತ ತಪ್ಪಿಸಿಕೊಂಡರೂ, ಬುರ್ಹಾನ್ ನನ್ನು ಕಾಲರ್ ಹಿಡಿದ ಗುಂಪು, ಆತನನ್ನು ನಿಂದಿಸಿ, ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕ್ಷಮೆ ಯಾಚಿಸುವಾಗಲೇ ಆ ಬಾಲಕಿನಿಗೆ ಪಾಕಿಸ್ತಾನಿ ಧ್ವಜದ ಮೇಲೆ ಮೂತ್ರ ವಿಸರ್ಜಿಸುವಂತೆ ಒತ್ತಾಯಿಸಲಾಗಿದೆ.

“ನಾವು ಪಾಕಿಸ್ತಾನದ ವಿರುದ್ಧ ಪ್ರತಿಭಟಿಸುತ್ತಿದ್ದೆವು, ಪೋಸ್ಟರ್‌ಗಳನ್ನು ಅಂಟಿಸುತ್ತಿದ್ದೆವು, ಅವನು ಅವುಗಳನ್ನು ಹರಿದು ಓಡಿಹೋದನು. ಇವರೆಲ್ಲರೂ ಭಾರತದಲ್ಲಿ ವಾಸಿಸುವ ಪಾಕಿಸ್ತಾನಿಗಳು” ಎಂದು ಬಲಪಂಥೀಯ ಸದಸ್ಯರೊಬ್ಬರು ಹೇಳಿಕೆಯನ್ನು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

“ಭಾರತದಲ್ಲಿ ವಾಸಿಸುವ ಪಾಕಿಸ್ತಾನಿಗಳ ಬಗ್ಗೆ ಏನಾದರೂ ಮಾಡಬೇಕೆಂದು ನಾನು ಭಾರತ ಸರ್ಕಾರಕ್ಕೆ ಮನವಿ ಮಾಡುತ್ತೇನೆ” ಎಂದು ಆ ವ್ಯಕ್ತಿ ಹೇಳಿದ್ದಾನೆ.

ಈ ಮಧ್ಯೆ, ಹದಿಹರೆಯದವನು ಈ ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾನೆ. ದಾಳಿಕೋರರಿಗೆ ತನ್ನನ್ನು ಬಿಡುಗಡೆ ಮಾಡುವಂತೆ ಬೇಡಿಕೊಂಡ ಅವನು, “ಜಹೇದ್ ಪೋಸ್ಟರ್‌ಗಳನ್ನು ಹರಿದು ಓಡಿಹೋದನು; ದಯವಿಟ್ಟು ನನ್ನನ್ನು ಕ್ಷಮಿಸಿ” ಎಂದು ಹೇಳಿದ್ದಾನೆ.

ದಾಳಿಯ ವೀಡಿಯೊ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹರಿದಾಡುತ್ತಿದೆ. ಕುತೂಹಲಕಾರಿಯಾಗಿ, ಈ ಘಟನೆ ರಸೂಲ್‌ಗಂಜ್ ಪೊಲೀಸ್ ಠಾಣೆಯ ಬಳಿ ನಡೆದಿದೆ. ಪೊಲೀಸರು ಹಾಜರಿದ್ದರೂ, ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಲಿಲ್ಲ ಎನ್ನಲಾಗಿದೆ.

ಉತ್ತರ ಪ್ರದೇಶ| ಮದುವೆ ಸಮಾರಂಭದಲ್ಲಿ ಬಾಲಕಿ ಮೇಲೆ 47 ವರ್ಷದ ವ್ಯಕ್ತಿಯಿಂದ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...