Homeಮುಖಪುಟಅಲಿಗಢ್: ವಿದೇಶಿ ಉತ್ಪನ್ನಗಳ ಖರೀದಿ ಭಯೋತ್ಪಾದನೆ, ಮತಾಂತರ ಮತ್ತು 'ಲವ್ ಜಿಹಾದ್'ಗೆ ಹಣಕಾಸು ಒದಗಿಸುತ್ತದೆ -...

ಅಲಿಗಢ್: ವಿದೇಶಿ ಉತ್ಪನ್ನಗಳ ಖರೀದಿ ಭಯೋತ್ಪಾದನೆ, ಮತಾಂತರ ಮತ್ತು ‘ಲವ್ ಜಿಹಾದ್’ಗೆ ಹಣಕಾಸು ಒದಗಿಸುತ್ತದೆ – ಸಿಎಂ ಯೋಗಿ

- Advertisement -
- Advertisement -

ಅಲಿಗಢ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿದೇಶಿ ಉತ್ಪನ್ನಗಳನ್ನು ಖರೀದಿಸುವುದರಿಂದ ಬಂದ ಲಾಭವು ಭಯೋತ್ಪಾದನೆ, ಮತಾಂತರ ಮತ್ತು ‘ಲವ್ ಜಿಹಾದ್’ನಂತಹ ದೇಶ ವಿರೋಧಿ ಚಟುವಟಿಕೆಗಳಿಗೆ ಹಣಕಾಸು ಒದಗಿಸುತ್ತದೆ ಎಂದು ಹೇಳಿಕೆ ನೀಡಿ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ. ಅವರ ಈ ಹೇಳಿಕೆ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ನಾಂದಿ ಹಾಡಿದೆ.

ದೇಶೀಯ ಉತ್ಪನ್ನಗಳಿಗೆ ಒತ್ತು

ರಾಜ್ಯ ಸರ್ಕಾರದ ‘ಒಂದು ಜಿಲ್ಲೆ, ಒಂದು ಉತ್ಪನ್ನ’ (ODOP) ಕಾರ್ಯಕ್ರಮದಡಿ ಅಲಿಗಢದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಯೋಗಿ, ಪ್ರಜೆಗಳು ವಿಶೇಷವಾಗಿ ಹಬ್ಬಗಳ ಸಂದರ್ಭದಲ್ಲಿ ‘ಸ್ವದೇಶಿ’ ಉತ್ಪನ್ನಗಳನ್ನು ಮಾತ್ರ ಖರೀದಿಸಬೇಕು ಎಂದು ಕರೆ ನೀಡಿದರು. “ನೀವು ವಿದೇಶಿ ವಸ್ತುಗಳನ್ನು ಖರೀದಿಸಿದಾಗ, ಅದರ ಲಾಭ ವಿದೇಶಗಳಿಗೆ ಹೋಗುತ್ತದೆ. ಆ ಹಣವು ದೇಶದ ಸ್ಥಿರತೆಗೆ ಧಕ್ಕೆ ತರುವ ಭಯೋತ್ಪಾದನೆ, ಲವ್ ಜಿಹಾದ್ ಮತ್ತು ಮತಾಂತರ ಚಟುವಟಿಕೆಗಳಿಗೆ ಬಳಕೆಯಾಗುತ್ತದೆ,” ಎಂದು ಅವರು ಆತಂಕ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ‘ವೋಕಲ್ ಫಾರ್ ಲೋಕಲ್’ ಅಭಿಯಾನವನ್ನು ಬಲಪಡಿಸಲು ಈ ಹೇಳಿಕೆ ನೀಡಿರುವುದಾಗಿ ಅವರು ತಿಳಿಸಿದರು. ಆರ್ಥಿಕ ಸ್ವಾವಲಂಬನೆಯನ್ನು ರಾಷ್ಟ್ರೀಯ ಭದ್ರತೆಗೆ ಜೋಡಿಸುವುದು ಇದರ ಮುಖ್ಯ ಉದ್ದೇಶ ಎಂದು ಅವರು ಹೇಳಿದರು.

ಅಲಿಗಢದ ಸಾಂಪ್ರದಾಯಿಕ ಬೀಗಗಳ ಉದ್ಯಮವನ್ನು ಉದಾಹರಣೆಯಾಗಿ ನೀಡಿದ ಸಿಎಂ, 2017ರ ಮೊದಲು ಮಾರುಕಟ್ಟೆ ಚೀನಾ ಉತ್ಪನ್ನಗಳಿಂದ ತುಂಬಿ ಹೋಗಿತ್ತು. ಇದರಿಂದ ಸ್ಥಳೀಯ ಕುಶಲಕರ್ಮಿಗಳ ಜೀವನಕ್ಕೆ ಹೊಡೆತ ಬಿದ್ದಿತ್ತು ಎಂದು ಹೇಳಿದರು. ಆದರೆ, ODOP ಉಪಕ್ರಮವು ಪ್ರಾದೇಶಿಕ ಉತ್ಪಾದನೆಯನ್ನು ಪುನಶ್ಚೇತನಗೊಳಿಸಿದೆ ಎಂದು ಅವರು ಪ್ರತಿಪಾದಿಸಿದರು.

ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆ

ವಿದೇಶಿ ಸರಕುಗಳ ಖರೀದಿ ಮತ್ತು ಭಯೋತ್ಪಾದನೆಗೆ ಹಣಕಾಸು ಒದಗಿಸುವುದರ ನಡುವೆ ಯಾವುದೇ ದೃಢವಾದ ಪುರಾವೆಗಳಿಲ್ಲ ಎಂಬುದು ವಿಶ್ಲೇಷಕರ ಅಭಿಪ್ರಾಯವಾಗಿದೆ. ಸಿಎಂ ಯೋಗಿ ಅವರ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಕೆಲವರು ಯೋಗಿ ಅವರ ಹೇಳಿಕೆಯನ್ನು ರಾಷ್ಟ್ರೀಯತೆ ಮತ್ತು ಆರ್ಥಿಕ ಜಾಗೃತಿಯ ಸಂಕೇತವೆಂದು ಬಣ್ಣಿಸಿದ್ದಾರೆ. “ಸ್ವದೇಶಿ ಕೇವಲ ಆರ್ಥಿಕತೆಯ ಪ್ರಶ್ನೆಯಲ್ಲ, ಇದು ರಾಷ್ಟ್ರೀಯತೆಯ ವಿಷಯ. ವಿದೇಶಿ ವಸ್ತುಗಳ ಮೇಲೆ ಖರ್ಚು ಮಾಡುವ ಪ್ರತಿಯೊಂದು ರೂಪಾಯಿಯೂ ಭಾರತಕ್ಕೆ ಹಾನಿ ಮಾಡಬಹುದು,” ಎಂದು X (ಹಿಂದಿನ ಟ್ವಿಟರ್) ಬಳಕೆದಾರರೊಬ್ಬರು ಸಮರ್ಥಿಸಿಕೊಂಡಿದ್ದಾರೆ.

ಆದರೆ, ಹೆಚ್ಚಿನ ಜನರು ಈ ಹೇಳಿಕೆಯನ್ನು “ಭಯ ಹುಟ್ಟಿಸುವ ತಂತ್ರ” ಎಂದು ಟೀಕಿಸಿದ್ದಾರೆ. “ಗ್ರಾಹಕರ ಆಯ್ಕೆಗಳನ್ನು ಭಯೋತ್ಪಾದನೆಯೊಂದಿಗೆ ಜೋಡಿಸುವುದು ರಾಜಕೀಯ ತಂತ್ರದ ಹೊರತಾಗಿ ಬೇರೇನೂ ಅಲ್ಲ. ಇದು ವಾಸ್ತವಿಕ ನೀತಿಯಲ್ಲ,” ಎಂದು ಮತ್ತೊಬ್ಬ X ಬಳಕೆದಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೆಡ್ಡಿಟ್ ಫೋರಮ್‌ಗಳು ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ, ಈ ಹೇಳಿಕೆಯ ಕುರಿತು ವ್ಯಂಗ್ಯಭರಿತ ಪೋಸ್ಟ್‌ಗಳು ಮತ್ತು ಮೀಮ್‌ಗಳು ಹರಿದಾಡುತ್ತಿವೆ. ವಿದೇಶಿ ವ್ಯಾಪಾರವನ್ನು ರಾಷ್ಟ್ರವಿರೋಧಿ ಚಟುವಟಿಕೆಗಳೊಂದಿಗೆ ಸಮೀಕರಿಸುತ್ತಿರುವ ಬಗ್ಗೆ ಜನರು ಕಳವಳ ವ್ಯಕ್ತಪಡಿಸಿದ್ದಾರೆ. ಒಬ್ಬ ರೆಡ್ಡಿಟ್ ಬಳಕೆದಾರರು, “ಬಸ್ ಅಬ್ PM ಬನಾ ಹಿ ದೊ” (ಇನ್ನು ಇವರನ್ನು ಪ್ರಧಾನಿ ಮಾಡಿಬಿಡಿ) ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿ, ಈ ಹೇಳಿಕೆಯು ಆರ್ಥಿಕ ತರ್ಕಕ್ಕಿಂತ ಹೆಚ್ಚಾಗಿ ರಾಜಕೀಯ ಮಹತ್ವಾಕಾಂಕ್ಷೆಗಳನ್ನು ಹೊಂದಿದೆ ಎಂದು ಸೂಚಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಉಲ್ಲೇಖಿಸಿ, ಮುಸ್ಲಿಮೇತರರ ಟ್ರಿಬ್ಯೂನಲ್ ಪ್ರಕರಣ ಕೈಬಿಡಲು ಅಸ್ಸಾಂ ಸರಕಾರ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...