Homeಮುಖಪುಟನವೆಂಬರ್ ಒಳಗೆ ದೆಹಲಿಯ ಎಲ್ಲಾ ಸರ್ಕಾರಿ ಶಾಲಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಕೆ: ಅರವಿಂದ್ ಕೇಜ್ರಿವಾಲ್

ನವೆಂಬರ್ ಒಳಗೆ ದೆಹಲಿಯ ಎಲ್ಲಾ ಸರ್ಕಾರಿ ಶಾಲಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಕೆ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ಶಾಲಾ ಮಕ್ಕಳ ಮತ್ತು ಶಿಕ್ಷಕರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರಿ ಶಾಲೆಗಳಲ್ಲಿ ಸಿಸಿಟಿವಿ ಕ್ಯಾಮರಗಳನ್ನು ಅಳವಡಿಸುವ ಮಹತ್ವದ ಪೈಲೆಟ್ ಯೋಜನೆಗೆ ದೆಹಲಿ ಸರ್ಕಾರ ಇಂದು ಚಾಲನೆ ನೀಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಇದು ಇಡೀ ಶಿಕ್ಷಣ ವ್ಯವಸ್ಥೆಯನ್ನು ಪಾರದರ್ಶಕ ಮತ್ತು ಉತ್ತರದಾಯಿತ್ವವನ್ನಾಗಿ ಮಾಡಲಿದೆ ಎಂದು ಅಭಿಪ್ರಾಯ ಪಟ್ಟಿರುವ ಕೇಜ್ರಿವಾಲ್, ಶೀಘ್ರದಲ್ಲೇ ದೆಹಲಿಯ ಎಲ್ಲಾ ಸರ್ಕಾರಿ ಶಾಲಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮರ ಅಳವಡಿಸುತ್ತೇವೆ ಎಂದಿದ್ದಾರೆ.

ದೆಹಲಿಯ ಲಜಪತ್ ನಗರ್ ನಗರದಲ್ಲಿನ ಶಹೀದ್ ಹೇಮು ಕಲ್ಯಾಣಿ ಸರ್ವೋದಯ ವಿದ್ಯಾಲಯದಲ್ಲಿ ಸಿಸಿಟಿವಿ ಕ್ಯಾಮರ ಯೋಜನೆ ಉದ್ಘಾಟಿಸಿ ಅರವಿಂದ್ ಕೇಜ್ರಿವಾಲ್ ಮಾತಾಡಿದ್ದಾರೆ.

ಇಂದಿನ ಸಂದರ್ಭದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಪಡುತ್ತಿದ್ದಾರೆ. ದೆಹಲಿಯಲ್ಲಿ ಇನ್ನು ಮುಂದೆ ಇಂತಹ ಪರಿಸ್ಥಿತಿ ಬರದಂತೆ ನಾವು ನೋಡಿಕೊಳ್ಳುತ್ತೇವೆ. ಪೋಷಕರು ಇರುವಲ್ಲಿಂದಲೇ ತಮ್ಮ ಮೊಬೈಲ್ ಗಳಲ್ಲಿ ತಮ್ಮ ಮಗ/ಮಗಳು ಸುರಕ್ಷಿತವಾಗಿದ್ದಾರೋ, ಇಲ್ಲವೋ ಎಂಬುದನ್ನು ನೋಡಬಹುದೆಂಬ ಭರವಸೆ ನೀಡುತ್ತಿದ್ದೇವೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ವಿರೋಧ ಪಕ್ಷಗಳು ಸಿಸಿಟಿವಿ ಕ್ಯಾಮರ ಅಳವಡಿಕೆಯ ವಿಚಾರಕ್ಕೆ ಅಪಪ್ರಚಾರ ಮಾಡುತ್ತಿದ್ದಾರೆ. ಮಕ್ಕಳ ಖಾಸಗಿತನಕ್ಕೆ ಧಕ್ಕೆ ಎಂದೆಲ್ಲಾ ಹೇಳಿ ಕೋರ್ಟಿನಲ್ಲಿಯೂ ತಡೆ ತರಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಾವು ಇದನ್ನು ಬಿಟ್ಟು ಕೊಡುವುದಿಲ್ಲ. ಇದೊಂದು ಕ್ರಾಂತಿಕಾರಕ ಹೆಜ್ಜೆಯಾಗಿದ್ದು ಇದು ನಮ್ಮ ಮಕ್ಕಳ ಸುರಕ್ಷತೆಗೆ ಸಹಾಯ ಮಾಡಲಿದೆ ಎಂದಿದ್ದಾರೆ.

ದೆಹಲಿ ಸರ್ಕಾರಿ ಶಾಲೆಯ ಪ್ರಯೋಗಾಲಯ

ಇಂದು ಶಿಕ್ಷಣ ಕ್ಷೇತ್ರದಲ್ಲಿ ಐತಿಹಾಸಿಕ ದಿನ, ಈ ಶಾಲೆಯಲ್ಲಿ ಸಿಸಿಟಿವಿ ಕ್ಯಾಮರ ಅಳವಡಿಕೆಯ ಕಾರ್ಯ ಪೂರ್ಣಗೊಂಡಿದೆ. ಇದು ಪೋಷಕರು ಮತ್ತು ಮಕ್ಕಳನ್ನು ನೇರವಾಗಿ ಬೆಸೆಯುವ ಕೊಂಡಿಯಾಗಿದೆ. ನವೆಂಬರ್ ಒಳಗಾಗಿ ದೆಹಲಿಯ ಶಾಲೆಗಳಿಗೂ ಈ ಸೌಲಭ್ಯ ನೀಡುತ್ತೇವೆ.

“ಸಣ್ಣ ವಯಸ್ಸಿನ ಅತ್ಯಾಚಾರ ಸಂತ್ರಸ್ತೆಯನ್ನು ನೋಡಿ ನಾನು ತಲ್ಲಣಿಸಿಹೋಗಿದ್ದೆ. ರಾಷ್ಟ್ರ ರಾಜಧಾನಿಯಲ್ಲಿಯೇ ಮಕ್ಕಳು ಸುರಕ್ಷಿತವಾಗಿಲ್ಲ ಅಂದರೆ ನಾವೆಲ್ಲರೂ ನಾಚಿಕೆಯಿಂದ ತಲೆತಗ್ಗಿಸಬೇಕು. ಅತ್ಯಾಚಾರ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸಿಸಿಟಿವಿ ಕ್ಯಾಮರಗಳು ಸಹಾಯಕವಾಗಿವೆ. ಅದಕ್ಕಾಗಿ ದೆಹಲಿಯಾದ್ಯಂತ ನಾವು ಸಿಸಿಟಿವಿ ಕ್ಯಾಮರಗಳನ್ನು ಅಳವಡಿಸುತ್ತೇವೆ. ಜೊತೆಗೆ ನಾವು ದೆಹಲಿಯನ್ನು ಸರುಕ್ಷಿತವಾಗಿಡಲು ಕೇಂದ್ರ ಸರ್ಕಾರದೊಂದಿಗೆ ಕೈ ಜೋಡಿಸಲು ಸಿದ್ದರಿದ್ದೇವೆ” ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಬೆಳಿಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಇಬ್ಬರೂ ಅತ್ಯಾಚಾರಕ್ಕೊಳಗಾಗಿದ್ದ 6 ವರ್ಷದ ಹೆಣ್ಣುಮಗುವನ್ನು ನೋಡಿ ಕುಟುಂಬಕ್ಕೆ ಸಾಂತ್ವನ ಹೇಳಲು ಸಫ್ದರ್ ಜಂಗ್ ಹಾಸ್ಟಿಟಲ್ ಗೆ ಭೇಟಿ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...