Homeಚಳವಳಿಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

ಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

’ಅನ್ನ ತಿನ್ನುವವರು ಅನ್ನದಾತರನ್ನು ಬೆಂಬಲಿಸಿ ಎಂದರೆ, ನಾನು ರೊಟ್ಟಿ ತಿನ್ನುತ್ತೇನೆ ಎನ್ನುವ ಜನರ ಮನಸ್ಥಿತಿಗಳು ಬದಲಾಗುವವರೆಗೆ ನಮ್ಮ ದೇಶದಲ್ಲಿ ಬದಲಾವಣೆ ಕನಸಿನ ಮಾತು’

- Advertisement -
- Advertisement -

ದೇಶದ ರೈತರು ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ, ಚಳಿ, ಬಿಸಿಲೆನ್ನದೇ ದೇಶದ ರಸ್ತೆಗೆ ಇಳಿದಿದ್ದಾರೆ. ತಮ್ಮ ಹಕ್ಕುಗಳಿಗಾಗಿ, ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದೆಹಲಿ ಚಲೋ ನಡೆಸುತ್ತಿದ್ದಾರೆ. ಇಡೀ ದೇಶವೇ ಅವರ ಬೆನ್ನಿಗೆ ನಿಂತಿದೆ. ಅವರಿಗೆ ಈಗ ಬೇಕಿರುವುದು ನೈತಿಕ ಬೆಂಬಲದ ಜೊತೆಗೆ ಆರ್ಥಿಕ ಬೆಂಬಲದ ಅಗ್ಯವಿದೆ. ಅನ್ನದ ಋಣ ತೀರಿಸಲು ಇದೊಂದು ಸವರ್ಣಾವಕಾಶ.

ನಿನ್ನೆ ಮೂವರು ಕೇಂದ್ರ ಸಚಿವರೊಂದಿಗೆ ನಡೆದ ಸಭೆಯಲ್ಲಿ ಸರ್ಕಾರದ ನಿರ್ಧಾರವನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದು, ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ ಎಂದು AIKSCC ಅಧಿಕೃತ ಹೇಳಿಕೆ ನೀಡಿದೆ.

ಕೇಂದ್ರ ಸರ್ಕಾರ ರೈತರ ಮುಖ್ಯ ಬೇಡಿಕೆಗಳಾವುದನ್ನು ಒಪ್ಪುವ ಲಕ್ಷಣ ಇಲ್ಲ. ಈ ಹಿನ್ನೆಲೆ ರೈತ ಸಂಘಟನೆಗಳು ಮತ್ತಷ್ಟು ದಿನಗಳ ಕಾಲ ದೀರ್ಘ ಹೋರಾಟಕ್ಕೆ ಅಣಿಯಾಗುತ್ತಿವೆ. ದೆಹಲಿಯಲ್ಲಿ ರೈತರ ಸಂಘರ್ಷ ತಿಂಗಳುಗಟ್ಟಲೆ ನಡೆಯಲಿದೆ. ಲಕ್ಷಾಂತರ ಅನ್ನದಾತರು ತಾವೇ ಕೆಲವು ಸಿದ್ಧತೆ ಮಾಡಿಕೊಂಡು ಬಂದಿದ್ದರೂ ವಿವಿಧ ಮೂಲ ಸೌಲಭ್ಯಗಳ ಅಗತ್ಯ ಇನ್ನೂ ಹೆಚ್ಚಾಗಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಬಗ್ಗೆ ಸಮಿತಿ ರಚಿಸುವ ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ರೈತ ಮುಖಂಡರು: ಪ್ರತಿಭಟನೆ…

ರಾಜಸ್ಥಾನ, ಉತ್ತರ ಪ್ರದೇಶ, ಉತ್ತರ ಖಂಡ, ಮಧ್ಯಪ್ರದೇಶ ,ಬಿಹಾರ ಮೊದಲಾದ ಬೇರೆ-ಬೇರೆ ರಾಜ್ಯಗಳ ರೈತರು  ಈ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಆಹಾರ, ನೀರು ಸೇರಿ ಮೂಲಸೌಕರ್ಯಕ್ಕೆ ಆರ್ಥಿಕ ಸಹಾಯದ ಅವಶ್ಯಕತೆ ಇದೆ ಎಂದು ಅಖಿಲ ಭಾರತ ಕಿಸಾನ್ ಸಭಾ (AIKS) ಹೇಳಿದೆ.

ಪ್ರತಿಭಟನೆ ತೀವ್ರಗೊಳ್ಳುವಂತೆಯೇ, ಕೇಂದ್ರ ಸರ್ಕಾರದ ದೌರ್ಜನ್ಯ ಕೂಡ ಹೆಚ್ಚಾಗುವ ಸಂಭವವಿದೆ. ಆದ್ದರಿಂದ ದೊಡ್ಡ ಪ್ರಮಾಣದ ಹಣ ಸಹಾಯ ಅಗತ್ಯ ಇದೆ. ದೇಶದ ಜನರು, ಸಾಧ್ಯವಿರುವವರೆಲ್ಲಾ ಧನ ಸಹಾಯ ಮಾಡಿ ಎಂದು ಸಂಘಟನೆ ಮನವಿ ಮಾಡಿದೆ.

ದೆಹಲಿ ಚಲೋ

ದೇಶದ ಬಹುಸಂಖ್ಯಾತ ಅನ್ನದಾತರು ಬಡವರು, ವಿಶ್ವಕ್ಕೆ ಅನ್ನ ನೀಡುವ ಇವರು ತಮ್ಮ ಸಹಾಯಕ್ಕೆ ಮತ್ತೊಬ್ಬರ ಬಳಿ ಬೇಡುವ ಪರಿಸ್ಥಿತಿ ತಂದಿರುವ ಸರ್ಕಾರದ ವಿರುದ್ಧ ಸಾಮಾಜಿಕ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವೇ ಕೆಲವು ಸಂಖ್ಯೆಯಲ್ಲಿ ಕಾರುಗಳಲ್ಲಿ ಓಡಾಡುವವರನ್ನು ಗುರಿಯಾಗಿಸಿಕೊಂಡು ಮಾತನಾಡುವ ಜನತೆಗೆ ನೆಲ ಮೂಲದ ರೈತರ ಬವಣೆಗಳ ಬಗ್ಗೆ ಕನಿಷ್ಠ ಜ್ಞಾನವು ಇಲ್ಲ ಎಂದು ಟೀಕಿಸಿದ್ದಾರೆ. ಪ್ರತಿದಿನ ನಾವು ತಿನ್ನುವ ಅನ್ನವನ್ನೂ ನೊಡಿದಾಗಲಾದರೂ ಅನ್ನದಾತರ ಬೆಲೆ ಅರ್ಥವಾದಿತ್ತು. ಆದರೆ, ವಾಟ್ಸಾಪ್ ಯೂನಿವರ್ಸಿಟಿಗಳಲ್ಲಿ ಪದವಿ ಪಡೆದ ಜನರು ರೈತರನ್ನು ಭಯೋತ್ಪಾದಕರು ಎನ್ನುವ ಮಟ್ಟಕ್ಕೆ ಬಂದಿದ್ದಾರೆ. ಇದು ಕಳವಳಕಾರಿ ಸಂಗತಿ ಎಂದು ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ಅನ್ನ ತಿನ್ನುವವರು ಅನ್ನದಾತರನ್ನು ಬೆಂಬಲಿಸಿ ಎಂದರೆ, ನಾನು ರೊಟ್ಟಿ ತಿನ್ನುತ್ತೇನೆ ಎನ್ನುವ ಜನರ ಮನಸ್ಥಿತಿಗಳು ಬದಲಾಗುವವರೆಗೆ ನಮ್ಮ ದೇಶದಲ್ಲಿ ಬದಲಾವಣೆ ಕನಸಿನ ಮಾತು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರೊಬ್ಬರು ಹೇಳುತ್ತಾರೆ.

ಸದ್ಯ ದೇಶದಲ್ಲಿ ಭುಗಿಲೆದ್ದಿರುವ ರೈತರ ಪ್ರತಿಭಟನೆಗೆ ದೇಶದ ಜನರ ನೈತಿಕ ಬೆಂಬಲದ ಜೊತೆಗೆ ಆರ್ಥಿಕ ಬೆಂಬಲದ ಅಗತ್ಯವೂ ಇದ್ದು, ಭಾರತ ಮಾತೆಯ ರೈತ ಮಕ್ಕಳು ತಮಗೆ ಸಹಾಯ ನೀಡಿ ಎಂದು ಕೇಳುತ್ತಿದ್ದಾರೆ. ಅನ್ನದ ಋಣ ತೀರಿಸಲು ಇದೊಂದು ಸುವರ್ಣಾವಕಾಶವೆ ಸರಿ.

ಬ್ಯಾಂಕ್ ಖಾತೆ ವಿವರಗಳು ಹೀಗಿವೆ:

The Bank Account Details are as follows:

Name: All India Kisan Sabha

A/C No: 20032032844

Bank: ALLAHABAD BANK

Address: ALLAHABAD BANK BUILDING,

17 PARLIAMENT STREET, NEW DELHI

State: DELHI

IFSC Code: ALLA0210163 (used for RTGS, IMPS and NEFT transactions)

Branch Code: 210163

MICR Code: 110010026


ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...