Homeಕರ್ನಾಟಕJNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

94 ಸಾವಿರ ಕೋಟಿ ಶಿಕ್ಷಣ ಸೆಸ್‌ ಸಂಗ್ರಹವಾಗಿದೆ. ಸಂಶೋಧನೆ ಮತ್ತು ಅಭಿವೃದ್ದಿಗಾಗಿ ಎಂಟು ಸಾವಿರ ಕೋಟಿ ರೂ ಸಂಗ್ರಹಿಸಲಾಗಿದೆ. ಈ ಹಣವೆಲ್ಲ ಎಲ್ಲಿ ಹೋಯಿತು ಎಂದು ಬಿ.ಶ್ರೀಪಾದ್‌ ಭಟ್‌ ಪ್ರಶ್ನಿಸಿದ್ದಾರೆ.

- Advertisement -
- Advertisement -

JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ. ಆ ಮೂಲಕ ಜೆಎನ್‌ಯು ವಿದ್ಯಾರ್ಥಿಗಳ ಪರ ನಾವಿದ್ದೇವೆ ಎಂದು ಸಂದೇಶ ಸಾರಿದ್ದಾರೆ.

ಬೆಂಗಳೂರು

SFI, AISF, AIDSO, KVS ಸೇರಿದಂತೆ ಹಲವು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಲಾಯಿತು.

ಸಾಮಾಜಿಕ ಚಿಂತಕರಾದ ಬಿ.ಶ್ರೀಪಾದ್‌ ಭಟ್‌ ಮಾತನಾಡಿ “ಈಗಿರುವ ಕೇಂದ್ರ ಸರ್ಕಾರ ಜೆಎನ್‌ಯುವನ್ನು ಇತರ ಸಂಸ್ಥೆಗಳ ರೀತಿ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಈ ಕಬ್ಜಕ್ಕೆ ಜೆಎನ್‌ಯು ಒಳಗಾಗದೇ ಪ್ರತಿರೋಧಿಸುತ್ತಿದೆ. ಹಾಗಾಗಿ ಜೆಎನ್‌ಯು ನಾಶಕ್ಕೆ ಕೇಂದ್ರ ಮುಂದಾಗಿದೆ ಎಂದರು.

94 ಸಾವಿರ ಕೋಟಿ ಶಿಕ್ಷಣ ಸೆಸ್‌ ಸಂಗ್ರಹವಾಗಿದೆ. ಸಂಶೋಧನೆ ಮತ್ತು ಅಭಿವೃದ್ದಿಗಾಗಿ ಎಂಟು ಸಾವಿರ ಕೋಟಿ ರೂ ಸಂಗ್ರಹಿಸಲಾಗಿದೆ. ಈ ಹಣವೆಲ್ಲ ಎಲ್ಲಿ ಹೋಯಿತು ಎಂದು ನಾವು ಕೇಂದ್ರ ಸರ್ಕಾರವನ್ನು ಪ್ರಶ್ನಿಸಬೇಕಾಗಿದೆ. ಪ್ರತಿವರ್ಷ ಒಂದು ಸಾವಿರದಷ್ಟು ಸಂಶೋಧನಾ ಪ್ರಬಂಧಗಳು ಜೆಎನ್‌ಯುವಿನಿಂದ ಹೊರಬರುತ್ತವೆ. 8 ಸಾವಿರ ವಿದ್ಯಾರ್ಥಿಗಳು ಅಲ್ಲಿ ಓದುತ್ತಿದ್ದು ವಾರ್ಷಿಕ ಸುಮಾರು 500 ಕೋಟಿಯಷ್ಟೇ ಖರ್ಚಾಗುತ್ತಿದೆ. ಹೀಗಿರುವಾಗ ಒಂದು ವರ್ಷಕ್ಕೆ ತನ್ನ ಪ್ರಚಾರಕ್ಕಾಗಿ 2000 ಸಾವಿರ ಕೋಟಿಗೂ ಅಧಿಕ ಖರ್ಚು ಮಾಡುವ ಕೇಂದ್ರ ಸರ್ಕಾರ ಈ ವಿದ್ಯಾರ್ಥಿಗಳ ಮೇಲೆ ಶುಲ್ಕ ಹೆಚ್ಚಿಸುವುದು ಅನ್ಯಾಯವಲ್ಲವೇ ಎಂದು ಪ್ರಶ್ನಿಸಿದರು.

ಬನಾರಸ್‌ ವಿ.ವಿಯಲ್ಲಿ ಫಿರೋಜ್‌ ಖಾನ್‌ ಎಂಬ ಸಂಸ್ಕೃತ ಶಿಕ್ಷಕ ಪಾಠ ಮಾಡಬಾರದೆಂದು ಪ್ರತಿಭಟನೆ ನಡೆದರೆ ಅದಕ್ಕೆ ಪೊಲೀಸರ ಸರ್ಕಾರದ ಬೆಂಬಲವಿದೆ. ವಿದ್ಯಾರ್ಥಿಗಳು ಯಜ್ಞ ಮಾಡಿ ತೊಂದರೆ ಕೊಡುತ್ತಿದ್ದಾರೆ. ಇದು ಸ್ವತಃ ನರೇಂದ್ರ ಮೋದಿಯವರ ಕ್ಷೇತ್ರವಾಗಿದ್ದು ಅವರು ಸಹ ಬಾಯಿ ಬಿಟ್ಟಿಲ್ಲ. ಆದರೆ ಇಲ್ಲಿ ಜೆಎನ್‌ಯುನಲ್ಲಿ ಪ್ರಜಾತಂತ್ರದ ಉಳಿವಿಗಾಗಿ ವಿದ್ಯಾರ್ಥಿಗಳ ಹೋರಾಟ ನಡೆಸಿದರೆ ಅವರ ಮೇಲೆ ಪೊಲೀಸರು ಲಾಠಿ ಬೀಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಯುಜಿಸಿ ರದ್ದು ಮಾಡಿ ಆ ಮೂಲಕ ಉನ್ನತ ಶಿಕ್ಷಣಕ್ಕೆ ನೀಡುವ ಅನುದಾನವನ್ನು ತನ್ನ ವ್ಯಾಪ್ತಿಗೆ ತೆಗೆದುಕೊಳ್ಳಲು ಕೇಂದ್ರ ನಿರ್ಧರಿಸಿದೆ. ಈ ಜೆಎನ್‌ಯು ಶುಲ್ಕ ಹೆಚ್ಚಳದ ಹಿಂದೆಯೂ ಇದೇ ಹುನ್ನಾರವಿದೆ ಎಂದು ಕಿಡಿಕಾರಿದರು.

ಎಸ್‌ಎಫ್‌ಐ ವಿ.ಅಂಬರೀಶ್, ಗುರುರಾಜ ದೇಸಾಯಿ, ಎಐಎಸ್‌ಎಫ್‌ನ ಜ್ಯೋತಿ, ಎಐಡಿಎಸ್‌ಓನ ಅಶ್ವಿನಿ ಕೆ.ಎಸ್, ಅಜಯ್‌ಕಾಮತ್‌, ಕೆವಿಎಸ್‌ನ ಸರೋವರ್‌ ಬೆಂಕಿಕೆರೆ, ಗುರುಮೂರ್ತಿ ಮತ್ತಿತರರು ಭಾಗವಹಿಸಿದ್ದರು.

ರಾಯಚೂರು

ಹೊಸ ಶಿಕ್ಷಣ ನೀತಿ ಮತ್ತು ಶಿಕ್ಷಣ ಖಾಸಗಿಕರಣದ ಭಾಗವಾಗಿ JNU ವಿದ್ಯಾರ್ಥಿಗಳ ಶುಲ್ಕ ಹೆಚ್ಚಳವನ್ನು ವಿರೋಧಿಸಿ ರಾಯಚೂರಿನಲ್ಲಿ KVS, SFI ಮತ್ತು ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟಿನೆ ನಡೆಯಿತು.

ವಿದ್ಯಾರ್ಥಿಗಳು ಶಾಂತಿಯುತವಾಗಿ ಸಂಸತ್ತಿಗೆ ಪ್ರತಿಭಟನೆ ಮೆರವಣಿಗೆ ಹೋಗುವಾಗ ರಕ್ಷಣೆ ಮಾಡುವಂಥ ಪೋಲೀಸರೇ ಕೇಂದ್ರ ಸರ್ಕಾರದ ಕುಮ್ಮಕ್ಕುನಿಂದ ಜೆಎನ್ಯೂ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಜಲ ಪ್ರಹಾರ ಮಾಡಿರುವ ಕ್ರೌರ್ಯವನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.

ಸಿಂಧನೂರು

JNU ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಆರ್ಥಿಕ ಹಾಗೂ ದೈಹಿಕ ಹಲ್ಲೆ ಖಂಡಿಸಿ ಸಿಂಧನೂರಿನಲ್ಲಿ ಪ್ರತಿಭಟನೆ ನಡೆಯಿತು.

ಸಿಂಧನೂರಿನ ತಾಲ್ಲೂಕು ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಸಮದ್‌ ಚೌದ್ರಿ, ನಾಗರಾಜ್‌ ಪುಜಾರ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ದಾವಣಗೆರೆ

JNU ವಿದ್ಯಾರ್ಥಿ ಗಳ ಮೇಲಿನ ದಾಳಿಯನ್ನು ಖಂಡಿಸಿ ಅವರ ಹೋರಾಟಕ್ಕೆ ಬೆಂಬಲಿಸಿ ಇಂದು ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನೆ ನಡೆಯಿತು. AISF ನ ವೀಣಾ ಮತ್ತು SFI ಮುಖಂಡರು ಹಾಜರಿದ್ದರು

ಕಲಬುರಗಿ

ಕಲಬರುಗಿಯಲ್ಲಿ ಜೆಎನ್‌ಯು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಮೆರವಣಿಗೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಚಿಂತಕಿ, ಹೋರಾಟಗಾರ್ತಿ, ಕೆ.ನೀಲಾ, ಕೆವಿಎಸ್‌ನ ರಾಜೇಂದ್ರ ರಾಜವಾಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಜೆ.ಎನ್.ಯು ಹೋರಾಟಕ್ಕೆ ಬೆಂಬಲಿಸಿ ಮೊಟ್ಟಮೊದಲು ಪ್ರತಿಭಟನೆ ಮಾಡಿದ್ದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ, ಅದನ್ನು ನೀವು Mention ಮಾಡಿಲ್ಲ.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...