Homeಕರ್ನಾಟಕಅಂತಾರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ಸರ್ವ ಪಕ್ಷ ಸಭೆ: ಸಿಎಂ

ಅಂತಾರಾಜ್ಯ ಜಲವಿವಾದ ಸಂಬಂಧ ಫೆಬ್ರವರಿಯಲ್ಲಿ ಸರ್ವ ಪಕ್ಷ ಸಭೆ: ಸಿಎಂ

- Advertisement -
- Advertisement -

ಅಂತಾರಾಜ್ಯ ಜಲ ವಿವಾದಗಳ ಕುರಿತು ಚರ್ಚಿಸಲು ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಂಬಂಧಪಟ್ಟ ಸಚಿವ ಸಹೋದ್ಯೋಗಿಗಳು, ಕಾನೂನು ತಜ್ಞರು ಮತ್ತು ಹಿರಿಯ ವಕೀಲರೊಂದಿಗೆ ಅಂತಾರಾಜ್ಯ ಜಲ ವಿವಾದಗಳ ಕುರಿತು ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕೃಷ್ಣಾ, ಕಾವೇರಿ ನದಿಗಳಿಗೆ ಸಂಬಂಧಿಸಿದ ವಿವಾದಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ನದಿ ಜಲಾನಯನ ಪ್ರದೇಶಗಳು ಮತ್ತು ಮಹದಾಯಿ ಯೋಜನೆ ವಿಷಯಗಳು ನ್ಯಾಯಾಲಯದ ಮುಂದಿವೆ. ಜನವರಿ ಅಂತ್ಯದೊಳಗೆ ಈ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಮತ್ತೊಂದು ವಿಡಿಯೋ ಕಾನ್ಫರೆನ್ಸ್ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಕಾನೂನು ಸಲಹೆಗಾರರು, ಜಲಸಂಪನ್ಮೂಲ ಸಚಿವರು ಮತ್ತು ಕಾನೂನು ಸಚಿವರೊಂದಿಗೆ ಕಾನೂನು ಹೋರಾಟದ ಪ್ರಗತಿಯ ಕುರಿತು ಚರ್ಚಿಸುತ್ತೇವೆ. ನಾವು ಹೇಗೆ ಮುಂದೆ ಸಾಗಬೇಕು, ರಾಜ್ಯದ ಹಿತದೃಷ್ಟಿಯಿಂದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತೀರ್ಮಾನಿಸುತ್ತೇವೆ ಅವರು ಹೇಳಿದ್ದಾರೆ.

ಕೆಲವು ಪ್ರಕರಣಗಳು ನಿರ್ಣಾಯಕ ಹಂತದಲ್ಲಿದ್ದು, ಕಾನೂನು ತಜ್ಞರು ಮತ್ತು ವಿರೋಧ ಪಕ್ಷದ ನಾಯಕರೊಂದಿಗೆ ಮತ್ತೊಮ್ಮೆ ಚರ್ಚಿಸಬೇಕಾಗಿದೆ. ಫೆಬ್ರವರಿ ಮೊದಲ ವಾರದಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಈ ಎಲ್ಲ ವಿಷಯಗಳ ಬಗ್ಗೆ ಚರ್ಚಿಸಿ ನಮ್ಮ ನಿಲುವು ತಾಳುತ್ತೇವೆ ಎಂದಿದ್ದಾರೆ.

ಮೇಕೆದಾಟು ಯೋಜನೆಗೆ ಪ್ರತಿಯಾಗಿ ತಮಿಳುನಾಡು ಹೊಗೇನಕಲ್-2 ಯೋಜನೆಯನ್ನು ಜಾರಿಗೆ ತರಲು ಪ್ರಯತ್ನಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಬೊಮ್ಮಾಯಿಯವರು, ಸರ್ಕಾರವಾಗಿ ನಾವು ಈ ಹಿಂದೆಯೂ ಇಂತಹ ಸವಾಲುಗಳನ್ನು ಎದುರಿಸಿದ್ದೇವೆ. ತಮಿಳುನಾಡಿನ ಹೊಗೇನಕಲ್-2 ಮತ್ತು ನದಿ ಜೋಡಣೆ ಯೋಜನೆಗಳನ್ನು ಕರ್ನಾಟಕ ಈಗಾಗಲೇ ವಿರೋಧಿಸಿದೆ. ನಾವು ಸುಪ್ರೀಂ ಕೋರ್ಟ್‌ನಲ್ಲಿಯೂ ಅರ್ಜಿ ಸಲ್ಲಿಸಿದ್ದೇವೆ. ಈ ಯೋಜನೆಗಳಿಗೆ ಅನುಮೋದನೆ ನೀಡದಂತೆ ಕೇಂದ್ರ ಜಲ ಆಯೋಗಕ್ಕೆ ಮನವಿ ಮಾಡಿದ್ದೇವೆ. ನಾವು ಬಲವಾದ ಕಾನೂನು ಹೋರಾಟವನ್ನು ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಹಿರಿಯ ವಕೀಲರಾದ ಶ್ಯಾಮ್ ದಿವಾನ್ ಮತ್ತು ಮೋಹನ್ ಕಾತರಕಿ ವಾಸ್ತವ ಅವರು ಸಭೆಯಲ್ಲಿ ಭಾಗವಹಿಸಿದ್ದರು.

ಇತ್ತೀಚೆಗೆ ಕಾಂಗ್ರೆಸ್ ಪಕ್ಷವು ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಆರಂಭಿಸಿತ್ತು. ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ವಾಕ್ಸಮರ ನಡೆಸಿದ್ದವು.  ಪತ್ರಿಕೆಗಳಲ್ಲಿ ಜಾಹೀರಾತು ವಾರ್‌ ಕೂಡ ನಡೆದಿತ್ತು. ಈ ಕಾರಣಕ್ಕೆ ಮುಂದಿನ ಸರ್ವಪಕ್ಷ ಸಭೆ ಕುತೂಹಲ ಕೆರಳಿಸಿದೆ.


ಇದನ್ನೂ ಓದಿರಿ: ಕಾವೇರಿಯ ಉಳಿವಿಗೆ ‘ಮೇಕೆದಾಟು ಅಣೆಕಟ್ಟು’ ಪ್ರಸ್ತಾಪ ಕೈಬಿಡಬೇಕು: ಮೇಧಾ ಪಾಟ್ಕರ್‌‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಠ್ಯ ಪರಿಷ್ಕರಣೆ ವಿವಾದಕ್ಕೆ ಕಾರ್ಟೂನ್‌ಗಳು ಸ್ಪಂದಿಸಿದ್ದು ಹೀಗೆ…

0
ಕರ್ನಾಟಕದಲ್ಲಿ ಪಠ್ಯ ಪರಿಷ್ಕರಣೆ ವಿವಾದ ತಾರಕಕ್ಕೆರಿದೆ. ಕರ್ನಾಟಕ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ಸಮಿತಿ ಮಾಡಿರುವ ಪರಿಷ್ಕರಣೆಗಳು ಸಂವಿಧಾನ ವಿರೋಧಿಯಾಗಿದ್ದು, ಒಂದು ಸಮುದಾಯವನ್ನು ಮಾತ್ರ ಪರಿಗಣಿಸಿವೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ಎಳೆಯ...