Homeಕರ್ನಾಟಕಶಾಂತಿ-ಸೌಹಾರ್ದತೆ ಉದ್ದೀಪಿಸಲು ಉಡುಪಿಯಲ್ಲಿ ಸಾಮರಸ್ಯ ನಡಿಗೆ-ಸಹಬಾಳ್ವೆ ಸಮಾವೇಶ

ಶಾಂತಿ-ಸೌಹಾರ್ದತೆ ಉದ್ದೀಪಿಸಲು ಉಡುಪಿಯಲ್ಲಿ ಸಾಮರಸ್ಯ ನಡಿಗೆ-ಸಹಬಾಳ್ವೆ ಸಮಾವೇಶ

- Advertisement -
- Advertisement -

ಮುಸ್ಲಿಂ ಹೆಣ್ಣು ಮಕ್ಕಳು ತರಗತಿ ಕೊಠಡಿಗಳಿಗೆ ಹಿಜಾಬ್ ಧರಿಸಿ ಬರಬಾರದೆಂಬ ವಿವಾದವನ್ನು ಉಡುಪಿಯಲ್ಲಿ ಹುಟ್ಟುಹಾಕಿದ ನಂತರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ವಿವಾದ ಕೋರ್ಟ್ ಮೆಟ್ಟಿಲೇರಿತ್ತು. ಆ ನಂತರ ಕಾಲೇಜುಗಳು ಮತ್ತೆ ಆರಂಭವಾದಾಗ ವಿವಿಧ ಮುಸ್ಲಿಮೇತರ ಸಮುದಾಯದ ಹೆಣ್ಣುಮಕ್ಕಳು ಹಿಜಾಬ್ ಧರಿಸಿದ ಮುಸ್ಲಿಂ ಬಾಲಕಿಯ ಕೈಹಿಡಿದು ಶಾಲೆ ಪ್ರವೇಶಿಸಿದ ಫೋಟೋವೊಂದು ವೈರಲ್ ಆಗಿತ್ತು. ಇರ್ಷಾದ್ ಮೊಹಮ್ಮದ್ ತೆಗೆದ ಆ ಚೆಂದದ ಫೋಟೋವನ್ನು ‘Unity in Diversity’ ಶೀರ್ಷಿಕೆಯಡಿ ಡೆಕ್ಕನ್ ಹೆರಾಲ್ಡ್ ಪ್ರಕಟಿಸಿತ್ತು. ಈ ಜಾತಿ ಧರ್ಮದ ದ್ವೇಷ ದೊಡ್ಡವರು ಮಾಡಬಹುದು, ಆದರೆ ನಾವು ಎಳೆಯರು, ನಾವು ಗೆಳೆಯರು ನಮ್ಮಲ್ಲಿ ಅದಕ್ಕೆ ಅವಕಾಶವಿಲ್ಲವೆಂಬ ಸಂದೇಶವನ್ನು ಆ ಪುಟ್ಟ ಮಕ್ಕಳು ಸಾರಿದ್ದರು. ’ಇದು ನನ್ನ ಭಾರತ’ ಎಂದು ಸಾವಿರಾರು ಜನರು ಆ ಫೋಟೊವನ್ನು ಹಂಚಿಕೊಂಡಿದ್ದರು.

ಈ ರೀತಿಯ ಶಾಂತಿ ಸಹಬಾಳ್ವೆ ಸಾಮರಸ್ಯ ಸಾಮಾನ್ಯ ಜನರಲ್ಲಿ ಹಾಸುಹೊಕ್ಕಾಗಿದೆ. ಆದರೆ ದ್ವೇಷದ ಮೂಲಕ ರಾಜಕೀಯ ಲಾಭ ಪಡೆಯಲು ಹವಣಿಸುವವರು ಅಂತಹ ಸಾಮರಸ್ಯಕ್ಕೆ ಗಲಭೆಗಳ ಮೂಲಕ ಹುಳಿಹಿಂಡಲು ಪದೇಪದೇ ಪ್ರಯತ್ನಿಸುತ್ತಿದ್ದಾರೆ. ಅಧಿಕಾರದಲ್ಲಿರುವ ಸರ್ಕಾರವೇ ಅಂತಹ ಕೆಲಸಕ್ಕೆ ಕುಮ್ಮಕ್ಕು ನೀಡಿದರೆ ಏನಾಗಬಹುದು ಎಂಬುದಕ್ಕೆ ನಮ್ಮ ಕರ್ನಾಟಕ ಸಾಕ್ಷಿಯಾಗಿದೆ. ಉಡುಪಿಯ ಕಾಪುವಿನಲ್ಲಿ ಮಾರಿಗುಡಿ ಜಾತ್ರೆಯ ಸಂದರ್ಭದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಪ್ರವೇಶವಿಲ್ಲ ಎಂಬ ಬ್ಯಾನರ್ ಹಾಕುವ ಮೂಲಕ ಬಿಜೆಪಿ ಬೆಂಬಲಿತ ಸಂಘಪರಿವಾರದ ಸಂಘಟನೆಗಳು ಕೋಮು ಧ್ರುವೀಕರಣ ಮತ್ತು ದ್ವೇಷ ಹುಟ್ಟುಹಾಕುವ ಪ್ರಕ್ರಿಯೆಗೆ ಮುಂದಾಗಿದ್ದವು. ಆದರೆ ಜಾತ್ರೆಗೆ ಬಂದಿದ್ದ ಭಕ್ತಾದಿಗಳು ಸಂಘಪರಿವಾರದ ಬೆದರಿಕೆಗಳಿಗೆ ಸೊಪ್ಪು ಹಾಕದೆ ಮುಸ್ಲಿಂ ವ್ಯಾಪಾರಿಗಳೊಂದಿಗೆ ವ್ಯಾಪಾರ ಮಾಡಿದರು. ಜಾತ್ರೆಯ ’ವಾಲಗ ಚಾಕರಿ’ಯನ್ನು ಸಂಪ್ರದಾಯದಂತೆ ಮುಸ್ಲಿಂ ಸಮುದಾಯದ ವ್ಯಕ್ತಿಗಳೆ ನಡೆಸಿಕೊಟ್ಟರು. ಎರಡು ದಿನವೂ ವಾಲಗ ಊದಿ ’ತುಳುನಾಡಿನ ಪರಂಪರೆ’ಯನ್ನು ಎತ್ತಿಹಿಡಿದರು.

ಈ ಎರಡು ಪ್ರಕರಣಗಳು ತೋರಿಸುವುದೇನೆಂದರೆ ಸರ್ಕಾರವೂ ಸೇರಿಕೊಂಡು, ಸಂಘಪರಿವಾರ, ಮುಖ್ಯವಾಹಿನಿ ಮಾಧ್ಯಮಗಳು ಎಷ್ಟೇ ದ್ವೇಷ ಹರಡಲು ಮುಂದಾದರೂ ಈ ನಾಡಿನ ಸಮುದಾಯಗಳ ಬಹುಸಂಖ್ಯೆಯ ಜನರಿಗೆ ಅದು ಬೇಕಾಗಿಲ್ಲ. ಏಕೆಂದರೆ ನಿತ್ಯವೂ ಅವರ ಬದುಕು ಬವಣೆ ನೂರಾರು ಜನರೊಂದಿಗೆ, ಹಲವು ಸಮುದಾಯಗಳೊಂದಿಗೆ ಹೆಣೆದುಕೊಂಡಿದೆ. ಹಾಗಾಗಿ ಅವರ ನಡುವೆ ಕೊಡುಕೊಳ್ಳುವಿಕೆ ಇಲ್ಲದೆ ಬದುಕು ಸಪ್ಪೆಯಾಗುತ್ತದೆ, ಮತ್ತು ಕೆಲವು ಕಡೆಗೆ ಅದು ವಿನಾಶಕ್ಕೂ ಎಡೆಮಾಡಿಕೊಡುತ್ತದೆ. ಕೊಡು-ಕೊಳ್ಳುವಿಕೆಯ ಸಂಪ್ರದಾಯದ ಪರಿಕಲ್ಪನೆಗಳಲ್ಲೀ ಸೌಹಾರ್ದತೆ-ಸಹಬಾಳ್ವೆಯೂ ಸೇರಿಕೊಂಡಿದೆ. ಆದನ್ನು ಮತ್ತಷ್ಟು ಉದ್ದೀಪನಗೊಳಿಸುವ ಪ್ರಯತ್ನದ ಭಾಗವಾಗಿ ಮೇ 14 ರಂದು ಉಡುಪಿಯಲ್ಲಿ ಸಾಮರಸ್ಯ ನಡಿಗೆ-ಸಹಬಾಳ್ವೆ ಸಮಾವೇಶ ನಡೆಯುತ್ತಿದೆ.

’ಇದು ಬಹಳ ಮೇಲ್ಮಟ್ಟದ ಪರೀಕ್ಷೆ ಅಂದುಕೊಂಡರೂ, ಮುಸ್ಲಿಂ ಸಮುದಾಯವನ್ನು ದ್ವೇಷಿಸುವ ಯುವಕ-ಯುವತಿಯರೆ, ನಿಮಗೆ ವೈಯಕ್ತಿಕವಾಗಿ ಮೋಸ, ಅನ್ಯಾಯ ಮಾಡಿದ ಹತ್ತು ಜನರ ಹೆಸರು ಪಟ್ಟಿಮಾಡಿ ನೋಡಿ. ಅದರಲ್ಲಿ ಮುಸ್ಲಿಮರ ಹೆಸರು ಇರುವುದಕ್ಕಿಂತಲೂ, ನಿಮ್ಮದೆ ಧರ್ಮದ, ನಿಮ್ಮದೆ ಜಾತಿಯ ಜನರ ಹೆಸರುಗಳು ಹೆಚ್ಚು ಇರುತ್ತವೆ. ಹೀಗಿರುವಾಗ ಯಾರೋ ವಿಷ ಹರಡುವ ಇರಾದೆ ಹೊಂದಿರುವವರು ಹೇಳಿದ ಮಾತು ಕೇಳಿ ಮುಸ್ಲಿಮರನ್ನು ಏಕೆ ದ್ವೇಷಿಸುತ್ತೀರಿ? ಎಷ್ಟೋ ಬಾರಿ ನೀವು ಅವರೊಂದಿಗೆ ಒಡನಾಡಿಯಾಗಿರುವುದೇ ಇಲ್ಲ, ಅವರ ಆಚಾರ ವಿಚಾರದ ನೈಜ ದರ್ಶನ ನಿಮಗಾಗಿರುವುದಿಲ್ಲ. ಈ ಒಡನಾಟ ಸಾಧ್ಯವಾಗಿದ್ದರೆ ನೀವು ಅವರನ್ನು ಅಂದರೆ ಒಂದಿಡೀ ಜನಾಂಗವನ್ನು ದ್ವೇಷಿಸಲು ಸಾಧ್ಯವಾಗುವುದಿಲ್ಲ’ ಎಂದು ಗೆಳೆಯರೊಬ್ಬರು ನನಗೆ ಹೇಳಿದ್ದರು. ಅದು ಅಕ್ಷರಶಃ ನಿಜ ಎಂಬುದು ನನ್ನ ಅನುಭವ ಮತ್ತು ಅಭಿಮತ. ಉಡುಪಿಯ ಸಾಮರಸ್ಯ ಸಮಾವೇಶದಲ್ಲಿ ಸರ್ವಧರ್ಮಿಯರು, ಸಕಲ ಸಮುದಾಯದವರು ಬೆರೆತು ದ್ವೇಷ ಬಿತ್ತುವವರನ್ನು ಹಿಮ್ಮೆಟ್ಟಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಪರಸ್ಪರ ಒಡನಾಟವನ್ನು ಹೆಚ್ಚಿಸುವ ಇರಾದೆ ಕೂಡ ಈ ಸಮಾವೇಶಕ್ಕಿದೆ.

ಉಡುಪಿಯ ಅಜ್ಜರಕಾಡು ಹುತಾತ್ಮ ಚೌಕದಿಂದ ಮೇ 14ರ ಶನಿವಾರ ಮಧ್ಯಾಹ್ನ 2 ಗಂಟೆಗೆ ಸಾಮರಸ್ಯ ನಡಿಗೆ ಆರಂಭವಾಗಲಿದೆ. ಸಂಜೆ 4 ಗಂಟೆಗೆ ಕ್ರಿಶ್ಚಿಯನ್ ಶಾಲೆ ಮೈದಾನದಲ್ಲಿ ಸಹಬಾಳ್ವೆ ಸಮಾವೇಶ ನಡೆಯಲಿದೆ. ಸರ್ವಧರ್ಮಗಳ ಧರ್ಮಗುರುಗಳು ಕಾರ್ಯಕ್ರಮ ಉದ್ಘಾಟಿಸಲಿದ್ದು, ಎಂ.ಡಿ ಪಲ್ಲವಿ ಮತ್ತು ತಂಡದವರು ಸೌಹಾರ್ದ ಗೀತೆಗಳನ್ನು ಹಾಡಲಿದ್ದಾರೆ.

ಯೋಗೇಂದ್ರ ಯಾದವ್, ಡಾ. ರೊನಾಲ್ಡ್ ಕೊಲಾಸೊ, ಶಶಿಕಾಂತ್ ಸೆಂಥಿಲ್, ಮಾವಳ್ಳಿ ಶಂಕರ್, ಆರ್ ಮೋಹನ್ ರಾಜ್, ಹೆಚ್.ಆರ್ ಬಸವರಾಜಪ್ಪ, ಚಾಮರಸ ಮಾಲಿ ಪಾಟೀಲ್, ಚುಕ್ಕಿ ನಂಜುಂಡಸ್ವಾಮಿ, ಕೆ.ನೀಲಾ, ಡಾ. ಬೆಳಗಾಮಿ ಮುಹಮ್ಮದ್ ಸಾದ್, ಸಬೀಹ ಫಾತಿಮ ಮತ್ತು ನಜ್ಮಾ ಚಿಕ್ಕನೇರಳೆ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಅತಿಥಿಗಳ ಪಟ್ಟಿಯಲ್ಲಿ ವಿವಾದಾತ್ಮಕ ವ್ಯಕ್ತಿ: ತೀವ್ರ ಟೀಕೆ ನಂತರ ಕೈಬಿಟ್ಟ ಸಮಿತಿ

ಸಾಮರಸ್ಯ ನಡಿಗೆ ಮತ್ತು ಸಹಬಾಳ್ವೆ ಸಮಾವೇಶಕ್ಕೆ ಆರ್ಯ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮಿಯನ್ನು ಆಹ್ವಾನಿಸಲಾಗಿತ್ತು. ಆದರೆ ಅವರು ಬಲಪಂಥೀಯ ವಿಚಾರಗಳನ್ನು ಉಗ್ರ ರೂಪದಲ್ಲಿ ಪ್ರತಿಪಾದಿಸಿದ್ದ ವಿವಾದಾತ್ಮಕ ವ್ಯಕ್ತಿ. ಈ ಹಿಂದೆ ಯೋಗೇಶ್ ಮಾಸ್ಟರ್‌ರವರು ಡುಂಢಿ ಕಾದಂಬರಿ ಬರೆದಾಗ ದೂರು ನೀಡಿದವರಲ್ಲಿ ಒಬ್ಬರಾಗಿ ಅಸಹಿಷ್ಣುತೆಯನ್ನು ತೋರ್ಪಡಿಸಿದ್ದವರು. ಗೋಡ್ಸೆ ಪ್ರತಿಮೆ ನಿರ್ಮಾಣಕ್ಕೆ ಕರೆ ನೀಡಿದ್ದರು. ಹಿಂದೂ ಧರ್ಮದ ಉದ್ಧಾರಕ್ಕೆ ಮಹಿಳೆಯರು ಹತ್ತು ಮಕ್ಕಳು ಹೇರಬೇಕು ಎಂಬೆಲ್ಲಾ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದರು. ಆರ್ಯ ಈಡಿಗ ಸಮುದಾಯವೇ ಅವರನ್ನು ತಮ್ಮ ಸ್ವಾಮಿಯೆಂದು ಒಪ್ಪಿಕೊಳ್ಳುವುದಿಲ್ಲ, ಅವರಿಂದ ಎಂತಹ ಸಹಬಾಳ್ವೆ ಭಾಷಣ ಕೇಳುವುದು ಎಂಬ ತೀಕ್ಷ್ಣ ಟೀಕೆಗಳು ಕೇಳಿಬಂದವು.

ಕೆ.ಎಲ್ ಅಶೋಕ್

ನಂತರ ಸಮಾವೇಶದ ಸಂಘಟನಾ ಸಮಿತಿಯು ಎಚ್ಚೆತ್ತುಕೊಂಡು ಸಭೆ ನಡೆಸಿ ಆ ವ್ಯಕ್ತಿಯನ್ನು ಅತಿಥಿಗಳ ಪಟ್ಟಿಯಿಂದ ಕೈಬಿಟ್ಟಿದ್ದಾರೆ. “ಕೂಲಂಕಷ ಚರ್ಚೆ ಮಾಡದೆ ಆಹ್ವಾನಿಸಿರುವ ತಪ್ಪು ಸಮಿತಿಯಿಂದ ನಡೆದಿರುವುದರಿಂದ, ಸಮಿತಿಯೇ ಕ್ಷಮೆ ಕೋರಿ, ವಿಷಾದ ವ್ಯಕ್ತಪಡಿಸಿ ಅವರನ್ನು ಸಮ್ಮೇಳನದಿಂದ ಕೈಬಿಡುತ್ತಿದೆ” ಎಂದು ಹೇಳಿಕೆ ನೀಡಿತು.

ಇಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ

“ಸಾಮರಸ್ಯ-ಸಹಬಾಳ್ವೆ ಎಂಬುದು ಈ ನೆಲದ ಸಂಸ್ಕೃತಿ ಮತ್ತು ಪ್ರಕೃತಿಯ ಮೂಲಗುಣ. ತಮ್ಮದಲ್ಲದ ಧರ್ಮವನ್ನು ದ್ವೇಷಿಸುವುದು ಸಹಜವಲ್ಲ. ಅದನ್ನು ಉದ್ದೇಶಪೂರ್ವಕವಾಗಿ ಜನರ ಮನಸ್ಸಿನಲ್ಲಿ ಬಿತ್ತಲು ಪ್ರಯತ್ನಿಸಲಾಗುತ್ತಿದೆ. ಅದನ್ನು ಮೀರಿ ಎಲ್ಲಾ ಧರ್ಮಗಳ ಸಾರ ಪ್ರೀತಿ-ಕರುಣೆಯೊಂದೆ. ಅಲ್ಲದೆ ಯಾವುದೇ ಧರ್ಮ ಮೇಲಲ್ಲ, ಯಾವುದೂ ಕೀಳಲ್ಲ, ಇಲ್ಲಿ ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ ಎಲ್ಲರೂ ಸಮಾನರು ಎಂಬುದನ್ನು ಸಾರಲು ಈ ಸಮಾವೇಶ ಹಮ್ಮಿಕೊಂಡಿದ್ದೇವೆ” ಎನ್ನುತ್ತಾರೆ ಸಮಾವೇಶದ ಸಂಘಟಕರಲ್ಲೊಬ್ಬರಾದ ಕೆ.ಎಲ್ ಅಶೋಕ್.

ಬಹುಸಂಖ್ಯಾತರ ಹೆಸರಿನಲ್ಲಿ ಕೋಮು ರಾಜಕೀಯ ಮಾಡಲು ಬಿಡುವುದಿಲ್ಲ

“ಕಳೆದ 5 ತಿಂಗಳುಗಳಲ್ಲಿ ಕರಾವಳಿಯ ಊರುಕೇರಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನರ ನಿತ್ಯ ಬದುಕಿನ ಮೇಲೆ ದಬ್ಬಾಳಿಕೆ ತೀವ್ರವಾಗಿದೆ. ಇದು ಕೋಮುವಾದ ಶಿಖರ ತಲುಪಿದೆ ಎನ್ನುವುದರ ಸಂಕೇತವಾಗಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯ, ನಾಡಿನ ಅಲ್ಪಸಂಖ್ಯಾತ ಸಮುದಾಯ ಸಮಾಜದಿಂದ ಪ್ರತಿಕ್ರಿಯೆ ನಿರೀಕ್ಷಿಸುತ್ತಿದೆ. ಹಾಗಾಗಿ ಅಲ್ಪಸಂಖ್ಯಾತರ ಜೊತೆ ನಾವಿದ್ದೇವೆ ಮತ್ತು ಬಹುಸಂಖ್ಯಾತರ ಹೆಸರಿನಲ್ಲಿ ಕೋಮು ರಾಜಕೀಯ ಮಾಡಲು ಬಿಡುವುದಿಲ್ಲ ಎಂದು ಸಾರಲು ಈ ಸಹಬಾಳ್ವೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಎಲ್ಲಾ ಅಲ್ಪಸಂಖ್ಯಾತರ ಜೊತೆ ನಿಲ್ಲುತ್ತೇವೆ ಮತ್ತು ಈ ನಾಡನ್ನು ಕೋಮುವಾದಿಗಳ ಬೀಡಾಗಲು ಬಿಡುವುದಿಲ್ಲ ಎಂದು ಸಂಕಲ್ಪ ಮಾಡಿದ್ದೇವೆ.

ಕೆ.ಫಣಿರಾಜ್

“ಈ ನಮ್ಮ ನಡಿಗೆಯಲ್ಲಿ ಎಲ್ಲರನ್ನು ಒಳಗೊಳ್ಳುವ, ಎಲ್ಲರನ್ನು ಗೌರವಿಸುವ ಕೆಲಸದಲ್ಲಿ ಕೆಲವು ತಪ್ಪುಗಳಾಗಿವೆ. ಅದಕ್ಕಾಗಿ ಕ್ಷಮೆಯಾಚಿಸುತ್ತೇವೆ ಮತ್ತು ಆ ತಪ್ಪುಗಳನ್ನು ನಾವು ಒಪ್ಪಿಕೊಂಡು ತಿದ್ದಿಕೊಳ್ಳುತ್ತೇವೆ. ಆದರೆ ಆ ತಪ್ಪನ್ನೆ ದೊಡ್ಡದು ಮಾಡಿ ಇಡೀ ಸಮಾವೇಶದ ಆಶಯವನ್ನು ತಪ್ಪಾಗಿ ಅರ್ಥೈಸಬೇಡಿ ಎಂದು ಎಲ್ಲರಲ್ಲಿ ಪ್ರಾರ್ಥಿಸುತ್ತೇವೆ. ಈ ದುರಂತ ಕಾಲದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿರುವುದು ಅತ್ಯಂತ ಅನಿವಾರ್ಯವಾಗಿದ್ದು. ಈ ನಾಡಿನ ಎಲ್ಲಾ ಕಿರಿಯ, ಹಿರಿಯರು ಈ ಸಮಾವೇಶದಲ್ಲಿ ಭಾಗಿಯಾಗಬೇಕೆಂದು ಸಂಘಟನಾ ಸಮಿತಿಯ ಪರವಾಗಿ ಬೇಡಿಕೊಳ್ಳುತ್ತೇನೆ” ಎನ್ನುತ್ತಾರೆ ಸಹಬಾಳ್ವೆ ಸಮಾವೇಶದ ಸಂಚಾಲಕ ಸಮಿತಿ ಸದಸ್ಯರು ಮತ್ತು ಚಿಂತಕರಾದ ಕೆ.ಫಣಿರಾಜ್.

ಇವು ದೇಶ ಕಾಣುತ್ತಿರುವ ಕರಾಳ ದಿನಗಳು. ಈ ಕರಾಳತೆಯನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ನಡೆಯುವ ಯಾವ ಸಣ್ಣ ದೊಡ್ಡ ಕೆಲಸವಾಗಲೀ ಇಂದಿನ ಅಗತ್ಯ. ಆ ನಿಟ್ಟಿನಲ್ಲಿ ಈ ಸಮಾವೇಶದ ಗುರಿ ಈಡೇರಲಿ ಎಂದು ಆಶಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ‘ಮುಸ್ಕಾನ್‌‌’ ಬಗ್ಗೆ ಸುಳ್ಳು ಹಬ್ಬಿಸುತ್ತಿರುವ ಕನ್ನಡ ಮಾಧ್ಯಮಗಳು: ಬೇಸರ ವ್ಯಕ್ತಪಡಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...