Homeಕರ್ನಾಟಕಎಲ್ಲ ಬಲಿಷ್ಠರು 'ಜಾತಿ ಗಣತಿ' ವಿರುದ್ಧ ಒಗ್ಗಟ್ಟಾಗಿದ್ದಾರೆ; ಡಿಕೆಶಿ ನಿಲುವು ವಿರೋಧಿಸಿದ ಖರ್ಗೆ

ಎಲ್ಲ ಬಲಿಷ್ಠರು ‘ಜಾತಿ ಗಣತಿ’ ವಿರುದ್ಧ ಒಗ್ಗಟ್ಟಾಗಿದ್ದಾರೆ; ಡಿಕೆಶಿ ನಿಲುವು ವಿರೋಧಿಸಿದ ಖರ್ಗೆ

- Advertisement -
- Advertisement -

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಜಾತಿ ಗಣತಿ ವರದಿ ಬಿಡುಗಡೆಗೆ ವಿರೋಧಿಸುತ್ತಿದ್ದಾರೆ; ನೀವು (ಬಿಜೆಪಿ) ವಿರೋಧಿಸುತ್ತಿದ್ದೀರಿ. ಬಲಿಷ್ಠ ಜಾತಿ ಜನರೆಲ್ಲಾ ಈ ವಿಚಾರದಲ್ಲಿ ಒಗ್ಗಟ್ಟಾಗಿದ್ದಾರೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ರಾಜ್ಯಸಭೆಯಲ್ಲಿ ಹೇಳಿದರು.

ಜಾತಿ ಜನಗಣತಿ ಕುರಿತು ರಾಜ್ಯ ಸರ್ಕಾರದೊಳಗಿನ ಭಿನ್ನಾಭಿಪ್ರಾಯಗಳ ಬಗ್ಗೆ ಬಿಜೆಪಿ ಸದಸ್ಯರು ಪ್ರಶ್ನಿಸಿದಾಗ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರ ನಿಲುವನ್ನು ಬಹಿರಂಗವಾಗಿಯೇ ಟೀಕಿಸಿದರು. ‘ಎಲ್ಲ ಬಲಿಷ್ಠ ಜಾತಿಗಳ ಜನರು ಈ ಬಗ್ಗೆ ಒಗ್ಗಟ್ಟಾಗಿದ್ದಾರೆ’ ಎಂದು ಆರೋಪಿಸಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಎರಡು ಮಸೂದೆಗಳ ಮೇಲಿನ ಚರ್ಚೆಯ ಸಂದರ್ಭದಲ್ಲಿ, ಬಿಜೆಪಿಯ ಹಿರಿಯ ಸಂಸದ ಸುಶೀಲ್ ಕುಮಾರ್ ಮೋದಿ ಅವರು ಮಾತನಾಡಿ, ಹಿಂದುಳಿದ ಸಮುದಾಯಗಳ (ಒಬಿಸಿ) ಬಗ್ಗೆ ಕಾಂಗ್ರೆಸ್ ತೋರಿಸುವ ಪ್ರೀತಿ ಒಂದು ಪ್ರಹಸನ ಎಂದು ಹೇಳಿದರು. ಜಾತಿ ಜನಗಣತಿ ವಿಚಾರದಲ್ಲಿ ಶಿವಕುಮಾರ್ ಅವರ ನಿಲುವನ್ನು ಉದಾಹರಣೆಯಾಗಿ ಉಲ್ಲೇಖಿಸಿದರು. ‘ನಿಮ್ಮ ಸರ್ಕಾರ ಜಾತಿ ಸಮೀಕ್ಷೆ ವರದಿಯನ್ನು ಯಾವಾಗ ಬಹಿರಂಗ ಪಡಿಸುತ್ತದೆ ಎಂಬುದನ್ನು ಖರ್ಗೆಯೇ ಹೇಳಬೇಕು. ವರದಿಯನ್ನು ಸಾರ್ವಜನಿಕಗೊಳಿಸುವುದರ ವಿರುದ್ಧದ ಮನವಿಗೆ ಉಪಮುಖ್ಯಮಂತ್ರಿ ಸಹಿ ಹಾಕಿದ್ದಾರೆ’ ಎಂದು ಮೋದಿ ಹೇಳಿದರು.

‘ಉಪ ಮುಖ್ಯಮಂತ್ರಿಗಳು ಸೇರಿದಂತೆ ಕಾಂಗ್ರೆಸ್ ಶಾಸಕರು ಮತ್ತು ವೀರಶೈವ ಮಹಾಸಭಾದ ಮುಖಂಡರು ಇದನ್ನು ವಿರೋಧಿಸಿದ್ದಾರೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಎದ್ದು ನಿಂತು ಪ್ರತಿಕ್ರಿಯಿಸಿದ ಖರ್ಗೆ, ‘ಶಿವಕುಮಾರ್ ಮತ್ತು ಬಿಜೆಪಿ ಜಾತಿ ಗಣತಿ ವರದಿಗೆ ವಿರುದ್ಧವಾಗಿದೆ’ ಎಂದು ಕಿಡಿಕಾರಿದರು. ‘ಅವರೂ ವಿರೋಧಿಸುತ್ತಿದ್ದಾರೆ, ನೀವೂ ವಿರೋಧಿಸುತ್ತಿದ್ದೀರಿ. ಈ ವಿಷಯದಲ್ಲಿ ಇಬ್ಬರೂ ಒಂದೇ; ಇದು ಜಾತಿಯ ಲಕ್ಷಣ. ಬಲಿಷ್ಠ ಜಾತಿಯ ಜನರು ಆಂತರಿಕವಾಗಿ ಒಗ್ಗಟ್ಟಾಗುತ್ತಾರೆ’ ಎಂದರು.

ಇದನ್ನೂ ಓದಿ; ಕ್ರಿಮಿನಲ್ ವ್ಯಾಪ್ತಿಗೆ ಸಲಿಂಗಕಾಮ, ಸೆಕ್ಸ್‌ ವರ್ಕ್‌? ಸಂಸದೀಯ ಸಮಿತಿ ಸಲಹೆ ತಿರಸ್ಕರಿಸಿದ ಪಿಎಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...