Homeಕರ್ನಾಟಕಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

- Advertisement -
- Advertisement -

ಕೊರೊನಾ ಸೋಂಕಿನಿಂದ ತತ್ತರಿಸಿ ಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳವಾರ ರಾತ್ರಿ ಪ್ರಧಾನಿ ಮೋದಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಉಲ್ಬಣ ಹಿನ್ನಲೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದ್ದ ಪ್ರಧಾನಿ ಮೋದಿ, ಕೊರೊನಾ ನಿರ್ವಹಣೆಗೆ ಕೊನೆಯ ಅಸ್ತ್ರವಾಗಿ ಲಾಕ್‌ಡೌನ್‌ ಅನ್ನು ಬಳಸುವಂತೆ ರಾಜ್ಯಗಳಿಗೆ ಕರೆ ನೀಡಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಇಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಭಾಷಣ ಅತ್ಯಂತ ನಿರಾಶದಾಯಕ. ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಎಲ್ಲಾ ಹಿಂದೂಗಳು ಮುಸ್ಲಿಮರ ಕ್ಷಮೆ ಯಾಚಿಸಬೇಕಾಗಿದೆ: ಕುಂಭಮೇಳದ ಬಗ್ಗೆ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ

“ರಾಜ್ಯದಲ್ಲಿ ಕೊರೊನಾ ಸೋಂಕಿತರು‌ ಚಿಕಿತ್ಸೆಗೆ ಆಮ್ಲಜನಕ ಇಲ್ಲದೆ, ಐಸಿಯು ಹಾಸಿಗೆಗಳಿಲ್ಲದೆ,‌ ರೆಮಿಡಿಸಿವೆರ್‌ನಂತಹ ಪ್ರಾಣರಕ್ಷಕ ಔಷಧಿ ಸಿಗದೆ ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಸಮಸ್ಯೆಗಳಿಗೆ ಯಾವುದೇ ಪರಿಹಾರ ನೀಡದ ಮೋದಿ ಜನತೆಗೆ ಜವಾಬ್ದಾರಿಯ ಪಾಠ ಹೇಳಿದ್ದಾರೆ. ಪ್ರಧಾನಿಗಳೇ, ಮೊದಲು ನಿಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ” ಎಂದು ಪ್ರಧಾನಿಗೆ ಕರೆ ನೀಡಿದ್ದಾರೆ.

“ಕೊರೊನಾ ಉಲ್ಭಣಗೊಂಡಿರುವ ಕಾರಣದಿಂದಾಗಿ ಲಾಕ್‌ಡೌನ್ ಅನಿವಾರ್ಯ ಎಂಬಂತೆ ರಾಜ್ಯ ಸರ್ಕಾರ ಮಾತನಾಡುತ್ತಿದೆ. ಲಾಕ್‌ಡೌನ್ ಹೇರಿದರೆ ಕಷ್ಟನಷ್ಟಕ್ಕೀಡಾಗುವ ಜನತೆಗೆ ಕೇಂದ್ರಸರ್ಕಾರ ನೀಡುವ ನೆರವಿನ ಘೋಷಣೆಯನ್ನು ಜನ ನಿರೀಕ್ಷಿಸಿದ್ದರು. ಮೋದಿ ಭಾಷಣ ‘ನಿಮ್ಮ ತಲೆ ಮೇಲೆ ನಿಮ್ಮ‌ ಕೈ’ ಎಂಬ ಸಂದೇಶ ನೀಡಿದೆ” ಎಂದು ಕಿಡಿ ಕಾರಿದ್ದಾರೆ.

“ಕೊರೊನಾ ಪರಿಣಾಮವನ್ನು ಸಮರ್ಥವಾಗಿ ನಿರ್ವಹಿಸಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯ ಅಂಚಿಗೆ ಬಂದು ನಿಂತಿದೆ. ಇದಕ್ಕೆ ನ್ಯಾಯಬದ್ಧವಾಗಿ ತೆರಿಗೆ ಪಾಲನ್ನು ನೀಡದಿರುವ ಕೇಂದ್ರ ಸರ್ಕಾರವೂ ಕಾರಣ. ಪ್ರಧಾನಿಯವರೇ, ನೀವು ವಿಶೇಷ ಆರ್ಥಿಕ ನೆರವನ್ನು ಕೊಡುವುದು ಬೇಡ, ನಮ್ಮ ನ್ಯಾಯಬದ್ಧ ಪಾಲನ್ನಷ್ಟಾದರೂ ನೀಡಿ ಪುಣ್ಯ ಕಟ್ಟಿಕೊಳ್ಳಿ” ಎಂದು ಪ್ರಧಾನಿ ಜೊತೆಗೆ ಸಿದ್ದರಾಮಯ್ಯ ಕೇಳಿದ್ದಾರೆ.

ಇದನ್ನೂ ಓದಿ: ಚಳುವಳಿ ಮಾಡಿದ್ರೆ ಮಾತ್ರ ಸಾಲಲ್ಲ, ಪೊಲಿಟಿಕಲ್ ಪವರ್ ನಿಮ್ಮ ಕೈಲಿ ಹಿಡ್ಕೊಬೇಕು

ವಿಡಿಯೊ ನೋಡಿ: ದೇಶದಲ್ಲಿ ಬಿಜೆಪಿ ಮುಕ್ತ ಆಗುವ ದಿನಗಳು ದೂರವಿಲ್ಲ, ಉದ್ದಟತನ ಬಿಡಿ: ಸಿಎಂಗೆ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...