Homeಮುಖಪುಟದೆಹಲಿ ಅಭಿವೃದ್ಧಿಗೆ ಸದಾ ಜೊತೆಗಿರುವೆ: ಸೋತ ನಂತರವೂ ಅತಿಶಿಯ ಮಾದರಿ ನುಡಿಗಳು

ದೆಹಲಿ ಅಭಿವೃದ್ಧಿಗೆ ಸದಾ ಜೊತೆಗಿರುವೆ: ಸೋತ ನಂತರವೂ ಅತಿಶಿಯ ಮಾದರಿ ನುಡಿಗಳು

ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಹಲವಾರು ಜನ ಒಟ್ಟು ಸೇರಿ ದೇಶದಲ್ಲಿ ಬದಲಾವಣೆ ತರಬಹುದೆಂಬ ಭರವಸೆಯನ್ನು ಇದು ನನಗೆ ನೀಡಿದೆ.

- Advertisement -
- Advertisement -

ಗೌತಮ್ ಗಂಭೀರ್‍ರವರಿಗೆ ಶುಭಾಶಯಗಳು. ಪೂರ್ವ ದೆಹಲಿಯ ಜನತೆ ನಿಮ್ಮಲ್ಲಿ ವಿಶ್ವಾಸವಿಟ್ಟು ಆಯ್ಕೆಮಾಡಿದೆ. ಪೂರ್ವ ದೆಹಲಿಯ ಮತ್ತಷ್ಟು ಅಭಿವೃದ್ದಿಗೆ ಸಹಾಯ ಮತ್ತು ಸಹಯೋಗಕ್ಕಾಗಿ ನಾನು ಸದಾ ನಿಮ್ಮೊಂದಿಗಿರುತ್ತೇನೆ. ಆಲ್ ದಿ ಬೆಸ್ಟ್

ಹಾಗೆಯೇ ಪೂರ್ವ ದೆಹಲಿಯ ಜನತೆಗೆ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ಮತ್ತು ಅಕ್ಕರೆಯಿಂದ ತುಂಬಿಹೋಗಿದ್ದೇನೆ. ಹೆಚ್ಚು ಶಿಕ್ಷಣವಂತ, ಅಭಿವೃದ್ದಿಯ ಮತ್ತು ಸುರಕ್ಷತೆಯ ಪೂರ್ವ ದೆಹಲಿಗಾಗಿ ನಾನು ನನ್ನ ಕೆಲಸವನ್ನು ಮುಂದುವರೆಸುತ್ತೇನೆ ಮತ್ತು ಸದಾ ನಿಮ್ಮೊಂದಿಗಿರುತ್ತೇನೆ. ನನ್ನ ಈ ಚುನಾವಣಾ ಪ್ರಚಾರಾಂದೋಲನಕ್ಕೆ ತಮ್ಮ ಹೃದಯ ಮತ್ತು ಆತ್ಮವನ್ನು ಮುಡಿಪಾಗಿಟ್ಟ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದಗಳು. ನೀವೆಲ್ಲರೂ ಅದ್ಭುತ. ಸಮಾಜದ ವಿವಿಧ ಕ್ಷೇತ್ರಗಳಲ್ಲಿನ ಹಲವಾರು ಜನ ಒಟ್ಟು ಸೇರಿ ದೇಶದಲ್ಲಿ ಬದಲಾವಣೆ ತರಬಹುದೆಂಬ ಭರವಸೆಯನ್ನು ಇದು ನನಗೆ ನೀಡಿದೆ. ಕೊನೆಯದಾಗಿ ಕ್ರೌಡ್‍ಫಂಡಿಂಗ್ ಮೂಲಕ ಬೆಂಬಲಿಸಿದ ಸಾವಿರಾರು ಜನರಿಗೆ ಧನ್ಯವಾದಗಳು. ನಿಮ್ಮ ಬೆಂಬಲ ನನಗೆ ಕೇವಲ ಶಕ್ತಿಯನ್ನು ಮಾತ್ರವಲ್ಲದೆ, ಭಾರತದಲ್ಲಿ ಚುನಾವಣಾ ಖರ್ಚು ವೆಚ್ಚದ ಕುರಿತು ಪಾರದರ್ಶಕ, ಸ್ವಚ್ಛ ವ್ಯವಸ್ಥೆಯೊಂದನ್ನು ಸೃಷ್ಟಿಸಬಹುದೆಂಬ ದೊಡ್ಡ ಭರವಸೆಯನ್ನು ನೀಡಿದೆ.

ಇದು ಪೂರ್ವ ದೆಹಲಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲುಂಡ ಆಮ್ ಆದ್ಮಿ ಪಕ್ಷದ ಅತಿಶಿ ಮರ್ಲೀನಾರವರ ಫೇಸ್ ಬುಕ್ ಸ್ಟೇಟಸ್. ಕೇವಲ ಒಂದು ರೂ ಸಂಬಳ ಪಡೆದು ದೆಹಲಿ ಸರ್ಕಾರಿ ಶಾಲೆಗಳನ್ನು ಭಾರತ ಮಾತ್ರವಲ್ಲದೇ ಪ್ರಪಂಚದಲ್ಲಿಯೇ ಉತ್ತಮ ಶಾಲೆಗಳ ಮಟ್ಟಕ್ಕೆ ಏರಿಸಿದ ಕೀರ್ತಿ ಇವರದು. ಮರ್ಲೋನಾ ಎಂದರೆ ಮಾಕ್ರ್ಸ್ ಮತ್ತು ಲೆನಿನ್ ಎಂದರ್ಥ. ಎಡಪಂಥೀಯರಾದ ಇವರ ತಂದೆ ತಾಯಿ ಇಟ್ಟ ಹೆಸರು ಮಾಕ್ರ್ಸ್ ಮತ್ತು ಲೆನಿನ್ ಎರಡನ್ನೂ ಸೇರಿ ಮರ್ಲೀನಾ ಅಂತ. ದೆಹಲಿಯಲ್ಲಿ ಅತ್ಯುತ್ತಮ ಅಧಿಕಾರಿ ಎಂದು ಹೆಸರು ಪಡೆದು ಇಂದಿಗೂ ಕೆಲಸ ನಿರ್ವಹಿಸುತ್ತಿದ್ದಾರೆ. ಅತಿಶಿ ಗೆಲ್ಲಬೇಕೆಂದು ಭಾರತಾದ್ಯಂತ ಸಾವಿರಾರು ಜನ ಆಶಿಸಿದ್ದರು. ಆದರೆ ಅವರು ಕೊನೆಗೂ ಸೋತಿದ್ದಾರೆ.

ಇವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ, ಇವರನ್ನು ಕುರಿತು ಅತ್ಯಂತ ಕೆಟ್ಟದಾಗ ನಿಂದಿಸಿ ಕರಪತ್ರವೊಂದನ್ನು ಬಿಜೆಪಿಯವರು ಹಂಚಿದ್ದರು. ಆ ಸಂದರ್ಭದಲ್ಲಿ ಕಣ್ಣೀರಿಟ್ಟಿದ್ದ ಮರ್ಲೀನಾ, ಈಗ ಅದನ್ನೆಲ್ಲ ಮರೆತು ಸೋಲಿನ ನಡುವೆಯೂ ಪೂರ್ವ ದೆಹಲಿಯ ಅಭಿವೃದ್ದಿಗಾಗಿ ಸಹಾಯ ಮಾಡುತ್ತೇನೆ ಎಂದು ಗೌತಮ್ ಗಂಭೀರ್‍ರವರಿಗೆ ತಿಳಿಸಿದ್ದಾರೆ. ಇಂತಹ ವಿಶಾಲ ಹೃದಯದ ವ್ಯಕ್ತಿಗಳಿರುವುದು ಭಾರತದ ಸೌಭಾಗ್ಯವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....