Homeಕರ್ನಾಟಕಏ.26ಕ್ಕೆ ದಾವಣಗೆರೆಯಲ್ಲಿ ರಾಜ್ಯದ ಎಲ್ಲಾ ಹೋರಾಟಗಾರರ ದಂಡು: ಕೆ.ಎಲ್.ಅಶೋಕ್

ಏ.26ಕ್ಕೆ ದಾವಣಗೆರೆಯಲ್ಲಿ ರಾಜ್ಯದ ಎಲ್ಲಾ ಹೋರಾಟಗಾರರ ದಂಡು: ಕೆ.ಎಲ್.ಅಶೋಕ್

- Advertisement -
- Advertisement -

ದಾವಣಗೆರೆ: ಏ.26ರಂದು ನಡೆಯಲಿರುವ ಸಂವಿಧಾನ ಸಂರಕ್ಷಕರ ಸಮಾವೇಶದ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿವೆ. ಅಂದು ದಾವಣಗೆರೆಯಲ್ಲಿ ನಾಡಿನ ಎಲ್ಲಾ ಹೋರಾಟಗಾರರ ದಂಡು ಅಣಿನೆರೆಯಲಿದ್ದು, ನಗರವು  ದೇಶದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯುವಂತಹ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಲಿದೆ. ಅಂದಿನ ಸಂವಿಧಾನ ಸಂರಕ್ಷಕರ ಸಮಾವೇಶದ ಬಹಿರಂಗ ಸಭೆಯನ್ನು ನಾಡೋಜ ಬರಗೂರು ರಾಮಚಂದ್ರಪ್ಪನವರು ಉದ್ಘಾಟಿಸಲಿದ್ದಾರೆ ಎಂದು ಸಮಾವೇಶದ ಕೇಂದ್ರ ಸಂಚಾಲಕ ಕೆ.ಎಲ್.ಅಶೋಕ್ ತಿಳಿಸಿದ್ದಾರೆ.

ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಪ್ರಸಿದ್ಧ ಚಿತ್ರ ನಟ ಪ್ರಕಾಶ್ ರಾಜ್, ಗುಜರಾತಿನ ಶಾಸಕ ಹಾಗೂಹೋರಾಟಗಾರ ಜಿಗ್ನೇಶ್ ಮೇವಾನಿ, ಪ್ರಖರ ಚಿಂತಕರಾದ ಪರಕಾಲ ಪ್ರಭಾಕರ್, ಮುಸ್ಲಿಂ ಸಮುದಾಯದ ರಾಷ್ಟ್ರೀಯ ನಾಯಕರಾದ ಮೊಹಮ್ಮದ್ ಸಲೀಂ, ಸಂಯುಕ್ತ ಕಿಸಾನ್ ಮೋರ್ಚಾದ ಡಾ.ಸುನೀಲಮ್, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್, ಶೋಷಿತ ಸಮುದಾಯಗಳ ಒಕ್ಕೂಟದ ಪ್ರಧಾನ ಸಂಚಾಲಕರಾದ  ಕೆ.ಎಂ.ರಾಮಚಂದ್ರಪ್ಪ, ರೈತ ಚಳವಳಿಯ ಮುಂದಾಳುಗಳಾದ ಹೆಚ್.ಆರ್.ಬಸವರಾಜಪ್ಪ, ಬಡಗಲಪುರ ನಾಗೇಂದ್ರ, ದಲಿತ ಚಳವಳಿಯ ಹಿರಿಯ ಮುಖಂಡರಾದ ಗುರುಪ್ರಸಾದ್ ಕೆರಗೋಡು, ಎನ್.ವೆಂಕಟೇಶ್, ಮಾವಳ್ಳಿ ಶಂಕರ್, ವಿ.ನಾಗರಾಜ್, ಕ್ರೈಸ್ತ ಸಮುದಾಯದ ಮುಖಂಡರಾದ ಫಾ.ವೀರೇಸ್ ಮೋರೆಸ್, ಫಾ.ಜೆರಾಲ್ಡ್, ಮಾನವ ಬಂಧುತ್ವ ವೇದಿಕೆಯ ಎ.ಬಿ.ರಾಮಚಂದ್ರಪ್ಪ, ರವಿ ನಾಯ್ಕರ್, ಜನಪರ ಚಿಂತಕ-ಹೋರಾಟಗಾರ ಪಾಟೀಲ್ ಇನ್ನು ಮುಂತಾದ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ ಎಂದರು.

ಈ ಕಾರ್ಯಕ್ರಮಕ್ಕೆ ಯುವಕ ಯುವತಿಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಸಮಾವೇಶದ ಮತ್ತೊಂದು ಮುಖ್ಯ ವಿಚಾರವಾಗಿದೆ. ವಾಡಿಯಿಂದ ದಾವಣಗೆರೆ ತನಕ 20 ಜಿಲ್ಲೆಗಳ ಮೂಲಕ ಹಾಗೂ 2000 ಕಿ.ಮೀ. ಉದ್ದದ ದಾರಿಯನ್ನು ಕ್ರಮಿಸುತ್ತಾ ಬೈಕುಗಳಲ್ಲಿ ಯುವಯಾನ ನಡೆಯುತ್ತಿದೆ. ಅದು ನಾಳೆ (ಏ.25) ಸಂಜೆ ದಾವಣಗೆರೆ ತಲುಪಲಿದ್ದು, ಅಲ್ಲಿಯೂ ಬೃಹತ್ ಬೈಕ್ ರ್ಯಾಲಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಭಾರತವು ಅಪಾಯಕಾರಿ ಹಂತಕ್ಕೆ ತಲುಪಿದೆ. ಸಂವಿಧಾನದ ಆಶಯ ಉಳಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕನಸಿನ ಭಾರತವನ್ನು ರಕ್ಷಿಸಿಕೊಳ್ಳುವ ತುರ್ತು ಎದುರಾಗಿದೆ. ಹೀಗಾಗಿ, ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವ ಪ್ರಯತ್ನ ಜ.26ರಿಂದ ಶುರುವಾಗಿದೆ. 3 ತಿಂಗಳ ಅವಧಿಯಲ್ಲಿ 10 ಸಾವಿರ ಜನರನ್ನು ತಲುಪಿದ್ದು, ಈ ಎಲ್ಲರೂ ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.

ಕರ್ನಾಟಕದ ಸಮಾನ ಮನಸ್ಕ ಸಂಘಟನೆಗಳು ಒಗ್ಗೂಡಿ ಈ ಪ್ರಯತ್ನ ಮಾಡುತ್ತಿದ್ದೇವೆ. ರೈತ, ದಲಿತ, ಕನ್ನಡ ಪರ ಸಂಘಟನೆಗಳು, ಅಲ್ಪಸಂಖ್ಯಾತ ಸಮುದಾಯಗಳು ಇದಕ್ಕೆ ಕೈಜೋಡಿಸಿವೆ. ಯಾವ ರಾಜಕೀಯ ಪಕ್ಷವೂ ಸಂವಿಧಾನ ಉಳಿಸಿಕೊಳ್ಳುವ ಆಸಕ್ತಿ ತೋರಿಲ್ಲ. ಸಂವಿಧಾನ ರಕ್ಷಣೆ ಮಾಡಿಕೊಳ್ಳುವ ಹೊಣೆಗಾರಿಕೆ ದೇಶದ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕನ ಮೇಲಿದೆ. ಸಂವಿಧಾನ ಉಳಿದರೆ ದೇಶ ಹಾಗೂ ಜನರು ಉಳಿಯುತ್ತಾರೆ ಎಂದು ಅಶೋಕ್ ತಿಳಿಸಿದರು.

ಹೊಸ ಸಂದರ್ಭವು ಹೊಸದಿಟ್ಟ ಹೆಜ್ಜೆಯನ್ನು ನಾಗರೀಕರಾದ ನಮ್ಮೆಲ್ಲರಿಂದ ಅಪೇಕ್ಷಿಸುತ್ತಿದೆ. ಈ ದೇಶವನ್ನು ಈ ಬಲಾಢ್ಯ ಪಕ್ಷಗಳು ರಕ್ಷಿಸುತ್ತವೆ ಎಂದು ಕಾಯುತ್ತಾ ಕೂರಲು ಸಾಧ್ಯವಿಲ್ಲ. ನಾಗರೀಕರಾದ ನಾವೇ ಒಂದು ಪ್ರಬಲ ಸಾಮಾಜಿಕ ಶಕ್ತಿಯಾಗಿ ರೂಪಗೊಳ್ಳಬೇಕಿದೆ. ಸಾಮಾಜಿಕ ಸ್ವಾಸ್ಥವನ್ನು ಕಾಪಾಡಿಕೊಳ್ಳಬಲ್ಲ, ಆಳುವವರನ್ನು ಪ್ರಶ್ನಿಸಬಲ್ಲ, ಆಳ್ವಿಕೆಯನ್ನು ಬದಲಿಸಬಲ್ಲ ನಾಗರೀಕ ಶಕ್ತಿಯಾಗಿ ತಳಮಟ್ಟದಿಂದ ದೇಶಮಟ್ಟದ ತನಕ ನಮ್ಮನ್ನು ನಾವು ಕಟ್ಟಿಕೊಳ್ಳಬೇಕಾಗಿದೆ. ಒಟ್ಟಾರೆಯಾಗಿ ರಾಜ್ಯದ ನಾಗರೀಕ ಸಮಾಜ ಮತ್ತೊಂದು ದೊಡ್ಡ ಹೆಜ್ಜೆ ಇಡಲು ಸಜ್ಜಾಗುತ್ತಿದೆ. ನೀತಿಬದ್ದ ನಾಗರೀಕ ಶಕ್ತಿಯನ್ನು ತಳಮಟ್ಟದ ತನಕ ಕಟ್ಟುವ, ಕೇಂದ್ರ ಸರಕಾರದ ನೀತಿಗಳ ವಿರುದ್ಧ ಜನಾಂದೋಲನವನ್ನು ರೂಪಿಸುವ, ರಾಜ್ಯ ಸರಕಾರ ಕೊಟ್ಟ ಮಾತು ಈಡೇರಿಸುವಂತೆ ಪಟ್ಟು ಹಿಡಿದು ಹೋರಾಡುವ ಧೃಡ ಸಂಕಲ್ಪವನ್ನು ಈ ಸಮಾವೇಶದಲ್ಲಿ ತೊಡಲಿದೆ. ನಾಡಿನ ಎಲ್ಲಾ ದೇಶಪ್ರೇಮಿ ಬಂಧುಗಳನ್ನು ಈ ಸಮಾವೇಶಕ್ಕೆ ಆದರಭಿಮಾನಗಳ  ಜೊತೆ ದಾವಣಗೆರೆಗೆ ಆಹ್ವಾನಿಸುತ್ತಿದ್ದೇವೆ. ಒಂದು ರೀತಿಯಲ್ಲಿ ಹೇಳಬೇಕೆಂದರೆ ಇದೊಂದು ರೀತಿಯಲ್ಲಿ “ಸಂವಿಧಾನ ಹಬ್ಬ’’. ತಪ್ಪದೇ ಹಬ್ಬಕ್ಕೆ ಬನ್ನಿ ಎಂದು ಅವರು ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ವಕೀಲ ಅನೀಶ್ ಪಾಷ, ಜಬೀನಾ ಖಾನಂ, ಪವಿತ್ರಾ ಮುಂತಾದವರು ಹಾಜರಿದ್ದರು.

ದೇಶದ ರಕ್ಷಣೆಗೆ ಸಂವಿಧಾನ ಸಂರಕ್ಷಕರು ಹೇಗೆ ಸಂಕಲ್ಪ ತೊಡುತ್ತಾರೆಂದು ತಿಳಿಯಲು ಕಾರ್ಯಕ್ರಮಕ್ಕೆ ಬನ್ನಿ: ಮಲ್ಲಿಗೆ ಸಿರಿಮನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...