Homeಮುಖಪುಟಜ್ಞಾನವಾಪಿ ಮಸೀದಿ ಆವರಣದ ಎಎಸ್‌ಐ ಸಮೀಕ್ಷೆ ಕೋರಿ ಅರ್ಜಿ : ವಿಚಾರಣೆ ಮುಂದೂಡಿದ ಕೋರ್ಟ್‌

ಜ್ಞಾನವಾಪಿ ಮಸೀದಿ ಆವರಣದ ಎಎಸ್‌ಐ ಸಮೀಕ್ಷೆ ಕೋರಿ ಅರ್ಜಿ : ವಿಚಾರಣೆ ಮುಂದೂಡಿದ ಕೋರ್ಟ್‌

- Advertisement -
- Advertisement -

ಜ್ಞಾನವಾಪಿ ಮಸೀದಿ ಆವರಣದಲ್ಲಿ ಹೆಚ್ಚಿನ ಸಮೀಕ್ಷೆಗಳನ್ನು ಕೈಗೊಳ್ಳಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಎರಡು ಅರ್ಜಿಗಳ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಬುಧವಾರ (ಡಿ.18) ಮುಂದೂಡಿದೆ.

ಡಿಸೆಂಬರ್ 12ರಂದು ಮಧ್ಯಂತರ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಮುಂದಿನ ಆದೇಶದವರೆಗೆ ಮಸೀದಿಗಳ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಅಥವಾ ಅಂತಿಮ ಆದೇಶಗಳನ್ನು ನೀಡದಂತೆ ಸೂಚಿಸಿದೆ. ಈ ಹಿನ್ನೆಲೆ, ಅರ್ಜಿಗಳ ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ.

ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ, ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲಾ ನ್ಯಾಯಾಲಯವು 14ನೇ ಶತಮಾನದ ಐತಿಹಾಸಿಕ ಅಟಾಲಾ ಮಸೀದಿಯ ಸಮೀಕ್ಷೆಗೆ ಆದೇಶಿಸಲು ಸೋಮವಾರ (ಡಿ.16) ನಿರಾಕರಿಸಿದೆ.

ಜ್ಞಾನವಾಪಿ ಮಸೀದಿ ಸಂಬಂಧಿಸಿದ ಮುಂದಿನ ವಿಚಾರಣೆಯನ್ನು 1991ರ ಆರಾಧನಾ ಸ್ಥಳಗಳ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಒಂದು ವಾರದ ನಂತರ, ಅಂದರೆ 24 ಫೆಬ್ರವರಿ 2025ಕ್ಕೆ ಪಟ್ಟಿ ಮಾಡುವಂತೆ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರ ಏಕಸದಸ್ಯ ಪೀಠ ನಿರ್ದೇಶಿಸಿದೆ.

ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ‘ವುಝುಖಾನಾ’ (ನೀರಿನ ತೊಟ್ಟಿ) ಪ್ರದೇಶವನ್ನು ಸಮೀಕ್ಷೆ ಮಾಡುವಂತೆ ಎಎಸ್‌ಐಗೆ ನಿರ್ದೇಶಿಸಲು ಕೋರಿ ರಾಖಿ ಸಿಂಗ್ ಎಂಬವರು ಮೊದಲ ಬಾರಿಗೆ ಅರ್ಜಿ ಹಾಕಿದ್ದರು.

ಮೇ 2023 ರಲ್ಲಿ ವಾರಣಾಸಿ ನ್ಯಾಯಾಲಯ ನೀಡಿದ ಆದೇಶದನ್ವಯ ಮಸೀದಿಯಲ್ಲಿ ಸಮೀಕ್ಷೆ ನಡೆಸಲಾಗಿದೆ. ಈ ವೇಳೆ ಅಲ್ಲಿ ಶಿವಲಿಂಗದಂತಹ ರಚನೆ ಕಂಡು ಬಂದಿದೆ ಎಂದು ಹೇಳಲಾಗಿದೆ. ಆ ಬಳಿಕ ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ವುಝುಖಾನಾ ಸುತ್ತಮುತ್ತಲಿನ ಪ್ರದೇಶವನ್ನು ಮುಚ್ಚಲಾಗಿದೆ.

ಇದೇ ರೀತಿಯ ಮನವಿಯೊಂದಿಗೆ ಎರಡನೇ ಅರ್ಜಿಯನ್ನು ಲಾರ್ಡ್ ಆದಿ ವಿಶ್ವೇಶ್ವರ್ ಪರವಾಗಿ ಸಲ್ಲಿಸಲಾಯಿಗಿದೆ. ಈ ಅರ್ಜಿಯನ್ನು ವಕೀಲ ವಿಜಯ್ ಶಂಕರ್ ರಸ್ತೋಗಿ ಪ್ರತಿನಿಧಿಸಿದ್ದರು. ಜ್ಞಾನವಾಪಿ ಮಸೀದಿಯ ಮುಖ್ಯ ಗುಮ್ಮಟದ ಕೆಳಗೆ ‘ಸ್ವಯಂಭು ಜ್ಯೋತಿರ್ಲಿಂಗ’ ಇದೆ ಎಂದು ರಸ್ತೋಗಿ ತಮ್ಮ ಮನವಿಯಲ್ಲಿ ಹೇಳಿಕೊಂಡಿದ್ದರು.

ಎರಡೂ ಅರ್ಜಿಗಳು ವಾರಣಾಸಿ ನ್ಯಾಯಾಲಯದ ಅಕ್ಟೋಬರ್ 2023 ರ ಆದೇಶವನ್ನು ಪ್ರಶ್ನಿಸಿವೆ. ಅಕ್ಟೋಬರ್ 2023 ರ ಆದೇಶ ಜ್ಞಾನವಾಪಿ ಮಸೀದಿಯ ಸಂಪೂರ್ಣ ಆವರಣದ ಸಮೀಕ್ಷೆಯನ್ನು ನಡೆಸಲು ಎಎಸ್‌ಐಗೆ ನಿರ್ದೇಶಿಸಲು ನಿರಾಕರಿಸಿದೆ.

ಜ್ಞಾನವಾಪಿಗೆ ಸಂಬಂಧಿಸಿದ ಅರ್ಜಿಗಳ ಮುಂದಿನ ಪ್ರಕ್ರಿಯೆಗಳು ಸುಪ್ರೀಂ ಕೋರ್ಟ್‌ನ ಮುಂಬರುವ ತೀರ್ಪಿನ ಮೇಲೆ ನಿರ್ಧರಿತವಾಗಿರುತ್ತದೆ ಎಂದು ನ್ಯಾಯಮೂರ್ತಿ ಅಗರ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ : ಪುರಾತನ ಮಸೀದಿ ಮಂದಿರವೆಂದು ಅರ್ಜಿ : ಸಮೀಕ್ಷೆಗೆ ಆದೇಶಿಸಲು ನಿರಾಕರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...