Homeಮುಖಪುಟರಾಹುಲ್ ಗಾಂಧಿ ಪೌರತ್ವ ವಿವಾದ : ಕೇಂದ್ರದ ಪ್ರತಿಕ್ರಿಯೆ ಕೇಳಿದ ಅಲಾಹಾಬಾದ್ ಹೈಕೋರ್ಟ್

ರಾಹುಲ್ ಗಾಂಧಿ ಪೌರತ್ವ ವಿವಾದ : ಕೇಂದ್ರದ ಪ್ರತಿಕ್ರಿಯೆ ಕೇಳಿದ ಅಲಾಹಾಬಾದ್ ಹೈಕೋರ್ಟ್

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಭಾರತೀಯ ಪೌರತ್ವದ ಕುರಿತು ಶೀಘ್ರ ನಿರ್ಧಾರ ತೆಗೆದುಕೊಂಡು ತಿಳಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಅಲಹಾಬಾದ್ ಹೈಕೋರ್ಟ್ ಸೋಮವಾರ (ನ.26) ಸೂಚಿಸಿದೆ.

ಡಿಸೆಂಬರ್ 19ರೊಳಗೆ ಸರ್ಕಾರದ ತೆಗೆದುಕೊಂಡ ನಿರ್ಧಾರದ ಬಗ್ಗೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ನ್ಯಾಯಮೂರ್ತಿಗಳಾ ಅತಾವು ರೆಹಮಾನ್ ಮಸೂದಿ ಮತ್ತು ಸುಭಾಷ್ ವಿದ್ಯಾರ್ಥಿ ಅವರಿದ್ದ ಪೀಠ ನಿರ್ದೇಶಿಸಿದೆ.

ರಾಹುಲ್ ಗಾಂಧಿಯವರ ಪೌರತ್ವದ ಬಗ್ಗೆ ಸಿಬಿಐ ತನಿಖೆ ಕೋರಿ ಕರ್ನಾಟಕದ ಬಿಜೆಪಿ ಕಾರ್ಯಕರ್ತ ಎಸ್.ವಿಘ್ನೇಶ್ ಶಿಶಿರ್ ಎಂಬವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ರಾಹುಲ್‌ ಗಾಂಧಿಯುವರು ಬ್ರಿಟಿಷ್‌ ಪೌರತ್ವ ಹೊಂದಿದ್ದಾರೆ. ಅದಕ್ಕೆ ಪುರಾವೆಗಳಿವೆ ಎಂದು ಅರ್ಜಿದಾರ ಶಿಶಿರ್ ವಾದಿಸಿದ್ದಾರೆ.

ಕೇಂದ್ರ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾದ ಡೆಪ್ಯೂಟಿ ಸಾಲಿಸಿಟರ್ ಜನರಲ್ ಎಸ್‌.ಬಿ ಪಾಂಡೆ ಅವರು, ಅರ್ಜಿದಾರರು ಬರೆದಿರುವ ಪತ್ರವನ್ನು ಕೇಂದ್ರ ಸರ್ಕಾರ ಸ್ವೀಕರಿಸಿದ್ದು, ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ಮುಂದೂಡಿದ ನ್ಯಾಯಾಲಯ, ಡಿಸೆಂಬರ್ 19ರೊಳಗೆ ಪತ್ರದ ಕುರಿತು ಕೈಗೊಂಡ ನಿರ್ಧಾರ ಏನೆಂದು ತಿಳಿಸುವಂತೆ ಸೂಚಿಸಿದೆ.

ಈ ಹಿಂದೆ ಹಿಂಪಡೆದಿರುವ ತನ್ನ ಅರ್ಜಿಯಲ್ಲಿ ವಿಘ್ನೇಶ್ ಅವರು ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆಯಾಗಿದ್ದು, ಸಂವಿಧಾನದ 84 (ಎ) ವಿಧಿಯ ಅಡಿಯಲ್ಲಿ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ಪ್ರತಿಪಾದಿಸಿದ್ದರು. ಇದೀಗ, ಈ ಸಂಬಂಧ ತಾನು ಕೇಂದ್ರಕ್ಕೆ ಸಲ್ಲಿಸಿದ ಮನವಿಗಳ ಮೇಲೆ ತೆಗೆದುಕೊಂಡ ಕ್ರಮಗಳ ಬಗ್ಗೆ ತಿಳಿಸುವಂತೆ ಕೋರಿ ನ್ಯಾಯಾಲಯದಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ.

ರಾಹುಲ್‌ ಗಾಂಧಿಯವರ ಭಾರತೀಯ ಪೌರತ್ವ ಪ್ರಶ್ನಿಸಿ ಬಿಜೆಪಿ ನಾಯಕ ಸುಬ್ರಮಣಿಯಂ ಸ್ವಾಮಿ ಕೂಡ ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ. ಅಲಾಹಾಬಾದ್‌ ಹೈಕೋರ್ಟ್‌ನಲ್ಲಿ ಅರ್ಜಿ ಇತ್ಯರ್ಥಗೊಂಡ ನಂತರವೇ ಪ್ರಕರಣ ಆಲಿಸುವುದಾಗಿ ದೆಹಲಿ ಹೈಕೋರ್ಟ್‌ ಸೂಚಿಸಿದೆ.

ಆಗಸ್ಟ್ 2019ರಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದ ಸುಬ್ರಮಣಿಯನ್‌ ಸ್ವಾಮಿ, “ರಾಹುಲ್ ಗಾಂಧಿ ಸ್ವಯಂ ಪ್ರೇರಿತರಾಗಿ ತಾನು ಬ್ರಿಟನ್ ಪ್ರಜೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಹೇಳಿದ್ದಾರೆ. ಅಲ್ಲದೆ, ಅವರು ಅಲ್ಲಿನ ಪಾಸ್‌ಪೋರ್ಟ್‌ ಕೂಡ ಹೊಂದಿದ್ದಾರೆ. ಈ ಮೂಲಕ ಭಾರತೀಯ ಪೌರತ್ವ ನಿಯಮಗಳನ್ನು ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿದ್ದರು.

ರಾಹುಲ್ ಗಾಂಧಿ ಭಾರತದ ಸಂವಿಧಾನ ವಿಧಿ 9 ಮತ್ತು ಭಾರತೀಯ ಪೌರತ್ವ ಕಾಯ್ದೆ-1955 ಅನ್ನು ಉಲ್ಲಂಘಿಸಿದ್ದಾರೆ. ಇದರಿಂದ ಅವರು ಭಾರತೀಯ ಪೌರತ್ವ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದರು.

ಭಾರತದ ಸಂವಿಧಾನದ 9ನೇ ವಿಧಿಯು ಯಾವುದೇ ವ್ಯಕ್ತಿಯು ಯಾವುದೇ ಇತರ ರಾಷ್ಟ್ರದ ಪೌರತ್ವವನ್ನು ಸ್ವಯಂ ಪ್ರೇರಣೆಯಿಂದ ಪಡೆದುಕೊಂಡರೆ, ಅವರನ್ನು ಭಾರತದ ಪ್ರಜೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳುತ್ತದೆ.

ಇದನ್ನೂ ಓದಿ : ಬ್ಯಾಲೆಟ್‌ ಪೇಪರ್‌ ಮತದಾನ | ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...