Homeಮುಖಪುಟಜ್ಞಾನವಾಪಿ ಮಸೀದಿ ಸಮಿತಿಯ ಅರ್ಜಿ ವಜಾ; ಅಲಹಾಬಾದ್ ಹೈಕೋರ್ಟ್ ತೀರ್ಪು

ಜ್ಞಾನವಾಪಿ ಮಸೀದಿ ಸಮಿತಿಯ ಅರ್ಜಿ ವಜಾ; ಅಲಹಾಬಾದ್ ಹೈಕೋರ್ಟ್ ತೀರ್ಪು

- Advertisement -
- Advertisement -

ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸ್ಥಳೀಯ ವಾರಣಾಸಿ ನ್ಯಾಯಾಲಯದಲ್ಲಿ ಪ್ರಕರಣವನ್ನು ಮುಂದುವರಿಸಲು ಅವಕಾಶ ನೀಡಿದ ಅಲಹಾಬಾದ್ ಹೈಕೋರ್ಟ್, ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯ ಮನವಿಯನ್ನು ಬುಧವಾರ ವಜಾಗೊಳಿಸಿದೆ.

ಮಸೀದಿ ಆವರಣದಲ್ಲಿ ಮಾ ಶೃಂಗಾರ್ ಗೌರಿ ಮತ್ತು ಇತರ ದೇವತೆಗಳನ್ನು ಪೂಜಿಸುವ ಹಕ್ಕನ್ನು ಪ್ರತಿಪಾದಿಸಿ ಹೂಡಲಾಗಿದ್ದ ಸಿವಿಲ್ ಮೊಕದ್ದಮೆಗಳ ವಿರುದ್ಧ ಸಮಿತಿಯು ಅರ್ಜಿ ಸಲ್ಲಿಸಿತ್ತು.

ಅಲಹಾಬಾದ್ ಹೈಕೋರ್ಟ್, ವಾರಣಾಸಿ ನ್ಯಾಯಾಲಯದ ಸೆಪ್ಟೆಂಬರ್ 12, 2022ರ ಆದೇಶವನ್ನು ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜೆಜೆ ಮುನೀರ್ ಅವರು ಪ್ರತಿಸ್ಪರ್ಧಿ ಕಡೆಯ ವಕೀಲರ ವಾದವನ್ನು ಸುದೀರ್ಘವಾಗಿ ಆಲಿಸಿದ ನಂತರ ಈ ಆದೇಶವನ್ನು ನೀಡಿದ್ದಾರೆ.

ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗೆ ದೇವತೆಗಳನ್ನು ಪೂಜಿಸುವ ಹಕ್ಕನ್ನು ಜಾರಿಗೊಳಿಸುವಂತೆ ಕೋರಿ 2021 ರಲ್ಲಿ ಐವರು ಮಹಿಳೆಯರು ಮೊಕದ್ದಮೆ ಹೂಡಿದ್ದರು. ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿಯು ಅರ್ಜಿ ಸಲ್ಲಿಸಿತ್ತು. ಸ್ಥಳೀಯ ಕೋರ್ಟ್ ಕೂಡ ಇವರ ಮನವಿಯನ್ನು ವಜಾಗೊಳಿಸಿತ್ತು.

ಇದನ್ನೂ ಓದಿರಿ: ಪ್ರಧಾನಿ ಕಚೇರಿಯಲ್ಲಿ ಐಎಎಸ್‌ ಅಧಿಕಾರಿ ಎಂದು ಬಿಂಬಿಸಿಕೊಂಡಿದ್ದ ವ್ಯಕ್ತಿ ಅರೆಸ್ಟ್

ಅಕ್ಟೋಬರ್ 2022 ರಲ್ಲಿ ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ ಅವರು ಆದೇಶವನ್ನು ನೀಡಿದ್ದರು.

ಜ್ಞಾನವಾಪಿ ಮಸೀದಿಯ ಹೊರ ಗೋಡೆಯ ಮೇಲೆ ಹಿಂದೂ ದೇವತೆಗಳ ವಿಗ್ರಹಗಳಿವೆ. ಅವುಗಳನ್ನು ನಿತ್ಯವೂ ಪೂಜಿಸುವ ಹಕ್ಕು ನಮಗಿದೆ ಎಂದು ಪ್ರತಿಪಾದಿಸಿ ಮನವಿಯನ್ನು ಸಲ್ಲಿಸಲಾಗಿತ್ತು. ಆದರೆ ಇದರ ವಿರುದ್ಧ ಮಸೀದಿ ಸಮಿತಿ ಅರ್ಜಿ ಸಲ್ಲಿಸಿತ್ತು. ಮಸೀದಿ ಸಮಿತಿಯ ಮನವಿಯನ್ನು ಜಿಲ್ಲಾ ನ್ಯಾಯಾಲಯವು ತಿರಸ್ಕರಿಸಿತ್ತು.

“ನಾವು ಅಲ್ಲಿ ಭವ್ಯವಾದ ಶಿವ ದೇವಾಲಯವನ್ನು ನಿರ್ಮಿಸುವ ದಿನ ದೂರವಿಲ್ಲ ಎಂದು ನಾನು ಭಾವಿಸುತ್ತೇನೆ. ಈಗಿರುವ ಸ್ವರೂಪವನ್ನು ತೆರವು ಮಾಡಲಾಗುತ್ತದೆ” ಎಂದು ಅರ್ಜಿ ಸಲ್ಲಿಸಿರುವ ಮಹಿಳೆಯರ ಪರ ವಕೀಲ ಹರಿಶಂಕರ್ ಜೈನ್ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಪ್ರಚಾರಕ್ಕೆ ಸಿಂಗಾಪುರದ ರೈಲ್ವೆ ನಿಲ್ದಾಣದ ಫೋಟೋ ಬಳಸಿದ ಬಿಜೆಪಿ

0
ಬಿಜೆಪಿಯ ವಿವಿಧ ರಾಜ್ಯ ಮತ್ತು ಜಿಲ್ಲಾ ಘಟಕಗಳ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇತ್ತೀಚೆಗೆ ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಮತ್ತು ಹಿಂಭಾಗದಲ್ಲಿ ಮೆಟ್ರೋ ರೈಲು ಸಾಗುತ್ತಿರು ಚಿತ್ರವಿರುವ ಈ ಪೋಸ್ಟರ್‌...