Homeಮುಖಪುಟತನ್ನ ಮರುನಾಮಕರಣದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್!

ತನ್ನ ಮರುನಾಮಕರಣದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್!

ಅಕ್ಟೋಬರ್ 16, 2018 ರಂದು ರಾಜ್ಯ ಸರ್ಕಾರವು ಅಲಹಾಬಾದ್ ಜಿಲ್ಲೆಯನ್ನು ಪ್ರಯಾಗರಾಜ್ ಎಂದು ಮರುನಾಮಕರಣ ಮಾಡಿದೆ ಎಂಬ ಕಾರಣಕ್ಕೆ ಹೈಕೋರ್ಟ್ ಹೆಸರನ್ನು ಮರುಹೆಸರಿಸುವಂತೆ ಅರ್ಜಿದಾರರು ಮನವಿ ಸಲ್ಲಿಸಿದ್ದರು.

- Advertisement -
- Advertisement -

ಅಲಹಾಬಾದ್ ಹೈಕೋರ್ಟ್‌ಗೆ ಪ್ರಯಾಗ್‌ರಾಜ್ ಹೈಕೋರ್ಟ್ ಅಥವಾ ಉತ್ತರಪ್ರದೇಶ ಹೈಕೋರ್ಟ್ ಎಂದು ಮರುನಾಮಕರಣ ಮಾಡಬೇಕು ಎನ್ನುವ ಮನವಿಯನ್ನು ಸ್ವತಃ ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ.

ಹೈಕೋರ್ಟ್‌ನ ಲಕ್ನೋ ಪೀಠವು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ರೂಪದಲ್ಲಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ, ಇದನ್ನು ಕೇವಲ ‘ಪ್ರಚಾರದ ದಾವೆ’ ಎಂದು, ನ್ಯಾಯವಾದಿ ಪಿ.ಕೆ.ಜೈಸ್ವಾಲ್ ಮತ್ತು ನ್ಯಾಯಮೂರ್ತಿ ಡಿ.ಕೆ.ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠವು, ವಕೀಲ ಅಶೋಕ್ ಪಾಂಡೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ:  ಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

ಅಕ್ಟೋಬರ್ 16, 2018 ರಂದು ರಾಜ್ಯ ಸರ್ಕಾರವು ಅಲಹಾಬಾದ್ ಜಿಲ್ಲೆಯನ್ನು ಪ್ರಯಾಗರಾಜ್ ಎಂದು ಮರುನಾಮಕರಣ ಮಾಡಿದೆ ಎಂಬ ಕಾರಣಕ್ಕೆ ಹೈಕೋರ್ಟ್ ಹೆಸರನ್ನು ಮರುಹೆಸರಿಸುವಂತೆ ಅರ್ಜಿದಾರರು ಮನವಿ ಸಲ್ಲಿಸಿದ್ದರು.

ಇತ್ತೀಚಿನ ಆದೇಶದಲ್ಲಿ, “ಜಿಲ್ಲೆಯ ಹೆಸರನ್ನು ಮರುನಾಮಕರಣ ಮಾಡುವುದು ಸಾಂವಿಧಾನದ ಅಡಿಯ ಶಾಸಕಾಂಗದ ಅಧಿಕಾರದಲ್ಲಿದೆ. ಆದ್ದರಿಂದ, ಈ ವಿಷಯದಲ್ಲಿ ತಾನು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ” ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ಅತ್ಯಾಚಾರ, ಕೊಲೆ, ಕಿರುಕುಳ ಪ್ರಕರಣಗಳಿಗೆ ಇನ್ನೊಂದು ಸೇರ್ಪಡೆ; ವೈದ್ಯಕೀಯ ವಿದ್ಯಾರ್ಥಿನಿ ಶವ ಪತ್ತೆ

ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾತ್ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದಾಗಿನಿಂದ ಹಲವಾರು ಸ್ಥಳಗಳ ಹೆಸರನ್ನು ಮರುನಾಮಕರಣ ಮಾಡಿದೆ. ಇತ್ತೀಚೆಗೆ ಆಗ್ರಾದ ಮೊಘಲ್ ಮ್ಯೂಸಿಯಂಗೆ ಛತ್ರಪತಿ ಶಿವಾಜಿ ಹೆಸರಿಡಲಾಗುವುದು ಎಂದು ಯೋಗಿ ಟ್ವೀಟ್ ಮಾಡಿದ್ದರು. ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

“ಯೋಗಿ ಸರ್ಕಾರ ಹೆಸರು ಬದಲಾಯಿಸುವುದರಲ್ಲೇ ಆಡಳಿತ ನಡೆಸುತ್ತಿದೆ” ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು.


ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...