Homeಮುಖಪುಟಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಆರೋಪ: ಐವರ ಶಿಕ್ಷಕರ ಅಮಾನತು

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಆರೋಪ: ಐವರ ಶಿಕ್ಷಕರ ಅಮಾನತು

- Advertisement -
- Advertisement -

ಹಿಜಾಬ್ ಗದ್ದಲದ ನಡುವೆ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆಗಳು ಪ್ರಾರಂಭವಾಗಿದ್ದು, ಗದಗ ಜಿಲ್ಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ಐವರು ಶಿಕ್ಷಕರು ಹಾಗೂ ಪರೀಕ್ಷಾ ಕೇಂದ್ರದ ಇಬ್ಬರು ಅಧೀಕ್ಷರನ್ನು ಅಮಾನತುಗೊಳಿಸಲಾಗಿದೆ.

ಬೋರ್ಡ್ ಪರೀಕ್ಷೆ ಬರೆಯುವಾಗ ಸಮವಸ್ತ್ರ ಕಡ್ಡಾಯ ಎಂದು ಕರ್ನಾಟಕ ಸರ್ಕಾರ ಮಾರ್ಚ್ 25ರಂದು ಆದೇಶ ಹೊರಡಿಸಿತ್ತು. ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಧಾರ್ಮಿಕ ಉಡುಪುಗಳನ್ನು ಧರಿಸುವುದನ್ನು ನಿಷೇಧಿಸುವ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

ಗದಗದ ಸಿ.ಎಸ್.ಪಾಟೀಲ ಬಾಲಕರ ಮತ್ತು ಬಾಲಕಿಯರ ಪ್ರೌಢಶಾಲೆಯಿಂದ ಅಮಾನತುಗೊಂಡಿರುವ ಏಳು ಮಂದಿಯ ಪೈಕಿ ಐವರು ಎಸ್.ಯು.ಹೊಕ್ಕಳ, ಎಸ್.ಎಂ.ಪತ್ತಾರ, ಎಸ್.ಜಿ.ಗೋಡ್ಕೆ, ಎಸ್.ಎಸ್.ಗುಜಮಾಗಡಿ ಮತ್ತು ವಿ.ಎನ್.ಕಿವುಡರ್‌ ಈ ಶಾಲೆಗಳ ಶಿಕ್ಷಕರಾಗಿದ್ದಾರೆ.

ಇನ್ನಿಬ್ಬರು (ಕೆಬಿ ಭಜಂತ್ರಿ ಮತ್ತು ಬಿಎಸ್ ಹೊನಗುಡಿ) ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಾಗಿದ್ದಾರೆ. ಅವರು ಇನ್ವಿಜಿಲೇಟರ್‌ಗಳನ್ನು ನೇಮಿಸುವ ಉಸ್ತುವಾರಿ ವಹಿಸಿದ್ದರು. ಮಾರ್ಚ್ 28, ಸೋಮವಾರದಂದು ಹಿಜಾಬ್ ಧರಿಸಿ ಐದು-ಆರು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದರು ಎಂದು ಆರೋಪಿಸಲಾಗಿದೆ.

ದಿ ಕ್ವಿಂಟ್ ವರದಿಯ ಪ್ರಕಾರ, ಶಿಕ್ಷಕರು ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳನ್ನು ಗುಲಾಬಿಗಳೊಂದಿಗೆ ಸ್ವಾಗತಿಸಿದರು. ಹಿಜಾಬ್ ಧರಿಸಿದ ವಿದ್ಯಾರ್ಥಿಗಳನ್ನು ಶಾಲೆಯ ಆವರಣ ಒಳಗೆ ಪ್ರವೇಶಿಸಲು ಅವರು ಅವಕಾಶ ನೀಡಿದರೆ ಹೊರತು, ಪರೀಕ್ಷೆಯ ಕೊಠಡಿಗಲ್ಲ.

ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ ಎಂದು ಟಿವಿ ಮಾಧ್ಯಮಗಳು ವರದಿ ಮಾಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು (ಡಿಡಿಪಿಐ) ಹೇಳಿದ್ದಾರೆ.

ಇದರ ಆಧಾರದ ಮೇಲೆ ಡಿಡಿಪಿಐ ಅವರು ನಿರೀಕ್ಷಕರ ಹೇಳಿಕೆ ಪಡೆದು ಅಧಿಕಾರಿಗಳ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಪರೀಕ್ಷೆಯನ್ನು ನಡೆಸುವಾಗ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಮತ್ತು ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು, 1966 ಅನ್ನು ಉಲ್ಲಂಘಿಸಿದ್ದಾರೆ ಎಂದು ಅವರು ಆರೋಪಿಸಿದ್ದರು.

ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಮಾರ್ಚ್ 25 ರಂದು ಸುತ್ತೋಲೆ ಹೊರಡಿಸಿದ್ದು, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಸರ್ಕಾರ ನಿಗದಿಪಡಿಸಿದ ಸಮವಸ್ತ್ರದಲ್ಲಿ ಹಾಜರಾಗಬೇಕು ಎಂದು ಸೂಚಿಸಿದೆ. ಖಾಸಗಿ ಶಾಲಾ ವಿದ್ಯಾರ್ಥಿಗಳು (ಅನುದಾನಿತ ಮತ್ತು ಅನುದಾನರಹಿತ) ತಮ್ಮ ಶಾಲಾ ಆಡಳಿತ ಮಂಡಳಿಗಳು ಸೂಚಿಸಿದ ಸಮವಸ್ತ್ರವನ್ನು ಧರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿರಿ: Explainer: ಹಲಾಲ್ ಹಾಗೆಂದರೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...