Homeಕರ್ನಾಟಕದಲಿತರ ಮೇಲೆ ದೌರ್ಜನ್ಯವೆಸಗಿದ ಆರೋಪ: ಸಚಿವ ಡಿ.ಸುಧಾಕರ್‌ರನ್ನು ಸಂಪುಟದಿಂದ ವಜಾ ಮಾಡಿ, ಬಂಧಿಸಿ ಎಂದ ಹೆಚ್‌ಡಿಕೆ

ದಲಿತರ ಮೇಲೆ ದೌರ್ಜನ್ಯವೆಸಗಿದ ಆರೋಪ: ಸಚಿವ ಡಿ.ಸುಧಾಕರ್‌ರನ್ನು ಸಂಪುಟದಿಂದ ವಜಾ ಮಾಡಿ, ಬಂಧಿಸಿ ಎಂದ ಹೆಚ್‌ಡಿಕೆ

- Advertisement -
- Advertisement -

ದಲಿತರಿಗೆ ಧಮ್ಕಿ ಹಾಕಿ ದೌರ್ಜನ್ಯ ಎಸಗಿಸಿದ ಆರೋಪ ಎದುರಿಸುತ್ತಿರುವ ಯೋಜನೆ ಹಾಗೂ ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜತೆ ಮಾತನಾಡಿದ ಹೆಚ್‌ಡಿಕೆ, ”ದಲಿತರ ರಕ್ಷಣೆ ಮಾಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಈ ಸರಕಾರದಲ್ಲಿ ಏನಾಗುತ್ತಿದೆ? ಸಚಿವರೇ ದಲಿತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಇಂಥ ವ್ಯಕ್ತಿಯನ್ನು ಸಂಪುಟದಲ್ಲಿ ಇರಿಸಿಕೊಳ್ಳಬಾರದು” ಎಂದರು.

ಎಫ್ ಐ ಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ:

”ಸಿದ್ದರಾಮಯ್ಯನವರೇ ನೀವು ಬೇರೆ ಪಕ್ಷದವರಿಗೆ ಮಾನ ಮರ್ಯಾದೆ ಇದೆಯಾ ಅಂತ ಕೇಳ್ತಾ ಇರ್ತೀರಲ್ಲ, ಅಲ್ಲವೇ? ನಿಮಗೆ ಏನಿದೆ ಅಂತ ನಾನು ಕೇಳಲು ಬಯಸುತ್ತೇನೆ. ಎಫ್ ಐ ಆರ್ ದಾಖಲಿಸಿದ ಪೊಲೀಸ್ ಅಧಿಕಾರಿಗಳ ಮೇಲೆಯೇ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಿರಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದೆಯಾ?” ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

”ಅಧಿಕಾರಿಗಳನ್ನು ಬಹಳ ಕೀಳಾಗಿ ನಡೆಸಿಕೊಳ್ಳುತ್ತಿದ್ದೀರಿ. ಎಫ್ಐಆರ್ ದಾಖಲಿಸಿದ ಅಧಿಕಾರಿಯನ್ನು ದಾಖಲೆಗಳನ್ನು ತೆಗೆದುಕೊಂಡು ಮನೆಗೆ ಬಾ ಅಂತ ಬೆದರಿಕೆ ಹಾಕುತ್ತೀರಿ. ಇದಾ ದಲಿತರ ರಕ್ಷಣೆ?” ಎಂದು ಕಿಡಿಕಾರಿದ್ದಾರೆ.

”ಈ ಭೂಮಿ ಪ್ರಕರಣ ಮುಗಿದೇ ಹೋಗಿತ್ತು. ಈಗ ಕಾನೂನುಬದ್ದವಾಗಿ ಜೀವ ಕೊಟ್ಟಿದ್ದಾರೆ. ಎಲ್ಲದಕ್ಕೂ ತನಿಖೆ ತನಿಖೆ ಅಂತ ಹೇಳ್ತೀರಲ್ಲಾ, ಇದಕ್ಕೆ ಯಾವ ತನಿಖೆ ಮಾಡುತ್ತೀರಾ? ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಮೇಲೆ ಕಾಗದದ ಚೂರು ಎಸೆದರು ಎಂದು ನೀವೆಲ್ಲಾ ಉದ್ದುದ್ದ ಬಾಷಣ ಮಾಡಿದ್ದರಲ್ಲ ಸಿದ್ದರಾಮಯ್ಯ, ಕೃಷ್ಣ ಬೈರೇಗೌಡ ಅವರೇ.. ಇವತ್ತು ಆ ದಲಿತ ಸಮುದಾಯದ ಹೆಣ್ಣು ಮಗಳ ಮೇಲೆ ಮಚ್ವು ಕೊಡಲಿ ಹಿಡಿದು ಬೆದರಿಸಲು ಹೊರಟಿದ್ದೀರಲ್ಲಾ? ಜನ ಇದಕ್ಕೆನಾ ನಿಮಗೆ ಮತ ಹಾಕಿದ್ದು?” ಎಂದು ಆಕ್ರೋಶ ವ್ಯಕ್ತಪಡಿಸಿದರು.

”ಮಚ್ವು, ಕೊಡಲಿ, ಕತ್ತಿ ಹಿಡಿಯುವವರನ್ನು ಮಂತ್ರಿ ಮಾಡಿಕೊಂಡಿದ್ದೀರಲ್ಲಾ, ದಲಿತರ ಪರ ಕಾಳಜಿ ಇರುವ ವಿಧೇಯಕವನ್ನು ಬೇರೆ ಬೇರೆ ಸದನದಲ್ಲಿ ಪಾಸ್ ಮಾಡಿಕೊಂಡಿದ್ದೀರಲ್ಲ, ಕಸದ ಬುಟ್ಟಿಗೆ ಹಾಕಲಿಕ್ಕೆ ಆ ಬಿಲ್ ಅನ್ನು ಪಾಸ್ ಮಾಡಿಕೊಂಡಿದ್ದೀರಾ? ತಕ್ಷಣ ನಿಮ್ಮ ಮಂತ್ರಿಯನ್ನು ಸಂಪುಟದಿಂದ ವಜಾ ಮಾಡಿ, ಬಂಧಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

”ನಾವು ಟೀಕೆ ಮಾಡಿದರೆ ಅಸೂಯೆ ಅಂತಾರೆ. ಇಂತಹ ಕೆಲಸ ಮಾಡಿದರೆ ನಾವು ನೋಡಿಕೊಂಡು ಸುಮ್ಮನೆ ಇರಬೇಕಾ? ಹೀಗೆನಾ ನೀವು ದಲಿತರನ್ನು ಉದ್ದಾರ ಮಾಡುವುದು ಎಂದ ಅವರು; ಇದು ದಲಿತ ವಿರೋಧಿ, ಜನವಿರೋಧಿ ಸರ್ಕಾರ” ಎಂದು ಕಿಡಿಕಾರಿದ್ದಾರೆ.

”ದಲಿತ ಸಂಘಟನೆಗಳಿಗೂ ನಾನು ಮನವಿ ಮಾಡುತ್ತೇನೆ. ಅವರೂ ಇದನ್ನು ಗಮನಿಸಲಿ. ಅವರು ಈ ಅನ್ಯಾಯವನ್ನು ನೋಡಿಕೊಂಡು ಸುಮ್ಮನೆ ಇರಬಾರದು. ಈ ಮಂತ್ರಿಯ ವಿರುದ್ಧ ಹೋರಾಟ ನಡೆಸಬೇಕು”  ಎಂದು ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ: ಜಲ ಜೀವನ್ ಮಿಷನ್‌ ಹಗರಣ ಬಯಲಿಗೆಳೆದ ದಲಿತ ಐಎಎಸ್ ಅಧಿಕಾರಿಗೆ ಕಿರುಕುಳ: ಕಾಂಗ್ರೆಸ್ ಆರೋಪ

ಏನಿದು ಪ್ರಕರಣ?

ಸಚಿವ ಡಿ ಸುಧಾಕರ್ ವಿರುದ್ಧ ಯಲಹಂಕದಲ್ಲಿ ವಿವಾದಿತ ಆಸ್ತಿಯಿಂದ ಕುಟುಂಬವನ್ನು ಅತಿಕ್ರಮ ಪ್ರವೇಶ ಮಾಡಿ ಬಲವಂತವಾಗಿ ಹೊರಹಾಕಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ದೂರಿನ ಆಧಾರದ ಮೇಲೆ ಸಚಿವರು ಮತ್ತು ಇತರರ ವಿರುದ್ಧ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಅವರನ್ನು ಆರೋಪಿ ಸಂಖ್ಯೆ 1 ಮತ್ತು ಸಚಿವ ಸುಧಾಕರ್ ಅವರನ್ನು ಆರೋಪಿ ಸಂಖ್ಯೆ 2 ಎಂದು ಹೆಸರಿಸಲಾಗಿದೆ. ಶ್ರೀನಿವಾಸ್ ಮತ್ತು ಭಾಗ್ಯಮ್ಮ ಅವರನ್ನು 3 ಮತ್ತು 4 ಆರೋಪಿಗಳಾಗಿ ಹೆಸರಿಸಲಾಗಿದೆ. ಸುಧಾಕರ್ ಸೆವೆನ್ ಹಿಲ್ಸ್ ಸಂಸ್ಥೆಯ ನಿರ್ದೇಶಕರಾಗಿದ್ದಾರೆ.

ತನ್ನ ಮತ್ತು ಸೆವೆನ್ ಹಿಲ್ಸ್ ಡೆವಲಪರ್ಸ್ ನಡುವೆ ನ್ಯಾಯಾಲಯದಲ್ಲಿ ಯಲಹಂಕದ ಸರ್ವೆ ನಂಬರ್ 108/1ಕ್ಕೆ ಸಂಬಂಧಿಸಿದ ಆಸ್ತಿ ವಿವಾದ ಬಾಕಿ ಇದೆ ಎಂದು ಸುಬಮ್ಮ ಎಂಬ ದೂರುದಾರರು ಆರೋಪಿಸಿದ್ದಾರೆ.

ಶನಿವಾರದಂದು ಸುಧಾಕರ್ ಇತರ 35 ಮಂದಿ ಜೆಸಿಬಿಯೊಂದಿಗೆ ಬಂದು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಶೀಟ್ ಶೆಡ್ ಮತ್ತು ಮನೆಯ ಕಾಂಪೌಂಡ್ ಅನ್ನು ಧ್ವಂಸಗೊಳಿಸಿದ್ದಾರೆ. ಕುಟುಂಬದವರು ಮರಳಿ ಬಂದು ಸಚಿವರನ್ನು ವಿಚಾರಿಸಿದಾಗ ಜಾತಿ ನಿಂದನೆ ಮಾಡಿದರು ಎಂದು ದೂರುದಾರರು ಹೇಳಿದ್ದಾರೆ. ಸಚಿವ ಸುಧಾಕರ್ ತನ್ನ ಮಗಳು ಆಶಾ ಮೇಲೆ ಹಲ್ಲೆ ನಡೆಸಿದ್ದಾರೆ. ಅತಿಕ್ರಮಣದಾರರನ್ನು ತೆರವುಗೊಳಿಸುವಂತೆ ಸುಬಮ್ಮ ಪೊಲೀಸರಿಗೆ ಸೂಚಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ. ಮಂಗಳವಾರ, ವಿವಾದಿತ ಸ್ಥಳದಲ್ಲಿ ಸಚಿವರು ಎಂದು ಹೇಳಲಾದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ದೂರಿನ ಆಧಾರದ ಮೇಲೆ ಪೊಲೀಸರು ದೌರ್ಜನ್ಯ ತಡೆ ಕಾಯ್ದೆಯಡಿ ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆದರೆ, ಆರೋಪವನ್ನು ನಿರಾಕರಿಸಿದ ಸಚಿವರು, ತಾವು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಹೇಳಿದ್ದಾರೆ. “ನಾನು ಹಲವಾರು ವರ್ಷಗಳಿಂದ ಅವರನ್ನು ಭೇಟಿ ಮಾಡಿಲ್ಲ. ನಾನು ಕೂಡ ಸ್ಥಳಕ್ಕೆ ಭೇಟಿ ನೀಡಿಲ್ಲ. ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಜಮೀನು ಕಂಪನಿಗೆ ಸೇರಿದ್ದು, ಹಣವನ್ನು ಅವರ ಖಾತೆಗೆ ವರ್ಗಾಯಿಸಲಾಗಿದೆ ಮತ್ತು ಅದರ ಪುರಾವೆ ನಮ್ಮ ಬಳಿ ಇದೆ ಎಂದು ಸಚಿವರು ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...