Homeಮುಖಪುಟಉತ್ತರಾಖಂಡದಲ್ಲಿ ಮತಪತ್ರದ ದುರುಪಯೋಗ ಆರೋಪ: ವೀಡಿಯೊ ಹಂಚಿಕೊಂಡ ಹರೀಶ್‌ ರಾವತ್‌‌

ಉತ್ತರಾಖಂಡದಲ್ಲಿ ಮತಪತ್ರದ ದುರುಪಯೋಗ ಆರೋಪ: ವೀಡಿಯೊ ಹಂಚಿಕೊಂಡ ಹರೀಶ್‌ ರಾವತ್‌‌

- Advertisement -
- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಅವರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದನ್ನು ಪೋಸ್ಟ್ ಮಾಡಿದ್ದು, ಇದು ಉತ್ತರಾಖಂಡ್‌‌ನ ಸೇನಾ ಕೇಂದ್ರದಲ್ಲಿ ವ್ಯಕ್ತಿಯೊಬ್ಬ ಹಲವಾರು ಅಂಚೆ ಮತಪತ್ರಗಳಿಗೆ ಟಿಕ್ ಮತ್ತು ಸಹಿ ಮಾಡುತ್ತಿರುವುದನ್ನು ಬಹಿರಂಗಪಡಿಸಿದೆ.

ಮಂಗಳವಾರ ತಮ್ಮ ಟ್ವಿಟರ್ ಹ್ಯಾಂಡಲ್ ಮತ್ತು ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿರುವ ಹರೀಶ್‌‌ ರಾವತ್, “ಎಲ್ಲರ ಮಾಹಿತಿಗಾಗಿ ಈ ಕಿರು ವೀಡಿಯೊವನ್ನು ಹಂಚಿಕೊಳ್ಳುತ್ತಿದ್ದೇನೆ. ಸೇನಾ ಕೇಂದ್ರದಲ್ಲಿ ವ್ಯಕ್ತಿಯೊಬ್ಬ ಹಲವಾರು ಮತಪತ್ರಗಳಿಗೆ ಟಿಕ್ ಮತ್ತು ಸಹಿ ಹಾಕುತ್ತಿದ್ದಾರೆ. ಚುನಾವಣಾ ಆಯೋಗವು ಇದನ್ನು ಗಮನಿಸುತ್ತದೆಯೇ?” ಎಂದು ಅವರು ಕೇಳಿದ್ದಾರೆ.

ರಾವತ್ ಅವರ ವಕ್ತಾರ ಸುರೇಂದ್ರ ಕುಮಾರ್ ಅವರು ವೀಡಿಯೊದ ಮೂಲವನ್ನು ಬಹಿರಂಗಪಡಿಸಲು ನಿರಾಕರಿಸಿದ್ದು, ವಿಡಿಯೊ ಉತ್ತರಾಖಂಡದಿಂದ ಬಂದಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಪಕ್ಷವು ಚುನಾವಣಾ ಆಯೋಗಕ್ಕೆ ಇನ್ನೂ ಔಪಚಾರಿಕ ದೂರು ನೀಡಿಲ್ಲ, ಆದರೆ ಚುನಾವಣಾ ಆಯೋಗ ಇದನ್ನು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಬಹುದು ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ಇದನ್ನು ಪ್ರಜಾಪ್ರಭುತ್ವದ ಅಣಕ ಎಂದು ಬಣ್ಣಿಸಿದ್ದು, ಚುನಾವಣಾ ಆಯೋಗವು ವೀಡಿಯೊವನ್ನು ಗಮನದಲ್ಲಿಟ್ಟುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ರಾವತ್ ಅವರ ಟ್ವೀಟ್ ಅನ್ನು ರಾಜ್ಯ ಕಾಂಗ್ರೆಸ್ ರಿಟ್ವೀಟ್ ಮಾಡಿದೆ.

ಉತ್ತರಾಖಂಡ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪ್ರೀತಮ್ ಸಿಂಗ್, “ಪ್ರಜಾಪ್ರಭುತ್ವವನ್ನು ಅಪಹಾಸ್ಯ ಮಾಡುವ ಈ ವೀಡಿಯೊದಲ್ಲಿ, ಸೇನಾ ಕೇಂದ್ರದಲ್ಲಿ ವ್ಯಕ್ತಿಯೊಬ್ಬರು ತಮ್ಮ ಆಯ್ಕೆಯ ಪಕ್ಷದ ಪರವಾಗಿ ಹಲವಾರು ಅಂಚೆ ಮತಪತ್ರಗಳಿಗೆ ಟಿಕ್ ಮತ್ತು ಸಹಿ ಹಾಕುತ್ತಿದ್ದಾರೆ” ಎಂದು ಬರೆದಿದ್ದಾರೆ.

ಚುನಾವಣಾ ಆಯೋಗವು ಇದನ್ನು ಅರಿತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರೀತಮ್‌ ಸಿಂಗ್ ಹೇಳಿದ್ದಾರೆ.

ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಇದು ಕಾಂಗ್ರೆಸ್‌ನ ಹತಾಶೆ ಎಂದು ಬಣ್ಣಿಸಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯದಿಂದ ಕಾಂಗ್ರೆಸ್‌ ಇದನ್ನು ಮಾಡುತ್ತಿದೆ ಎಂದು ಹೇಳಿದೆ.

“ಜನರ ದಿಕ್ಕು ತಪ್ಪಿಸುವಲ್ಲಿ ವಿಫಲವಾಗಿದ್ದೇವೆ ಎಂದು ಅರಿತಿರುವ ಕಾಂಗ್ರೆಸ್ ಇಂತಹ ತಂತ್ರಕ್ಕೆ ಮೊರೆ ಹೋಗುತ್ತಿದೆ. ತನ್ನ ಸೋಲು ಸನ್ನಿಹಿತವಾಗಿರುವ ಹಿನ್ನೆಲೆಯಲ್ಲಿ ಇವಿಎಂ ದುರ್ಬಳಕೆ ಬಗ್ಗೆ ಮಾತನಾಡುತ್ತಿದ್ದ ಪಕ್ಷ ಈಗ ಬ್ಯಾಲೆಟ್‌ ಪೇಪರ್‌ ಬಗ್ಗೆ ಮಾತನಾಡುತ್ತಿರುವುದು ಪಕ್ಷದ ಹತಾಶೆಯನ್ನು ತೋರಿಸುತ್ತದೆ” ಎಂದು ಪ್ರದೇಶ ಬಿಜೆಪಿ ಮಾಧ್ಯಮ ಉಸ್ತುವಾರಿ ಮನ್ವೀರ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಸೇನೆಯನ್ನು ರಾಜಕೀಯದಿಂದ ದೂರವಿಡಬೇಕು ಮತ್ತು ಕಾಂಗ್ರೆಸ್ ಸತ್ಯಾಸತ್ಯತೆಯನ್ನು ಪರೀಕ್ಷಿಸದೆ ಇಂತಹ ಆರೋಪಗಳನ್ನು ಮಾಡುವುದನ್ನು ತಪ್ಪಿಸಬೇಕು ಎಂದು ಚೌಹಾಣ್ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...