Homeಮುಖಪುಟತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನ ಆರೋಪ: ವಿಡಿಯೊ ಪ್ರದರ್ಶಿಸಿದ ಮುಖ್ಯಮಂತ್ರಿ ಕೆಸಿಆರ್‌

ತೆಲಂಗಾಣ ಶಾಸಕರ ಖರೀದಿಗೆ ಬಿಜೆಪಿ ಯತ್ನ ಆರೋಪ: ವಿಡಿಯೊ ಪ್ರದರ್ಶಿಸಿದ ಮುಖ್ಯಮಂತ್ರಿ ಕೆಸಿಆರ್‌

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ (ಕೆಸಿಆರ್) ಅವರು ಗುರುವಾರ ಅನಿರೀಕ್ಷಿತ ಸುದ್ದಿಗೋಷ್ಠಿಯನ್ನು ನಡೆಸಿದ್ದಾರೆ. “ನಮ್ಮ ಪಕ್ಷದ ಶಾಸಕರನ್ನು ಖರೀದಿಸಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನಿಸಿದೆ” ಎಂಬ ಆರೋಪವನ್ನು ಮಾಡಿರುವ ಅವರು, “ವೀಡಿಯೊಗಳ ಸರಣಿಯನ್ನು” ಪ್ರದರ್ಶಿಸಿದ್ದಾರೆ.

ತಮ್ಮ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಪಕ್ಷದ ನಾಲ್ವರು ಶಾಸಕರನ್ನು ಖರೀದಿಸುವ ಪ್ರಯತ್ನ ವಿಫಲಗೊಳಿಸಲಾಗಿದೆ ಎಂದಿರುವ ಕೆಸಿಆರ್, “ಬಿಜೆಪಿಗೆ ಸಂಬಂಧಿಸಿದ ಒಂದು ಗಂಟೆಗೂ ಹೆಚ್ಚಿನ ಹಿಡನ್ ಕ್ಯಾಮೆರಾ ಫೂಟೇಜ್ ತನ್ನ ಬಳಿ ಇದೆ” ಎಂದು ಮಾಹಿತಿ ನೀಡಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಐದು ನಿಮಿಷಗಳ ಕಾಲ ವಿಡಿಯೊ ಪ್ರದರ್ಶಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತೆಲಂಗಾಣದ ಫಾರ್ಮ್‌ಹೌಸ್‌ನಲ್ಲಿ ಕಳೆದ ವಾರ ನಡೆದ ಘಟನೆಯು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಯಿತು. ಗುರುವಾರ ನಡೆದ ಪ್ರಮುಖ ಉಪಚುನಾವಣೆಗೆ ಮುನ್ನ ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿತ್ತು.

ದಲ್ಲಾಳಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ‘20 ಬಾರಿ’, ಪಿಎಂ ಮೋದಿಯನ್ನು ‘ಮೂರು ಬಾರಿ’ ಉಲ್ಲೇಖಿಸಿದ್ದಾರೆ. ಕರ್ನಾಟಕದಲ್ಲಾದ ಸರ್ಕಾರ ಬದಲಾವಣೆಯ ಕುರಿತು ಅಲ್ಲಿ ಉಲ್ಲೇಖಿಸಲಾಗಿದ್ದು ಫಾರ್ಮ್‌ಹೌಸ್‌ನಲ್ಲಿ ನಡೆದ ಸಭೆಯು ಆಪರೇಷನ್‌ ಕಮಲದ ಕಾರ್ಯಾಚರಣೆಗೆ ಸಂಬಂಧಿಸಿದೆ ಎಂಬುದಕ್ಕೆ ವೀಡಿಯೊಗಳು ಸಾಕ್ಷಿಯಾಗಿದೆ ಎಂದು ಕೆಸಿಆರ್ ವಿವರಿಸಿದ್ದಾರೆ.

“ದೇಶವನ್ನು ಉಳಿಸಿ” ಎಂದು ನ್ಯಾಯಾಂಗವನ್ನು ವಿನಂತಿಸಿದ ಕೆಸಿಆರ್, ತಾನು ವೀಡಿಯೊಗಳನ್ನು ಸುಪ್ರೀಂ ಕೋರ್ಟ್, ಹೈಕೋರ್ಟ್‌ಗಳು ಮತ್ತು ವಿರೋಧ ಪಕ್ಷದ ನಾಯಕರಿಗೆ ಕಳುಹಿಸುವುದಾಗಿ ಹೇಳಿದ್ದಾರೆ. ತೆಲಂಗಾಣ, ಆಂಧ್ರಪ್ರದೇಶ, ದೆಹಲಿ ಮತ್ತು ರಾಜಸ್ಥಾನದಲ್ಲಿ ಸರ್ಕಾರಗಳನ್ನು ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಶಾಸಕರ ಖರೀದಿಸಲು ಯತ್ನಿಸಲಾಗಿದೆ ಎಂಬ ಆರೋಪಗಳನ್ನು ಬಿಜೆಪಿ ನಿರಾಕರಿಸಿದೆ. “ಕೆಸಿಆರ್‌ ಪ್ರದರ್ಶಿಸಿರುವ ವಿಡಿಯೊಗಳು ಬಾಡಿಗೆ ನಟರನ್ನು ಕರೆಸಿ ಮಾಡಲಾದ ವಿಡಿಯೋ ರೆಕಾರ್ಡಿಂಗ್” ಎಂದು ಪ್ರತಿಕ್ರಿಯಿಸಿದೆ.

ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿಯವರು ತೆಲಂಗಾಣ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ಫಾರ್ಮ್ ಹೌಸ್ ಕುಟುಂಬದಲ್ಲಿ ಉಂಟಾಗಿರುವ ಆತಂಕದ ಮಟ್ಟವನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

“ಕೆಲವು ದೆಹಲಿ ದಲ್ಲಾಳಿಗಳು ತೆಲಂಗಾಣದ ಸ್ವಾಭಿಮಾನಕ್ಕೆ ಸವಾಲು ಹಾಕಲು ಬಂದರು. ಅವರು ನಾಲ್ಕು ಶಾಸಕರಿಗೆ ₹ 100 ಕೋಟಿ ನೀಡಿದರು” ಎಂದು ರಾವ್ ಎರಡು ದಿನಗಳ ಹಿಂದೆ ರ್ಯಾಲಿಯಲ್ಲಿ ಹೇಳಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಉದ್ಯಮಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ರಾಮಚಂದ್ರ ಭಾರತಿ ಅಲಿಯಾಸ್ ಸತೀಶ್ ಶರ್ಮಾ, ನಂದ ಕುಮಾರ್ ಮತ್ತು ಸಿಂಹಯಾಜಿ ಸ್ವಾಮ್ಯತ್ ಅವರನ್ನು 14 ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿದೆ.

ಬುಧವಾರ ತೆಲಂಗಾಣ ರಾಷ್ಟ್ರ ಸಮಿತಿ ಶಾಸಕ ಪೈಲಟ್ ರೋಹಿತ್ ರೆಡ್ಡಿ ಪೊಲೀಸರಿಗೆ ದೂರು ನೀಡಿದ್ದು, “ಬಿಜೆಪಿಯವರಾದ ರಾಮಚಂದ್ರ ಭಾರತಿ ಮತ್ತು ನಂದಕುಮಾರ್ ನಮ್ಮನ್ನು ಭೇಟಿ ಮಾಡಿದ್ದರು. ಬಿಜೆಪಿ ಸೇರಲು ₹ 100 ಕೋಟಿ ಆಮಿಷ ಒಡ್ಡಿದ್ದರು” ಎಂದು ಆರೋಪಿಸಿದ್ದಾರೆ.

ತಪ್ಪಿದಲ್ಲಿ ಕೇಂದ್ರೀಯ ತನಿಖಾ ದಳದಂತಹ ಕೇಂದ್ರೀಯ ಸಂಸ್ಥೆಗಳ ಮೂಲಕ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಅವರು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಅಮಿತ್ ಶಾರನ್ನು ಬಂಧಿಸಿ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಆಗ್ರಹ

ಇತ್ತೀಚೆಗೆ ಮಾತನಾಡಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, “ಪ್ರಕರಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗಿಯಾಗಿರುವುದು ಕಂಡುಬಂದರೆ ಅವರನ್ನು ಬಂಧಿಸಬೇಕು” ಎಂದು ಒತ್ತಾಯಿಸಿದ್ದರು.

ಈ ಹಿಂದೆ ದೆಹಲಿ, ಪಂಜಾಬ್ ಮತ್ತು ಇತರ ಎಂಟು ರಾಜ್ಯಗಳಲ್ಲಿ ಆಪರೇಷನ್‌ ಕಮಲ ಮಾಡುವ ಪ್ರಯತ್ನಗಳನ್ನು ಬಿಜೆಪಿ ಮಾಡಿತ್ತು ಎಂದಿದ್ದ ಅವರು, “ಬಿಜೆಪಿ ಆಡುತ್ತಿರುವ ಕೆಟ್ಟ ಆಟವು (dirty game) ತೆಲಂಗಾಣದಲ್ಲಿ ಈ ಬಾರಿ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ” ಎಂದು ಕುಟುಕಿದ್ದರು.

ಆಡಿಯೊವನ್ನು ಉಲ್ಲೇಖಿಸಿದ್ದ ಸಿಸೋಡಿಯಾ, “‘ಶಾಹ್ ಜಿ’ ಎಂಬವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಿದ್ದರೆ, ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು. ಏಕೆಂದರೆ ಒಬ್ಬ ದಲ್ಲಾಳಿ, ಶಾಸಕನನ್ನು ಖರೀದಿಸಿ ಸಿಕ್ಕಿಬಿದ್ದರೆ ಮತ್ತು ದೇಶದ ಗೃಹ ಸಚಿವರ ಹೆಸರು ಅದರಲ್ಲಿ ಕೇಳಿಬಂದರೆ ಅದು ಇಡೀ ದೇಶಕ್ಕೆ ಅಪಾಯಕಾರಿ” ಎಂದು ಎಚ್ಚರಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...