Homeಕರ್ನಾಟಕಪತ್ರಕರ್ತರಿಗೆ ರಾಜ್ಯ ಸರ್ಕಾರದಿಂದ ಲಂಚ ಆರೋಪ: ಸರಣಿ ಟ್ವೀಟ್‌ ಮೂಲಕ ಕಾಂಗ್ರೆಸ್ ದಾಳಿ

ಪತ್ರಕರ್ತರಿಗೆ ರಾಜ್ಯ ಸರ್ಕಾರದಿಂದ ಲಂಚ ಆರೋಪ: ಸರಣಿ ಟ್ವೀಟ್‌ ಮೂಲಕ ಕಾಂಗ್ರೆಸ್ ದಾಳಿ

“ನಾವು ಸುಮ್ಮನೇ ಬೊಮ್ಮಾಯಿಯವರನ್ನು ಪೇಸಿಎಂ ಎಂದಿಲ್ಲ” ಎಂದ ಕಾಂಗ್ರೆಸ್ ಕುಟುಕಿದೆ.

- Advertisement -
- Advertisement -

ದೀಪಾವಳಿ ಹಬ್ಬದ ನೆಪದಲ್ಲಿ, ಮುಂದಿನ ಚುನಾವಣೆಯ ಪರಿಣಾಮಗಳನ್ನು ಊಹಿಸಿ ಬಿಜೆಪಿ ಸರ್ಕಾರ ರಾಜ್ಯದ ಕೆಲವು ಪತ್ರಕರ್ತರಿಗೆ ಎರಡೂವರೆ ಲಕ್ಷ ರೂ.ಗಳಷ್ಟು ಲಂಚವನ್ನು ನೀಡಿರುವ ಎಂಬ ಆರೋಪ ಬಂದಿದ್ದು, ಈ ಕುರಿತು ಪ್ರತಿಪಕ್ಷ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.

ದೀಪಾವಳಿಯ ಸಂದರ್ಭದಲ್ಲಿ ಕರ್ನಾಟಕದ ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಗಳನ್ನು ಗಿಫ್ಟ್ ರೂಪದಲ್ಲಿ ಲಂಚ ನೀಡಿರುವ ಆರೋಪದ ಆಘಾತಕಾರಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೀಪಾವಳಿಯ ಸಂದರ್ಭದಲ್ಲಿ, ಕರ್ನಾಟಕದ ಬಹುತೇಕ ಎಲ್ಲಾ ಪತ್ರಕರ್ತರು ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳು ಮತ್ತು ತಲಾ 2.5 ಲಕ್ಷ ನಗದು ಉಡುಗೊರೆಯಾಗಿ ನೀಡಿದ್ದಾರೆ. ದಯವಿಟ್ಟು ಚುನಾವಣೆಯವರೆಗೂ ಮಾಧ್ಯಮಗಳಿಂದ ಸರ್ಕಾರದ ವಿರೋಧಿ ಸುದ್ದಿಗಳನ್ನು ನಿರೀಕ್ಷಿಸಬೇಡಿ” ಎಂಬ ವೈರಲ್ ವಾಟ್ಸಾಪ್ ಸಂದೇಶದ ಜಾಡು ಹಿಡಿದು ಹೊರಟಾಗ ಸರ್ಕಾರದ ಬೃಹತ್ ಭ್ರಷ್ಟಾಚಾರ ಬಯಲಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ #SayCM ಹ್ಯಾಷ್‌ಟ್ಯಾಗ್‌ನಲ್ಲಿ ಕಾಂಗ್ರೆಸ್ ಪಕ್ಷ ಸರಣಿ ಟ್ವೀಟ್ ಮಾಡಿದೆ. “ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯ ‘ಸ್ವೀಟ್ ಬಾಕ್ಸ್ ಲಂಚ’ದ ಕುರಿತು ನ್ಯಾಯಾಂಗ ತನಿಖೆಯಾಗಬೇಕು. ಅದು ಸಾರ್ವಜನಿಕರ ತೆರಿಗೆ ಹಣದ ದುರ್ಬಳಕೆಯೇ? ಕಮಿಷನ್ ಭ್ರಷ್ಟಾಚಾರದ ಪಾಪದ ಹಣವೇ? ಆ ಹಣದ ಮೂಲ ಯಾವುದು? ಎಷ್ಟು ಹಣ ಲಂಚವಾಗಿ ನೀಡಲಾಗಿದೆ, ಪಡೆದವರೆಷ್ಟು, ವಾಪಸ್ ನೀಡಿದವರೆಷ್ಟು ಎಂಬಿತ್ಯಾದಿ ಸಂಗತಿ ರಾಜ್ಯದ ಜನತೆಗೆ ತಿಳಿಯಬೇಕು” ಎಂದು ಆಗ್ರಹಿಸಿದೆ.

“ಸಿಎಂ ಕಚೇರಿ ನೀಡಿದ ₹2.5 ಲಕ್ಷ ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ. ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ದಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಸಿಎಂ ಉತ್ತರಿಸಬೇಕು” ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಇದನ್ನೂ ಓದಿರಿ: ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚದ ಆರೋಪ

“ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು. ಆ ಹಣ ಯಾರದ್ದು? ಸರ್ಕಾರದ್ದೇ? ಬಿಜೆಪಿ ಪಕ್ಷದ್ದೇ? ಮುಖ್ಯಮಂತ್ರಿಗಳದ್ದೇ? 40% ಕಮಿಷನ್ ಆ ಹಣದ ಮೂಲವೇ? ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ? ಬೊಮ್ಮಾಯಿಯವರೇ ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ?” ಎಂದು ಸರಣಿ ಪ್ರಶ್ನೆಗಳನ್ನು ಕೇಳಲಾಗಿದೆ.

“ನಾವು ಸುಮ್ಮನೇ ಬೊಮ್ಮಾಯಿಯವರನ್ನು ಪೇಸಿಎಂ ಎಂದಿಲ್ಲ! ಈ ಸರ್ಕಾರ ಲಂಚವನ್ನು ಪಡೆಯುತ್ತದೆ, ಲಂಚವನ್ನು ನೀಡುತ್ತದೆ! ಇವೆಲ್ಲವೂ #PayCM ಮೂಲಕವೇ ನಡೆಯುತ್ತದೆಯೇ ಮುಖ್ಯಮಂತ್ರಿಗಳೇ? ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದಂತೆ ಮಾಧ್ಯಮಗಳನ್ನೂ ಖರೀದಿಸಿ ಅಕ್ರಮಗಳನ್ನು ಮುಚ್ಚಿಕೊಳ್ಳುವ ಹುನ್ನಾರವೇ?” ಎಂದು ಖಾರವಾಗಿ ಪ್ರಶ್ನೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಥೂ …..ಇದು ನಿಜವೇ ಆಗಿದ್ದರೆ ಇದೆಂಥ ಮೂರು ಬಿಟ್ಟ ಸರಕಾರ…..ಸುಳ್ಳು ವಂಚನೆ ಮೋಸ ಮಾಡಿ ಯಾರಿಗೋಸ್ಕರ ಆಳ್ವಿಕೆ ಮಾಡುವುದು ಅಂತ ಜನರು ಇದನ್ನು ಬಹಳ ಗಂಭೀರವಾಗಿ ಗಮನಿಸಬೇಕು ದಲಿತರಿಗೆ ರಿಸರ್ವೇಶನ್ ಕೊಡುತ್ತೇನೆ ಅಂತ ಸುಮ್ಮನೆ ಏರಿಸಿ ಮಕ್ಕಳಿಗೆ ವಿದ್ಯಾಭ್ಯಾಸಕ್ಕೂ ಅವಕಾಶ ಕೊಡದೆ ವಿದ್ಯಾರ್ಥಿ ವೇತನವು ಕೊಡದೆ ಮೊಳಕೆಯಲ್ಲಿ ವಿದ್ಯಾರ್ಥಿ ಜೀವನವನ್ನೇ ಮುಳುಗಿಸಿ ಬಿಟ್ಟು ಅವರ ಭವಿಷ್ಯವನ್ನೇ ಹಾಳು- ಮಾಡುವ ಇದೆಂಥ ಸರಕಾರ ಕಾಣ್ತಿವಿ ಸ್ವಾಮಿ……

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...