Homeಮುಖಪುಟಬ್ರಾಹ್ಮಣರ ಬಗ್ಗೆ ಅವಹೇಳನ ಆರೋಪ: RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ದೂರು ದಾಖಲು

ಬ್ರಾಹ್ಮಣರ ಬಗ್ಗೆ ಅವಹೇಳನ ಆರೋಪ: RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ದೂರು ದಾಖಲು

- Advertisement -
- Advertisement -

RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ ಎನ್ನುವಂತಹ ಆರೋಪ ಕೇಳಿಬಂದಿದ್ದು, ಇದೀಗ ಅವರ ವಿರುದ್ಧ ಬಿಹಾರ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಭಾನುವಾರ ಮುಂಬಯಿಯಲ್ಲಿ ನಡೆದ ಸಂತ ರವಿದಾಸ್‌ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವತ್‌ ಮಾತನಾಡುವಾಗ, ಈ ಜಾತಿ ವ್ಯವಸ್ಥೆಯನ್ನು ಬ್ರಾಹ್ಮಣ ಸಮುದಾಯ ಸೃಷ್ಟಿಸಿದೆ ಎಂದು ಹೇಳಿದ್ದಾರೆ. ಇದು ಬ್ರಾಹ್ಮಣರಿಗೆ ಅವಮಾನ ಮಾಡುವ ಹೇಳಿಕೆ ಎಂದು ವಕೀಲ ಸುಧೀರ್‌ ಕುಮಾರ್‌ ಓಜಾ ಅವರು ಮುಜಾಫರ್‌ಪುರ ಜಿಲ್ಲೆಯ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಸಿಜೆಎಂ) ಕೋರ್ಟ್‌ನಲ್ಲಿ ಪ್ರಕರಣ ಹೂಡಿದ್ದಾರೆ. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಫೆಬ್ರವರಿ 20ಕ್ಕೆ ಮುಂದೂಡಲಾಗಿದೆ.

ಭಾಷಣದಲ್ಲಿ ಭಾಗವತ್ ಮಾತುಗಳು:-
”ಹಿಂದೂ ಸಮಾಜದಲ್ಲಿ ಚಾಲ್ತಿಯಲ್ಲಿರುವ ಈ ಕೆಟ್ಟ ಜಾತಿ ಪದ್ಧತಿಯನ್ನು ಸೃಷ್ಟಿಸಿದ್ದು ದೇವರಲ್ಲ, ಅದು ಪುರೋಹಿತ ವರ್ಗದವರು ಸೃಷ್ಟಿ ಮಾಡಿರುವಂತಹದ್ದು” ಎಂದು ದೂಷಿಸಿದ್ದರು. ಪುರೋಹಿತಶಾಹಿಯೊಂದಿಗೆ ಸಂಬಂಧ ಹೊಂದಿರುವ ಬ್ರಾಹ್ಮಣರ ಬಗ್ಗೆ ಭಾಗವತ್‌ ಮಾತನಾಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಬುದ್ಧ, ಬಸವ, ಅಂಬೇಡ್ಕರ್ ಹೇಳಿರುವುದನ್ನೇ ನಾನು ಹೇಳಿದ್ದೇನೆ, ಬ್ರಾಹ್ಮಣರನ್ನು ಅವಮಾನಿಸಿಲ್ಲ: ಹೆಚ್‌ಡಿಕೆ ಸ್ಪಷ್ಟನೆ

“ಸತ್ಯವೇ ದೇವರು. ವ್ಯಕ್ತಿಯೊಬ್ಬರ ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇದ್ದರೂ ಎಲ್ಲರೂ ಒಂದೇ. ಅವರ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ಶಾಸ್ತ್ರಗಳ ಹೆಸರಿನಲ್ಲಿ ಕೆಲವು ಪಂಡಿತರು ಹೇಳುವುದು ಸುಳ್ಳು. ಜಾತಿ ಶ್ರೇಷ್ಠತೆಯ ವ್ಯಸನದಿಂದ ತಪ್ಪುದಾರಿಗೆ ನಮ್ಮನ್ನು ಎಳೆಯಲಾಗಿದೆ. ಈ ಭ್ರಮೆಯನ್ನು ತೊಲಗಿಸಬೇಕಿದೆ. ದೇಶದಲ್ಲಿ ಎಲ್ಲರಲ್ಲಿಯೂ ಆತ್ಮಸಾಕ್ಷಿ ಮತ್ತು ಜಾಗೃತಿ ಒಂದೇ ರೀತಿ ಇದೆ. ಆದರೆ ಅಭಿಪ್ರಾಯಗಳು ಮಾತ್ರ ಬೇರೆ ಬೇರೆ ಇರುತ್ತವೆ” ಎಂದು ಭಾಗವತ್ ಹೇಳಿದ್ದರು.

ಭಾಗವತ್ ಅವರು ಬ್ರಾಹ್ಮಣರ ಬಗ್ಗೆ ಮಾತನಾಡಿದ್ದಾರೆ ಎಂದು ಮಾಧ್ಯಮಗಳು ಸುದ್ದಿ ಬಿತ್ತರಿಸಿದ ಮೇಲೆ ಸೋಮವಾರ ಸ್ಪಷ್ಟನೆ ನೀಡಿದ್ದ ಭಾಗವತ್, ‘ಪಂಡಿತ್’ ಎನ್ನುವುದರ ಅರ್ಥ ಬ್ರಾಹ್ಮಣರು ಎಂದಲ್ಲ, ಬದಲಾಗಿ ‘ಬುದ್ಧಿಜೀವಿಗಳು’ ಎಂದು ಆತು ತಿರುಗಿಸುವ ಪ್ರಯತ್ನ ಮಾಡಿದರು. ಈ RSS ಕೂಡ ಭಾಗವತ್‌ ಅವರು ಯಾವುದೇ ನಿರ್ದಿಷ್ಟ ಜಾತಿಯನ್ನು ಉಲ್ಲೇಖಿಸಿಲ್ಲ ಎಂದು ಭಾಗವತ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿತು.

ಆದರೆ, ವಕೀಲ ಸುಧೀರ್ ಓಜಾ ಅವರು ದೂರು ಸಲ್ಲಿಸಿದ್ದು,”ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ವಿರುದ್ಧ ನಾನು ಮುಜಫ್ಫರ್‌ಪುರ ಸಿಜೆಎಂ ನ್ಯಾಯಾಲಯದಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 504, 505 ಮತ್ತು 506ರ ಅಡಿ (ಶಾಂತಿ ಕದಡುವ ಉದ್ದೇಶದ ಅವಮಾನ) ದೂರು ದಾಖಲಿಸಿದ್ದೇನೆ. ಇದಲ್ಲದೆ, 153 ಮತ್ತು 153ಎ ಸೆಕ್ಷನ್‌ಗಳನ್ನು ಕೂಡ ದೂರಿನಲ್ಲಿ ಸೇರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

”ಭಾಗವತ್ ಅವರು, ಫೆ. 5ರಂದು ಈ ಕೆಟ್ಟ ಜಾತಿ ವ್ಯವಸ್ಥೆಯನ್ನು ಬ್ರಾಹ್ಮಣರು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಹೇಳಿಕೆ ನೀಡಿದ್ದರು. ಸಮಾಜದಲ್ಲಿ ವಿಭಜನೆ ಸೃಷ್ಟಿಸಲು ಉದ್ದೇಶಪೂರ್ವಕವಾಗಿ ಅವರು ಈ ಹೇಳಿಕೆ ಕೊಟ್ಟಿದ್ದಾರೆ. ಮತ ಬ್ಯಾಂಕ್ ರಾಜಕಾರಣವನ್ನು ಗಮನದಲ್ಲಿ ಇರಿಸಿಕೊಂಡು ಅವರು ಈ ರೀತಿ ಹೇಳಿದ್ದಾರೆ” ಎಂದು ಸುಧೀರ್ ಓಜಾ ಆರೋಪಿಸಿದ್ದಾರೆ.

”ಭಾಗವತ್ ಅವರ ಅಜಾಗರೂಕ ಹೇಳಿಕೆಯು ಇಡೀ ಬ್ರಾಹ್ಮಣ ಸಮುದಾಯಕ್ಕೆ ಮಾನಹಾನಿ ಉಂಟುಮಾಡಿದೆ. ಮೋಹನ್ ಭಾಗವತ್ ಅವರ ಹೇಳಿಕೆಯು ದೇಶಾದ್ಯಂತ ಸಮುದಾಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ” ಎಂದು ಸುಧೀರ್ ಓಜಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...