Homeಕರ್ನಾಟಕಆರ್. ಅಶೋಕ್ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ : ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

ಆರ್. ಅಶೋಕ್ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ : ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮತ್ತಿತರರ ವಿರುದ್ದದ ಆಪಾದಿತ ಮುಡಾ ನಿವೇಶ ಹಂಚಿಕೆ ಅಕ್ರಮ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ನಡುವೆ, ಪ್ರತಿಪಕ್ಷ ನಾಯಕ ಆರ್‌. ಅಶೋಕ್ ವಿರುದ್ದದ ಅಕ್ರಮ ಡಿನೋಟಿಫಿಕೇಷನ್ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.

ಬುಧವಾರ (ಅ.2) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ “ನಗರದ ಪ್ರತಿಷ್ಠಿತ ಆರ್‌.ಎಂ.ವಿ ಬಡಾವಣೆಯ 2ನೇ ಹಂತದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಬಿಡಿಎ ವಶಪಡಿಸಿಕೊಂಡಿದ್ದ 32 ಗುಂಟೆ ಜಮೀನಿನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿಸಿಕೊಂಡಿದ್ದ ಇಂದಿನ ಪ್ರತಿಪಕ್ಷ ನಾಯಕ ಆರ್‌. ಅಶೋಕ್, ಆ ಜಮೀನನ್ನು ಬಿಡಿಎಗೆ ವಾಪಸ್ ಮಾಡಿದ್ದರು. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಅವರು, ಈ ಪ್ರಕರಣದಲ್ಲಿ ರಾಜೀನಾಮೆ ನೀಡಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ವಿವಾದಕ್ಕೀಡಾಗುತ್ತಿದ್ದಂತೆ 2011ರಲ್ಲಿ ಅಶೋಕ್ ಅವರು ನೋಂದಾಯಿತ ದಾನಪತ್ರದ ಮೂಲಕ ಜಮೀನನ್ನು ಬಿಡಿಎಗೆ ವಾಪಸ್ ಮಾಡಿದ್ದರು. ಈ ಜಾಗದ ವಿಷಯದಲ್ಲಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ ಅತ್ರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅಂದಿನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ಅಶೋಕ್ ಜಮೀನನ್ನು ವಾಪಸ್ ಕೊಟ್ಟಿದ್ದ ಕಾರಣ ತನಿಖೆ ಅಗತ್ಯವಿಲ್ಲ ಎಂದು ಅತ್ರಿಯವರ ಅರ್ಜಿ ವಿಲೇವಾರಿ ಮಾಡಿತ್ತು. ಅಶೋಕ್ ಜೊತೆ ಅಂದಿನ ಸಿಎಂ ಜಗದೀಶ್ ಶೆಟ್ಟರ್ ಮತ್ತು ಯಡಿಯೂರಪ್ಪ ಅವರ ಪಾತ್ರ ಕೂಡ ಭೂಹಗರಣದಲ್ಲಿ ಇತ್ತು ಎಂದು ವಿವರಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆಯಲ್ಲವೇ?

ಅಕ್ರಮವಾಗಿ ಪಡೆದ ಜಮೀನನ್ನು ದಾನವಾಗಿ ವಾಪಸ್ ಕೊಡುವವರೆಗೆ (2003ರಿಂದ 2011) ಅದರಲ್ಲಿ 15 ಶೆಡ್, ಎರಡು ಕಾರ್ ಗ್ಯಾರೇಜ್ ಮತ್ತು ಗೋದಾಮು ನಿರ್ಮಿಸಿ ಕೋಟ್ಯಾಂತರ ರೂಪಾಯಿ ಬಾಡಿಗೆಯನ್ನು ಅಶೋಕ್ ಪಡೆದಿದ್ದಾರೆ. ಇದು ಹಣ ಅಕ್ರಮ ವರ್ಗಾವಣೆ (ತಡೆ) ಕಾಯ್ದೆ(ಪಿಎಂಎಲ್ಎ) ಅಡಿ ಅಪರಾಧ ಅಲ್ಲವೇ? ಎಂದು ಪರಮೇಶ್ವರ್ ಪ್ರಶ್ನಿಸಿದ್ದಾರೆ.

ಸಚಿವರಾದ ಹೆಚ್‌.ಕೆ ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಸತೀಶ್ ಜಾರಕಿಹೊಳಿ ಜೊತೆ ಸುದ್ದಿಗೋಷ್ಠಿ ನಡೆಸಿದ ಪರಮೇಶ್ವರ್, ಆರ್‌. ಅಶೋಕ್ ಲೊಟ್ಟೆಗೊಲ್ಲಹಳ್ಳಿಯ ಜಮೀನನ್ನು ಅಕ್ರಮ ಡಿನೋಟಿಫೈ ಮಾಡಿರುವ ಪ್ರಕರಣದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಲೊಟ್ಟೆಗೊಲ್ಲಹಳ್ಳಿಯ ಸರ್ವೆ ನಂಬರ್ 10/1, 10/11 ಎಫ್1 ಮತ್ತು 10/11 ಎಫ್ 2ರ 32 ಗುಂಟೆ ಜಮೀನು ನೂರಾರು ಕೋಟಿ ರೂ.ಬೆಲೆ ಬಾಳುತ್ತದೆ. ಈ ಜಮೀನಿಗೆ ಸಂಬಂಧಿಸಿದಂತೆ ಬಿಡಿಎ 24/2/1977ರಲ್ಲಿ ಅಧಿಸೂಚನೆ ಹೊರಡಿಸಿತ್ತು. 27/2/1977ರಂದು ಮತ್ತೊಂದು ಅಧಿಸೂಚನೆ ಹಾಗೂ 31/8/1978ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿತ್ತು ಎಂದು ಪರಮೇಶ್ವರ್ ಹೇಳಿದ್ದಾರೆ.

ಇದಾದ ನಂತರ 26/2/2003 ಹಾಗೂ 12/11/2007ರಂದು ಎರಡು ಶುದ್ಧ ಕ್ರಯ ಪತ್ರದ ಮೂಲಕ ಈ ಬಿಡಿಎ ಮಾಲಕತ್ವದ ಅಧಿಸೂಚಿತ ಜಾಗವನ್ನು ಮೂಲ ಮಾಲಕರಿಂದ ಅಶೋಕ್ ಖರೀದಿ ಮಾಡಿದ್ದಾರೆ. 16/10/2009ರಂದು ರಾಮಸ್ವಾಮಿ ಎಂಬವರು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಈ ಜಮೀನನ್ನು ಡಿನೋಟಿಫೈ ಮಾಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಆ ಪತ್ರದ ಮೇಲೆ ‘ಕೂಡಲೆ ಕಡತದಲ್ಲಿ ಮಂಡಿಸಿ’ ಎಂದು ಷರಾ ನಮೂದಿಸಿ ಯಡಿಯೂರಪ್ಪ ಆದೇಶ ನೀಡಿದ್ದಾರೆ ಎಂದು ಪರಮೇಶ್ವರ್ ವಿವರಿಸಿದ್ದಾರೆ.

ಅಲ್ಲದೇ, ಎರಡೇ ತಿಂಗಳಲ್ಲಿ ಆ ಜಮೀನನ್ನು ಡಿನೋಟಿಫೈ ಮಾಡಲಾಗುತ್ತದೆ. ಆನಂತರ, ನಿವೃತ್ತ ವಿಂಗ್ ಕಮಾಂಡರ್ ಜಿ.ವಿ.ಅತ್ರಿ ಎಂಬವರು ಲೋಕಾಯುಕ್ತದಲ್ಲಿ ಪ್ರಕರಣ ದಾಖಲು ಮಾಡುತ್ತಾರೆ. ವಿಷಯ ಗಂಭೀರವಾಗುತ್ತಿದ್ದಂತೆ ಅಶೋಕ್ ಬಿಡಿಎ ಮಾಲಕತ್ವದಲ್ಲಿರುವ ಆ ಜಾಗವನ್ನು 27/8/2011ರಂದು ರಿಜಿಸ್ಟರ್ ಗಿಫ್ಟ್ ಡೀಡ್ ಮೂಲಕ ಸರ್ಕಾರಕ್ಕೆ ವಾಪಸ್ ಕೊಟ್ಟರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರ: ಅಜಿತ್ ಬಣ ‘ಗಡಿಯಾರ’ ಚಿಹ್ನೆ ಬಳಸದಂತೆ ತಡೆಯಲು ಪ್ರಯತ್ನ ಮುಂದುವರಿಸಿದ ಶರದ್ ಪವಾರ್; ಸುಪ್ರೀಂ ಕೋರ್ಟಿಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...