Homeಕರ್ನಾಟಕಯಡಿಯೂರಪ್ಪ, ಕುಮಾರಸ್ವಾಮಿಯಿಂದ ಅಕ್ರಮ ಡಿನೋಟಿಫಿಕೇಷನ್ ಆರೋಪ : ದಾಖಲೆ ಬಿಡುಗಡೆಗೊಳಿಸಿದ ಸಚಿವರು

ಯಡಿಯೂರಪ್ಪ, ಕುಮಾರಸ್ವಾಮಿಯಿಂದ ಅಕ್ರಮ ಡಿನೋಟಿಫಿಕೇಷನ್ ಆರೋಪ : ದಾಖಲೆ ಬಿಡುಗಡೆಗೊಳಿಸಿದ ಸಚಿವರು

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್.​​ಡಿ ಕುಮಾರಸ್ವಾಮಿ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ಇಂದು (ಸೆ.19) ದಾಖಲೆ ಬಿಡುಗಡೆ ಮಾಡಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಸಚಿವರಾದ ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್ ಮತ್ತು ಸಂತೋಷ್ ಲಾಡ್ ಅವರು ಬಿಎಸ್​ವೈ ಹಾಗೂ ಹೆಚ್​ಡಿಕೆ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್​ಗೆ ಸಂಬಂಧಿಸಿದಂತೆ ಕೆಲ ದಾಖಲೆಗಳನ್ನು ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, “ರಾಜ್ಯಪಾಲರು ಕೆಲ ಪ್ರಕರಣಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ತಪ್ಪು ಮಾಡಿದವರಿಗೆ ರಾಜ್ಯಪಾಲರು ರಕ್ಷಣೆ ನೀಡುತ್ತಿದ್ದಾರೆ. ಮಠದ ಹಳ್ಳಿ, ಗಂಗೇನಹಳ್ಳಿ ಬಡಾವಣೆ 7/1 ಬಿ, ಸಿ ಹಾಗೂ ಡಿ ಸರ್ವೆ ನಂಬರ್‌ನಲ್ಲಿ 1.11 ಎಕರೆ ಜಮೀನು ಬಿಡಿಎಗೆ ಭೂಸ್ವಾಧಿನಗೊಂಡಿರುತ್ತದೆ. ಇದನ್ನು ಡಿನೋಟಿಫೈ ಮಾಡಬೇಕು ಅಂತ ಯಾರೋ ರಾಜಶೇಖರಯ್ಯ ಅನ್ನೋರು ಅರ್ಜಿ ಕೊಡ್ತಾರೆ. ದಾರಿಯಲ್ಲಿ ಹೋಗುವ ಯಾರೋ ದಾಸಯ್ಯ ಜಮೀನಿಗೆ ಸಂಬಂಧವೇ ಇಲ್ಲದ ರಾಜಶೇಖರಯ್ಯ ಅನ್ನುವವರು ಅರ್ಜಿ ಕೊಡ್ತಾರೆ. 22.08.2007 ರಲ್ಲಿ ಅರ್ಜಿ ಬಂದ ಅದೇ ದಿನ ಸಿಎಂ ಆಗಿದ್ದ ಹೆಚ್‌ಡಿಕೆ ಡಿನೋಟಿಫೈ ಮಾಡಲು ಸೂಚಿಸುತ್ತಾರೆ” ಎಂದು ಗಂಭೀರ ಆರೋಪ ಮಾಡಿದರು.

ಜಮೀನಿನ ಅಸಲಿ ಮಾಲೀಕರು 21 ಜನರಿದ್ದಾರೆ. 30 ವರ್ಷಗಳ ಹಿಂದೆಯೇ ಈ ಜಮೀನೂ ಭೂಸ್ವಾಧೀನ ಆಗಿತ್ತು. ಯಾವುದು ಭೂ ಸ್ವಾಧೀನ ಆಗಿತ್ತೋ, ಆ ಜಮೀನಿಗೆ ಕುಮಾರಸ್ವಾಮಿ ಅತ್ತೆ ಅನಿತಾ ಕುಮಾರಸ್ವಾಮಿ ತಾಯಿ ಜಿಪಿಎ ಮಾಡಿಕೊಳ್ಳುತ್ತಾರೆ. ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಡಿನೋಟಿಫೈ ಮಾಡಲು ಬರುವುದಿಲ್ಲ ಎಂದು ಫೈಲ್ ತಿರಸ್ಕಾರ ಮಾಡುತ್ತಾರೆ. ಆದರೂ, ಅಂದಿನ ಸಿಎಂ ಕುಮಾರಸ್ವಾಮಿ ಡಿನೋಟಿಫೈ ಮಾಡುವಂತೆ ಸೂಚಿಸುತ್ತಾರೆ. ಬಳಿಕ ಸರ್ಕಾರ ಬದಲಾಗಿ ಯಡಿಯೂರಪ್ಪ ಸಿಎಂ ಆಗುತ್ತಾರೆ. ಆಗ ಮತ್ತೆ ಅದೇ ಫೈಲ್ ಸಿಎಂ ಯಡಿಯೂರಪ್ಪ ಕೈಗೆ ಬರುತ್ತದೆ. ಕಾನೂನು ಗಾಳಿಗೆ ತೂರಿ ಯಡಿಯೂರಪ್ಪ 2010 ಜೂನ್ 5ರಂದು ರಂದು ಭೂಸ್ವಾಧೀನದಿಂದ ಕೈ ಬಿಡುತ್ತಾರೆ ಎಂದು ಹೇಳಿದರು.

ಡಿ ನೋಟಿಫಿಕೇಷನ್ ಆದ ಒಂದೇ ತಿಂಗಳಿಗೆ ಕುಮಾರಸ್ವಾಮಿ ಬಾಮೈದ ಚನ್ನಪ್ಪ ಎಂಬುವವರಿಗೆ ಶುದ್ದ ಕ್ರಯಪತ್ರ ಆಗುತ್ತದೆ . ಹೀಗೆ ಅಕ್ರಮವಾಗಿ ಡಿನೋಟಿಫೈ ಆದ ಜಮೀನು ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದೆ. ಇದು ವ್ಯವಸ್ಥಿತ ವಂಚನೆ ಹೌದೋ ಅಲ್ವೋ? ಇದು ನೇರವಾಗಿ ಕುಮಾರಸ್ವಾಮಿ ಆದೇಶದಿಂದಲೇ ಆಗಿದೆ. ಕುಮಾರಸ್ವಾಮಿ ಪುಟಫ್ ಮಾಡಿದ ಫೈಲ್‌ಗೆ ಯಡಿಯೂರಪ್ಪ ಸಹಿ ಮಾಡಿದ್ದಾರೆ. ಸಾರ್ವಜನಿಕ ಸ್ವತ್ತನ್ನು ತಂತ್ರಗಾರಿಕೆ ಮಾಡಿ ಲೂಟಿ ಮಾಡಿದ್ದೀರ ಕುಮಾರಸ್ವಾಮಿಯವರೇ ಎಂದು ಆರೋಪಿಸಿದರು.

ಲೋಕಾಯುಕ್ತದವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ವಿರುದ್ದ ಎಫ್​ಐಆರ್ ದಾಖಲಾಗಿ ಒಂಭತ್ತು ವರ್ಷಗಳಾಗಿದೆ. ಹೈಕೋರ್ಟ್ ತನಿಖೆಗೆ ಸೂಚನೆ ನೀಡಿದ್ದರೂ ಲೋಕಾಯುಕ್ತ ಯಾಕೆ ಸುಮ್ಮನೇ ಇದೆ? ಎಂದು ಪ್ರಶ್ನಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ “ಯಾವ ಜಮೀನನ್ನು ಡಿ-ನೋಟಿಫಿಕೇಷನ್ ಮಾಡಲು ಸಾಧ್ಯವೇ ಇಲ್ಲವೋ ಅದನ್ನು ಕುಮಾರಸ್ವಾಮಿ ಹಾಗೂ ಯಡಿಯೂರಪ್ಪ ಅವರು ಇಬ್ಬರೂ ಸೇರಿಕೊಂಡು ಡಿ-ನೋಟಿಫೈ ಮಾಡಿದ್ದಾರೆ. ಈ ಲೂಟಿಯಲ್ಲಿ ಯಾರ್ಯಾರು ಎಷ್ಟೆಷ್ಟು ಪಾಲು ಪಡೆದಿದ್ದಾರೆ? ಇದರ ಬಗ್ಗೆ ಇಬ್ಬರೂ ಉತ್ತರ ನೀಡಬೇಕು” ಎಂದರು.

ಸಚಿವ ಸಂತೋಷ್ ಲಾಡ್ ಮಾತನಾಡಿ “ದಾಖಲೆ ಸಮೇತ ನಾವು ಮಾಡಿದ ಆರೋಪಗಳಿಗೆ ಹೆಚ್.ಡಿ ಕುಮಾರಸ್ವಾಮಿ, ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿಯವರು ಉತ್ತರ ನೀಡಬೇಕು. ಡಿನೋಟಿಫಿಕೇಷನ್ ಅಕ್ರಮದ ಮುಖ್ಯ ರೂವಾರಿ ಕುಮಾರಸ್ವಾಮಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಯಡಿಯೂರಪ್ಪನವರು ಉತ್ತರ ಕೊಡಬೇಕು. ಮುಖ್ಯವಾಗಿ ಬಿಜೆಪಿಯವರು ನಾವು ಬಿಡುಗಡೆ ಮಾಡುವ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಹೋಗಿ ರಾಜ್ಯಪಾಲರಿಗೆ ನೀಡಿ ಮತ್ತೊಮ್ಮೆ ತನಿಖೆಗೆ ಆದೇಶಿಸಿ ಎಂದು ಅವರಲ್ಲಿ ಮನವಿ ಮಾಡಬೇಕು. ರಾಷ್ಟ್ರಪತಿಗಳು ಮಧ್ಯ ಪ್ರವೇಶ ಮಾಡಿ ತನಿಖೆ ನಡೆಸಿ ಎಂದು ರಾಜ್ಯಪಾಲರಿಗೆ ಪತ್ರ ಬರೆಯಬೇಕು” ಎಂದು ಹೇಳಿದರು.

ಇದನ್ನೂ ಓದಿ : ಪ್ರಚೋದನಕಾರಿ ಹೇಳಿಕೆ | ಶೋಭಾ ಕರಂದ್ಲಾಜೆ & ಆರ್. ಅಶೋಕ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...