ತುಮಕೂರು ಗ್ರಾಮಾಂತರ ತಾಲೂಕಿನ ಹಿರೇಹಳ್ಳಿ ಸಮೀಪದ ಚೋಟಸಾಬರ ಬೆಟ್ಟದಲ್ಲಿ ದನ ಮೇಯಿಸಲು ಹೋಗಿದ್ದ 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ಮಂಗಳವಾರ ನಡೆದಿದೆ.
35 ವರ್ಷದ ಜಯಲಕ್ಷ್ಮಿ ಎಂಬುವವರು ದನ ಮೇಯಿಸಲು ಬೆಟ್ಟದ ಸಮೀಪಕ್ಕೆ ಹೋಗಿದ್ದಾರೆ. ಸಂಜೆಯಾದರತೂ ಮರಳಿ ಬರದ ಪತ್ನಿಯನ್ನು ಹುಡುಕಿ ಹೋರಟ ಪತಿ ಶಿವಕುಮಾರ್‌ಗೆ ಜಯಲಕ್ಷ್ಮಿಯವರ ಬೆತ್ತಲೆ ಮೃತದೇಹ ಪತ್ತೆಯಾಗಿತ್ತು.
ಮಹಿಳೆಯ ಮೃತದೇಹದ ಮೇಲೆ ಕಚ್ಚಿದ ಗಾಯದ ಕಲೆಗಳು ಕಂಡು ಬಂದಿದ್ದು ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಜೊತೆಗೆ ಮಹಿಳೆಯ ಕತ್ತಿನಲ್ಲಿದ್ದ ಮಾಂಗ್ಯಲ್ಯ ಸರವನ್ನು ದುಷ್ಕರ್ಮಿಗಳು ಕಿತ್ತೊಯ್ದಿದ್ದಾರೆ. ಅಪರಿಚಿತ ಯುವಕರ ಗುಂಪು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ
ಅಮಾನವೀಯ ಘಟನೆ ಕುರಿತು ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ಬೆಳಗ್ಗೆ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮಹಿಳೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ 15 ಮಂದಿ ಸದಸ್ಯರ ತಂಡ ರಚಿಸಲಾಗಿದೆ. ಕೇಂದ್ರ ವಲಯ ಐಜಿಪಿ ಎಂ.ಚಂದ್ರಶೇಖರ್ ಗುರುವಾರ ತುಮಕೂರಿಗೆ ಭೇಟಿ ನೀಡಿದ್ದರು. ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಎಂದು ಮೂಲಗಳು ತಿಳಿಸಿವೆ.
ಇತ್ತ, ದುರಂತ ನಡೆದಿರುವ ಚೋಟಾಸಾಬರ ಪಾಳ್ಯಕ್ಕೆ ಹೊಂದಿಕೊಂಡಿರುವ ಈ ನಿರ್ಜನ ಬೆಟ್ಟದ ಮೇಲೆ ಅಪರಿಚಿತ ಯುವಕರ ಗುಂಪು ಮದ್ಯಪಾನ, ಗಾಂಜಾ ಸೇವನೆಯಂತಹ ಅನೈತಿಕ ಚಟುವಟಿಕೆ ನಡೆಸುತ್ತಾರೆ ಎನ್ನಲಾಗಿದೆ. ಕ್ಯಾತಂದ್ರ ಠಾಣಾ ವ್ಯಾಪ್ತಿಯಲ್ಲಿ ಈ ರೀತಿಯ ಅನುಮಾನಾಸ್ಪದ ಕೊಲೆಗಳು, ಅತ್ಯಾಚಾರದಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಆದ್ರೆ ಪೊಲೀಸರು ಮಾತ್ರ ಏನೂ ಆಗೇ ಇಲ್ಲ ಎಂಬಂತೆ ಇದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ: ಗ್ಯಾಂಗ್ ರೇಪ್: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ


