Homeಕರ್ನಾಟಕತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ- ತನಿಖೆಗೆ ತಂಡ ರಚನೆ

ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ- ತನಿಖೆಗೆ ತಂಡ ರಚನೆ

- Advertisement -
- Advertisement -

ತುಮಕೂರು ಗ್ರಾಮಾಂತರ ತಾಲೂಕಿನ ಹಿರೇಹಳ್ಳಿ ಸಮೀಪದ ಚೋಟಸಾಬರ ಬೆಟ್ಟದಲ್ಲಿ ದನ ಮೇಯಿಸಲು ಹೋಗಿದ್ದ 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ಮಂಗಳವಾರ ನಡೆದಿದೆ.

35 ವರ್ಷದ ಜಯಲಕ್ಷ್ಮಿ ಎಂಬುವವರು ದನ ಮೇಯಿಸಲು ಬೆಟ್ಟದ ಸಮೀಪಕ್ಕೆ ಹೋಗಿದ್ದಾರೆ. ಸಂಜೆಯಾದರತೂ ಮರಳಿ ಬರದ ಪತ್ನಿಯನ್ನು ಹುಡುಕಿ ಹೋರಟ ಪತಿ ಶಿವಕುಮಾರ್‌ಗೆ ಜಯಲಕ್ಷ್ಮಿಯವರ ಬೆತ್ತಲೆ ಮೃತದೇಹ ಪತ್ತೆಯಾಗಿತ್ತು.

ಮಹಿಳೆಯ ಮೃತದೇಹದ ಮೇಲೆ ಕಚ್ಚಿದ ಗಾಯದ ಕಲೆಗಳು ಕಂಡು ಬಂದಿದ್ದು ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಜೊತೆಗೆ ಮಹಿಳೆಯ ಕತ್ತಿನಲ್ಲಿದ್ದ ಮಾಂಗ್ಯಲ್ಯ ಸರವನ್ನು ದುಷ್ಕರ್ಮಿಗಳು ಕಿತ್ತೊಯ್ದಿದ್ದಾರೆ. ಅಪರಿಚಿತ ಯುವಕರ ಗುಂಪು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಪ್ರಕರಣ: ಯುವತಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ

ಅಮಾನವೀಯ ಘಟನೆ ಕುರಿತು ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ಬೆಳಗ್ಗೆ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮಹಿಳೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ 15 ಮಂದಿ ಸದಸ್ಯರ ತಂಡ ರಚಿಸಲಾಗಿದೆ. ಕೇಂದ್ರ ವಲಯ ಐಜಿಪಿ ಎಂ.ಚಂದ್ರಶೇಖರ್ ಗುರುವಾರ ತುಮಕೂರಿಗೆ ಭೇಟಿ ನೀಡಿದ್ದರು. ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೆಲವು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಎಂದು ಮೂಲಗಳು ತಿಳಿಸಿವೆ.

ಇತ್ತ, ದುರಂತ ನಡೆದಿರುವ ಚೋಟಾಸಾಬರ ಪಾಳ್ಯಕ್ಕೆ ಹೊಂದಿಕೊಂಡಿರುವ ಈ ನಿರ್ಜನ ಬೆಟ್ಟದ ಮೇಲೆ ಅಪರಿಚಿತ ಯುವಕರ ಗುಂಪು ಮದ್ಯಪಾನ, ಗಾಂಜಾ ಸೇವನೆಯಂತಹ ಅನೈತಿಕ ಚಟುವಟಿಕೆ ನಡೆಸುತ್ತಾರೆ ಎನ್ನಲಾಗಿದೆ. ಕ್ಯಾತಂದ್ರ ಠಾಣಾ ವ್ಯಾಪ್ತಿಯಲ್ಲಿ ಈ ರೀತಿಯ ಅನುಮಾನಾಸ್ಪದ ಕೊಲೆಗಳು, ಅತ್ಯಾಚಾರದಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಆದ್ರೆ ಪೊಲೀಸರು ಮಾತ್ರ ಏನೂ ಆಗೇ ಇಲ್ಲ ಎಂಬಂತೆ ಇದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...