Homeಮುಖಪುಟ'ವಿಪತ್ತು ಪರಿಹಾರ ಹಣ ಸೋನಿಯಾ ಗಾಂಧಿಗೆ ವರ್ಗಾವಣೆ ಆರೋಪ..'; ಕಂಗನಾ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

‘ವಿಪತ್ತು ಪರಿಹಾರ ಹಣ ಸೋನಿಯಾ ಗಾಂಧಿಗೆ ವರ್ಗಾವಣೆ ಆರೋಪ..’; ಕಂಗನಾ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಹಿಮಾಚಲ ಪ್ರದೇಶ ಸರ್ಕಾರವು ವಿಪತ್ತು ಪರಿಹಾರ ಹಣವನ್ನು ಅಕ್ರಮವಾಗಿ ಸೋನಿಯಾ ಗಾಂಧಿ ಅವರಿಗೆ ವರ್ಗಾಯಿಸಿದೆ ಎಂಬ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರ ಆರೋಪಗಳಿಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಇಲಾಖೆ ಸಚಿವ ವಿಕ್ರಮಾದಿತ್ಯ ಸಿಂಗ್, ‘ಕಂಗನಾ ರಣಾವತ್ ಅವರು ಆರೋಪವನ್ನು ಹಿಂತೆಗೆದುಕೊಳ್ಳದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.

“ಕಂಗನಾ ತನ್ನ ಹೇಳಿಕೆಯನ್ನು ಹಿಂತೆಗೆದುಕೊಳ್ಳದಿದ್ದರೆ… ನಾವು ಮಾನನಷ್ಟ ಮೊಕದ್ದಮೆ ಹೂಡುತ್ತೇವೆ. ಅವರು ಯಾವ ಆಧಾರದ ಮೇಲೆ ಅಂತಹ ಹೇಳಿಕೆ ನೀಡಿದ್ದಾರೆ? ಅವರು ಸೋನಿಯಾ ಗಾಂಧಿಯವರ ವಿರುದ್ಧ ಹೇಳಿಕೆ ನೀಡಿರುವುದು ಅತ್ಯಂತ ದುರದೃಷ್ಟಕರ” ಎಂದು ಸಿಂಗ್ ಹೇಳಿದ್ದಾರೆ.

“ಕೇಂದ್ರದಿಂದ ಬರುವ ಹಣ ಅಥವಾ ರಾಜ್ಯದ ಅಭಿವೃದ್ಧಿಯ ಹಣವನ್ನು ಸೋನಿಯಾ ಗಾಂಧಿಗೆ ನೀಡಲಾಗುತ್ತಿದೆ ಎಂದು ಹೇಳುವುದಕ್ಕಿಂತ ಹೆಚ್ಚು ಮೂರ್ಖತನದ ಹೇಳಿಕೆ ಇರಲಾರದು’ ಎಂದು ಅವರು ಹೇಳಿದರು. “ನಾನು ಕಂಗನಾಗೆ ಒಂದಾಧರೂ ಪುರಾವೆ ತೋರಿಸಲು ಬಹಿರಂಗವಾಗಿ ಸವಾಲು ಹಾಕುತ್ತೇನೆ. ಅವರ ಹೇಳಿಕೆ ದಿಕ್ಕು ತಪ್ಪಿಸುವುದಾಗಿದೆ. ಇಂತಹ ಆಧಾರ ರಹಿತ ಆರೋಪಗಳಿಗಾಗಿ ಸೋನಿಯಾ ಗಾಂಧಿಯವರಲ್ಲಿ ಕ್ಷಮೆಯಾಚಿಸಿ” ಎಂದು ಅವರು ಒತ್ತಾಯಿಸಿದ್ದಾರೆ.

“ಸೂಕ್ಷ್ಮ ವಿಷಯಗಳ ಬಗ್ಗೆ ಹೇಳಿಕೆ ನೀಡದಂತೆ ಬಿಜೆಪಿ ಈಗಾಗಲೇ ಅವರಿಗೆ ಎಚ್ಚರಿಕೆ ನೀಡಿದೆ. ಆದರೆ, ಅವರು ತಮ್ಮ ಪಕ್ಷದ ಹೈಕಮಾಂಡ್‌ ಸಲಹೆಗೆ ಕಿವಿಗೊಟ್ಟಿಲ್ಲ” ಎಂದು ಅವರು ಹೇಳಿದರು.

“ಹಿಮಾಚಲ ಪ್ರದೇಶ ಸರ್ಕಾರವು ಸಾಲ ಪಡೆದು ಅದನ್ನು ಸೋನಿಯಾ ಗಾಂಧಿಯವರಿಗೆ ನೀಡುತ್ತದೆ, ಇದು ರಾಜ್ಯದ ಆರ್ಥಿಕತೆಯನ್ನು ಟೊಳ್ಳು ಮಾಡಿದೆ” ಎಂಬ ಕಂಗನಾ ಅವರ ನಿರ್ದಿಷ್ಟ ಆರೋಪದ ಮೇಲೆ ಸಿಂಗ್ ಆಕ್ರೋಶ ಹೊರಹಾಕಿದರು.

“ಇದು ಮಾನಹಾನಿಕರ ಹೇಳಿಕೆಯಾಗಿದೆ, ನಾವು ಖಂಡಿಸುತ್ತೇವೆ. ಆಕೆ ಒಂದು ವಾರದಲ್ಲಿ ಸಾಕ್ಷ್ಯವನ್ನು ಒದಗಿಸಬೇಕು. ಹಾಗೆ ಮಾಡದಿದ್ದರೆ ಮತ್ತು ಕ್ಷಮೆಯಾಚಿಸದಿದ್ದರೆ, ನಾವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸುತ್ತೇವೆ” ಎಂದು ಸಿಂಗ್ ಹೇಳಿದರು.

ಭಾನುವಾರ, ತನ್ನ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಾರಂಭಿಸಿದ ರಣಾವತ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ವಿರುದ್ಧ ವಾಗ್ದಾಳಿ ನಡೆಸಿದರು.

“ವಿಪತ್ತುಗಳು ಮತ್ತು ಕಾಂಗ್ರೆಸ್ ರಾಜ್ಯವನ್ನು ದಶಕಗಳ ಹಿಂದೆ ಕೊಂಡೊಯ್ದಿವೆ.. ಈ ಸರ್ಕಾರವನ್ನು ಬೇರುಸಹಿತ ಕಿತ್ತೊಗೆಯುವಂತೆ ನಾನು ಜನರಲ್ಲಿ ಮನವಿ ಮಾಡುತ್ತೇನೆ. ನಾವು (ಕೇಂದ್ರ ಸರ್ಕಾರ) ವಿಪತ್ತು ಹಣವನ್ನು ನೀಡಿದರೆ ಅದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹೋಗಬೇಕು. ಆದರೆ, ಅದು ‘ಸೋನಿಯಾ ಪರಿಹಾರ ನಿಧಿ’ಗೆ ಹೋಗುತ್ತದೆ ಎಂಬುದು ಎಲ್ಲರಿಗೂ ತಿಳಿದಿದೆ” ಎಂದು ಹೇಳಿದ್ದರು.

ಸಚಿವ ವಿಕ್ರಮಾದಿತ್ಯ ಸಿಂಗ್ ಅವರ ವಿರುದ್ಧವೂ ವ್ಯಂಗ್ಯವಾಡಿದ ಕಂಗನಾ, “ರಸ್ತೆಗಳಲ್ಲಿನ ಗುಂಡಿಗಳಿಂದ ಜನರು ಬೇಸತ್ತಿದ್ದಾರೆ. ನಾನು ನನ್ನ ಪ್ರದೇಶಕ್ಕೆ ಸಾಧ್ಯವಾದಷ್ಟು ಹೆಚ್ಚಿನದನ್ನು ಮಾಡುತ್ತೇನೆ. ಆದರೆ, ಪಿಡಬ್ಲ್ಯೂಡಿ ಸಚಿವರು ಕೂಡ ಏನಾದರೂ ಮಾಡಬೇಕು” ಎಂದು ಅವರು ಹೇಳಿದರು.

ಹಿಮಾಚಲ ಪ್ರದೇಶವು ವಿನಾಶಕಾರಿ ಭೂಕುಸಿತ, ಹಠಾತ್ ಪ್ರವಾಹಗಳು ಮತ್ತು ಕಳೆದ ವರ್ಷ ಆಗಸ್ಟ್‌ನಲ್ಲಿ ಭಾರೀ ಮಳೆಯಿಂದ ಉರಿಯುತ್ತಿರುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಸಮಸ್ಯೆಯನ್ನು ಎದುರಿಸಲು ಮುಖ್ಯಮಂತ್ರಿ ಕಳೆದ ತಿಂಗಳು ತಮ್ಮ ಸಂಪುಟದ ಸಹೋದ್ಯೋಗಿಗಳು ಮತ್ತು ಎರಡು ತಿಂಗಳ ಸಂಬಳವನ್ನು ಸ್ವೀಕರಿಸುವುದನ್ನು ಮುಂದೂಡುವುದಾಗಿ ಹೇಳಿದ್ದರು.

“ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರ, ಎಲ್ಲ ಸದಸ್ಯರು ರಾಜ್ಯವು ಸುಧಾರಣೆ ಕಾಣುವವರೆಗೆ. ನಾವು ಎರಡು ತಿಂಗಳವರೆಗೆ ಸಂಬಳ, ಟಿಎ ಅಥವಾ ಡಿಎ (ಸಾರಿಗೆ ಅಥವಾ ತುಟ್ಟಿಭತ್ಯೆ) ತೆಗೆದುಕೊಳ್ಳುವುದಿಲ್ಲ ಎಂದು ನಿರ್ಧರಿಸಿದ್ದೇವೆ. ಇದು ಕೇವಲ ಸಣ್ಣ ಮೊತ್ತ. ಆದರೆ, ಇದು ಸಾಂಕೇತಿಕವಾಗಿ, ನಾನು ಎಲ್ಲ ಶಾಸಕರಿಗೂ ವಿನಂತಿಸಿದೆ” ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ; ‘ಜಮ್ಮು-ಕಾಶ್ಮೀರ ‘ರಾಜ್ಯತ್ವ’ ಮರುಸ್ಥಾಪನೆಗೆ ಒತ್ತಡ ಹೇರುತ್ತೇನೆ..’; ಪೂಂಚ್‌ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...

KPSC: ರಾಜ್ಯದ ಪ್ರಭಾವಿಗಳ ಸಲಹೆಯಂತೆ ಪರಾರಿಯಾಗಿದ್ದ ಜ್ಞಾನೇಂದ್ರ ಕುಮಾರ್ !

ಕೆಪಿಎಸ್‌ಸಿ (KPSC) ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಪರಾರಿಯಾದ ರೋಚಕ ಹಾದಿ ಸಿಐಡಿ (CID) ವಿಚಾರಣೆಯಿಂದ ಬಯಲಾಗಿದೆ. ರಾಜ್ಯದ ಪ್ರಭಾವಿ ವ್ಯಕ್ತಿಗಳು ಹಾಗೂ ರಾಜಕಾರಣಿಗಳ ಸತತ...

ಪಂಜಾಬ್ SIR : ಕರಡು ಪಟ್ಟಿಯಿಂದ ರಾಘವ್ ಚಡ್ಡಾ ಹೆಸರು ನಾಪತ್ತೆ; ಎಎಪಿಯ ‘ಸೇಡಿನ ರಾಜಕಾರಣ’ಎಂದ ಸಂಸದ

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಸಿದ್ಧಪಡಿಸಲಾದ ರಾಜ್ಯದ ಕರಡು ಮತದಾರರ ಪಟ್ಟಿಯಿಂದ ತಮ್ಮ ಹೆಸರು ನಾಪತ್ತೆಯಾದ ನಂತರ, ಪಂಜಾಬ್‌ನ ಆಮ್ ಆದ್ಮಿ ಪಕ್ಷದ(ಎಎಪಿ) ಸರ್ಕಾರದ ವಿರುದ್ಧ ಇತ್ತೀಚೆಗೆ ಬಿಜೆಪಿ ಸೇರಿದ ರಾಜ್ಯಸಭಾ...

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...