Homeಮುಖಪುಟಚುನಾವಣೆ ನಿಯಮ ಉಲ್ಲಂಘನೆ ಆರೋಪ; ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

ಚುನಾವಣೆ ನಿಯಮ ಉಲ್ಲಂಘನೆ ಆರೋಪ; ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಚುನಾವಣಾ ಪ್ರಚಾರದ ಸಮಯ ಉಲ್ಲಂಘನೆ ಆರೋಪದ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ, ಕೊಯಮತ್ತೂರು ಅಭ್ಯರ್ಥಿ ಕೆ. ಅಣ್ಣಾಮಲೈ ಮತ್ತು ಅವರ ಪಕ್ಷದ ಕೆಲವು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ಇಲ್ಲಿ ತಿಳಿಸಿದ್ದಾರೆ.

ಗುರುವಾರ ರಾತ್ರಿ ಚುನಾವಣಾ ಆಯೋಗದ ನಿಗದಿತ ಸಮಯವನ್ನು ಮೀರಿ ಬಿಜೆಪಿ ಸದಸ್ಯರು ಪ್ರಚಾರ ಮಾಡಿದ್ದಕ್ಕೆ ಡಿಎಂಕೆ ಕಾರ್ಯಕರ್ತರು ಮತ್ತು ಅವರ ಮಿತ್ರಪಕ್ಷಗಳಾದ ಎಡಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದವು. ಇದು ಅವರಂಪಾಳ್ಯಂ ಪ್ರದೇಶದಲ್ಲಿ ಎರಡು ಪಕ್ಷಗಳ ನಡುವೆ ವಾಗ್ವಾದಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಡಿಎಂಕೆ ಸದಸ್ಯರೊಬ್ಬರು ನೀಡಿದ ದೂರಿನ ಮೇರೆಗೆ ಪೀಲಮೇಡು ಪೊಲೀಸರು ನಾಲ್ವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ. ಚುನಾವಣಾ ಆಯೋಗವು ನಿಗದಿಪಡಿಸಿದ ಗಡುವನ್ನು ಮೀರಿ ಪ್ರಚಾರ ನಡೆಸಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಡಿಎಂಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಇದಮ್ನೂ ಓದಿ; ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ; ಇಡಿ-ಸಿಬಿಐ ಪ್ರತಿಕ್ರಿಯೆ ಕೇಳಿದ ಕುರಿತು ದೆಹಲಿ ನ್ಯಾಯಾಲಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read