Homeಕರ್ನಾಟಕಸಂಘ ಪರಿವಾರದ ವಿರುದ್ಧ ಪೋಸ್ಟ್ ಆರೋಪ: ನಟ ಚೇತನ್ ಬಂಧನ

ಸಂಘ ಪರಿವಾರದ ವಿರುದ್ಧ ಪೋಸ್ಟ್ ಆರೋಪ: ನಟ ಚೇತನ್ ಬಂಧನ

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಸಂಘಪರಿವಾರದ ವಿರುದ್ಧ ಪೋಸ್ಟ್ ಹಾಕಿದ್ದರೆಂಬ ಆರೋಪದ ಮೇಲೆ ಕನ್ನಡದ ನಟ ಚೇತನ್ ಅಹಿಂಸಾರವರನ್ನು ಶೇಷಾದ್ರಿಪುರಂ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.

ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಶಿವಕುಮಾರ್ ಎಂಬುವವರು ದೂರು ನೀಡಿದ್ದರು. ಆ ದೂರಿನ ಮೇರೆಗೆ ಸೋಮವಾರ ರಾತ್ರಿ ಶೇಷಾದ್ರಿಪುರಂ ಪೊಲೀಸರು ಚೇತನ್ ವಿರುದ್ಧ ಐಪಿಸಿ ಸೆಕ್ಷನ್ 295A, 505B ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ

ಸಾವರ್ಕರ್ ಹೇಳಿಕೆ : ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ‘ರಾಷ್ಟ್ರ’ ಪ್ರಾರಂಭವಾಯಿತು -> ಇದು ಒಂದು ಸುಳ್ಳು

1992 ರಲ್ಲಿ : ಬಾಬರಿ ಮಸೀದಿ ‘ರಾಮನ ಜನ್ಮಭೂಮಿ’ –> ಇದು ಒಂದು ಸುಳ್ಳು

ಈಗ 2023 ರಲ್ಲಿ : ಉರಿಗೌಡ ಮತ್ತು ನಂಜೇಗೌಡರು ಟಿಪ್ಪುವನ್ನು ಕೊಂದರು’ -> ಇದು ಕೂಡ ಒಂದು ಸುಳ್ಳು

ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು `ಸತ್ಯವೇ ಸಮಾನತೆ ಎಂದು ಚೇತನ್ ಪೋಸ್ಟರ್ ಒಂದನ್ನು ಹಂಚಿಕೊಂಡಿದ್ದರು. ಅಷ್ಟಕ್ಕೆ ಎಫ್‌ಐಆರ್ ದಾಖಲಿಸಿ ಬಂಧಿಸಲಾಗಿದೆ ಎನ್ನಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

2022ರ ಫೆಬ್ರವರಿಯಲ್ಲಿಯೂ ಸಹ ಹೈಕೋರ್ಟ್ ನ್ಯಾಯಾಧೀಶರ ತೀರ್ಪಿನ ಕುರಿತು ವರ್ಷಗಳ ಹಿಂದೆ ಚೇತನ್ ಟ್ವೀಟ್ ಮಾಡಿದ್ದಾರೆ ಎಂಬ ಪ್ರಕರಣದಲ್ಲಿ ಚೇತನ್‌ರವರನ್ನು ಬಂಧಿಸಲಾಗಿತ್ತು.

ಚೇತನ್ ಬಂಧನಕ್ಕೆ ವ್ಯಾಪಕ ವಿರೋಧ

ಕೇವಲ ಒಂದು ಪೋಸ್ಟ್ ಹಾಕಿದ್ದಕ್ಕೆ ಚೇತನ್‌ರವರನ್ನು ಬಂಧಿಸಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. “ಯಾವ ಆಯಾಮದಲ್ಲಿ ಈ ಪೋಸ್ಟ್ ಚೇತನ್‌ವರ ಬಂಧನಕ್ಕೆ ಕಾರಣವಾಗುತ್ತದೆ?
ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಳ್ಳುವವರ ಕತೆ ಇದು” ಎಂದು ಬರಹಗಾರ ಯೋಗೇಶ್ ಮಾಸ್ಟರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎಂಬ ಟ್ವೀಟ್ ಸಂಬಂಧಿಸಿ ಚೇತನ್ ಅಹಿಂಸಾ ಬಂಧನವಾಗಿದೆ. ಸಾಕಷ್ಟು ವಿಚಾರಗಳಲ್ಲಿ ಅವರ ಹೇಳಿಕೆಗಳ ಬಗ್ಗೆ ನನಗೆ ಭಿನ್ನಾಭಿಪ್ರಾಯವಿದೆ. ಆದರೆ ಈ ರೀತಿಯ ವಾಕ್ ಸ್ವಾತಂತ್ರ್ಯ ಕಸಿಯುವ ಬಂಧನಗಳನ್ನು ಖಂಡಿಸುತ್ತೇನೆ. ಚೇತನ್ ಹಿಂದುತ್ವದ ವಿಚಾರದಲ್ಲಿ ಮಾಡಿರುವ ಈ ಟ್ವೀಟ್ ಸಂಪೂರ್ಣ ಸತ್ಯದಿಂದ ಕೂಡಿದೆ. ಇದಕ್ಕೆ ನನ್ನ ಬೆಂಬಲವಿದೆ.” ಎಂದು ಸಾಮಾಜಿಕ ಕಾರ್ಯಕರ್ತರಾದ ಭಾಗ್ಯ ನಾರಾಯಣರವರು ಬರೆದಿದ್ದಾರೆ.

ಇದನ್ನೂ ಓದಿ: ಕೋಲಾರದಿಂದಲೇ ಸ್ಪರ್ಧಿಸುವಂತೆ ಒತ್ತಾಯ: ಸಿದ್ದರಾಮಯ್ಯ ಮನೆ ಮುಂದೆ ಅಭಿಮಾನಿಗಳ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...