Homeದಲಿತ್ ಫೈಲ್ಸ್ಕೇರಳ | ಶಾಲೆಯಲ್ಲಿ ಮಗನಿಗೆ ಜಾತಿ ತಾರತಮ್ಯ ಆರೋಪ : ನ್ಯಾಯಕ್ಕಾಗಿ ಎನ್‌ಸಿಪಿಆರ್ ಕದ...

ಕೇರಳ | ಶಾಲೆಯಲ್ಲಿ ಮಗನಿಗೆ ಜಾತಿ ತಾರತಮ್ಯ ಆರೋಪ : ನ್ಯಾಯಕ್ಕಾಗಿ ಎನ್‌ಸಿಪಿಆರ್ ಕದ ತಟ್ಟಿದ ಮಹಿಳೆ

- Advertisement -
- Advertisement -

ಶಾಲೆಯಲ್ಲಿ ಶಿಕ್ಷಕರಿಂದ ಜಾತಿ ತಾರತಮ್ಯಕ್ಕೆ ಒಳಗಾಗಿ ತನ್ನ ಮಗ ಆಘಾತಕ್ಕೊಳಗಾಗಿದ್ದಾನೆ. ಅಧಿಕಾರಿಗಳಿಂದ ನನಗೆ ನ್ಯಾಯ ಸಿಕ್ಕಿಲ್ಲ. ಹಾಗಾಗಿ, ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಕೇರಳದ ದಲಿತ ಬಾಲಕನೋರ್ವನ ತಾಯಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿರುವ ಕೇರಳದ ಇಡುಕ್ಕಿಯ ದಲಿತ ಮಹಿಳೆ ಪ್ರಿಯಾಂಕಾ ಸೋಮನ್ ಎಂಬವರು ತನ್ನ ಆರು ವರ್ಷದ ಮಗ ಪ್ರಣವ್ ಸಿಜಾಯ್ ಎಂಬಾತನಿಗೆ, ಆತ ಓದುತ್ತಿದ್ದ ಸ್ಲೀವಮಾಲಾದ ಸೇಂಟ್ ಬೆನೆಡಿಕ್ಟ್ಸ್ ಎಲ್ ಪಿ ಶಾಲೆಯಲ್ಲಿ ಜಾತಿ ದೌರ್ಜನ್ಯ ನಡೆಸಿದ ಆರೋಪ ಮಾಡಿದ್ದಾರೆ.

ಬಾಲಕ ಸಿಜಾಯ್‌ನ ಸಹಪಾಠಿಯೋರ್ವ ಅನಾರೋಗ್ಯದ ಕಾರಣ ತರಗತಿಯಲ್ಲಿ ವಾಂತಿ ಮಾಡಿಕೊಂಡಿದ್ದ. ಅದನ್ನು ಜಾತಿಯ ಕಾರಣಕ್ಕೆ ಶಿಕ್ಷಕರು ಸಿಜಾಯ್‌ ಕೈಯಲ್ಲಿ ಸ್ವಚ್ಚ ಮಾಡಿಸಿದ್ದಾರೆ ಎಂದಿದ್ದಾರೆ.

ಶಿಕ್ಷಕಿ ಮರಿಯಾ ಜೋಸೆಫ್ ಎಂಬಾಕೆ ತನ್ನ ಮಗನಿಂದ ಒತ್ತಾಯಪೂರ್ವಕವಾಗಿ ಸಹಪಾಠಿ ವಾಂತಿ ಮಾಡಿದ್ದನ್ನು ಸ್ವಚ್ಚ ಮಾಡಿಸಿದ್ದಾರೆ. ಇದರಿಂದ ಆತ ಭಯಬೀತನಾಗಿದ್ದಾನೆ. ಮಾನಸಿಕವಾಗಿ ಕುಗ್ಗಿ ಹೋಗಿದ್ದಾನೆ. ಶಾಲೆಗೆ ಹೋಗಲು ಕೇಳುತ್ತಿಲ್ಲ ಎಂದು ಪ್ರಿಯಾಂಕಾ ಸೋಮನ್ ಆರೋಪಿಸಿದ್ದಾರೆ.

ಪ್ರಿಯಾಂಕಾ ಅವರು ಮಕ್ಕಳ ಸಹಾಯವಾಣಿ, ಜಿಲ್ಲಾಧಿಕಾರಿ, ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಸೇರಿದಂತೆ ಹಲವರಿಗೆ ದೂರುಗಳನ್ನು ನೀಡಿದ ಬಳಿಕ, ಶಾಲಾ ಆಡಳಿತ ಮಂಡಳಿಯು ಪ್ರಕರಣವನ್ನು ಕುಶಲತೆಯಿಂದ ನಿರ್ವಹಿಸಲು ಪ್ರಾರಂಭಿಸಿದೆ.

ಪ್ರಣವ್ ಸಿಜಾಯ್ ಮಾತ್ರವಲ್ಲದೆ ಎಲ್ಲಾ ವಿದ್ಯಾರ್ಥಿಗಳಿಂದ ನಾವು ವಾಂತಿ ಮಾಡಿದ್ದನ್ನು ಸ್ವಚ್ಚ ಮಾಡಿಸಿದ್ದೇವೆ. ಕೇವಲ ಸಿಜಾಯ್‌ ಅನ್ನು ಮಾತ್ರ ಗುರಿಯಾಗಿಸಿಲ್ಲ ಎಂದು ಶಾಲಾ ಆಡಳಿತ ಮಂಡಳಿ ಹೇಳಿದೆ. ಆದರೆ, ಈ ಹೇಳಿಕೆ ಆಡಳಿತ ಮಂಡಳಿಗೆ ಸಂಕಷ್ಟ ತಂದಿಟ್ಟಿದೆ. ಮಕ್ಕಳಿಂದ ವಾಂತಿ ಸ್ವಚ್ಚ ಮಾಡಿಸುವ ಮೂಲಕ ಬಾಲ ಕಾರ್ಮಿಕ ಮತ್ತು ಮಕ್ಕಳ ಹಕ್ಕುಗಳ ಕಾನೂನುಗಳನ್ನು ಉಲ್ಲಂಘಿಸಿರುವುದನ್ನು ಆಡಳಿತ ಮಂಡಳಿ ಒಪ್ಪಿಕೊಂಡಿದೆ ಎಂದು ವರದಿಗಳು ಹೇಳಿವೆ.

ಶಾಲಾ ಆಡಳಿತ ಮಂಡಳಿ ಸ್ವತಃ ತಪ್ಪು ಒಪ್ಪಿಕೊಂಡಿದೆ. ಮಕ್ಕಳು ಕೂಡ ಹೇಳಿಕೆಗಳನ್ನು ನೀಡಿದ್ದಾರೆ. ಆದರೂ, ಪೊಲೀಸರು ಮತ್ತು ಶಾಲಾ ಆಡಳಿತ ಮಂಡಳಿಯವರು ಪ್ರಕರಣದ ಗಂಭೀರತೆಯನ್ನು ಕುಗ್ಗಿಸಲು ನೋಡುತ್ತಿದ್ದಾರೆ. ಸ್ಥಳಿಯಾಡಳಿತದ ಅಧಿಕಾರಿಗಳು ಮಕ್ಕಳ ಹಕ್ಕುಗಳ ಉಲ್ಲಂಘನೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಪೊಲೀಸರು ಉದ್ದೇಶಪೂರ್ವಕವಾಗಿ ತನಿಖೆ ವಿಳಂಬ ಮಾಡುತ್ತಿದ್ದಾರೆ. ಈ ಮೂಲಕ ಶಾಲಾ ಆಡಳಿತ ಮಂಡಳಿಯನ್ನು ರಕ್ಷಿಸುತ್ತಿದ್ದಾರೆ ಎಂದು ದಿ ಮೂಕನಾಯಕ್ ವರದಿ ಮಾಡಿದೆ.

“ನಾನು ನನ್ನ ಮಗನಿಗಾಗಿ ಮಾತ್ರ ಹೋರಾಟ ಮಾಡುತ್ತಿಲ್ಲ. ಇದು ಎಲ್ಲರಿಗೆ ಸಂಬಂಧಪಟ್ಟಿದ್ದು, ಈ ರೀತಿಯ ಕೃತ್ಯಗಳು ಕೊನೆಯಾಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಾಲೆಗಳಲ್ಲಿ ಸ್ವಚ್ಚತಾ ಸಿಬ್ಬಂದಿಯನ್ನು ನೇಮಿಸುವುದನ್ನು ಕಡ್ಡಾಯಗೊಳಿಸಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳ ಕಡ್ಡಾಯ ಪಾಲನೆ ಖಚಿತಪಡಿಸಬೇಕು ಎಂದು ಪ್ರಿಯಾಂಕಾ ಅವರು ಮಾಧ್ಯಮಗಳಿಗೆ ಹೇಳಿದ್ದಾರೆ.

ಶಾಲೆಯ ತರಗತಿಯ ಮುಂಭಾಗ ಅಳವಡಿಸಿರುವ ಸಿಸಿಟಿವಿಯಲ್ಲಿ ಜನರು ತರಗತಿಯೊಳಗೆ ಹೋಗುವುದು ಬರುವುದು ಸ್ಪಷ್ಟವಾಗಿ ರೆಕಾರ್ಡ್ ಆಗಿದೆ. ಇದರಿಂದ ವಾಂತಿ ಸ್ವಚ್ಚ ಮಾಡಿಸಿರುವುದು ಸ್ಪಷ್ಟ. ಸಿಸಿಟಿವಿ ದೃಶ್ಯವನ್ನು ಸಾಕ್ಷಿಯಾಗಿ ಪರಿಗಣಿಸಿ ಶಾಲೆಯ ವಿರುದ್ದ ಕ್ರಮ ಕೈಗೊಳ್ಳಬೇಕು. ಪೊಲೀಸರು ಶಾಲೆಯನ್ನು ರಕ್ಷಿಸುವ ಕೆಲಸ ಮಾಡಬಾರದು. ನನಗೆ ಸಾಕ್ಷ್ಯಗಳನ್ನು ತಿರುಚುವ ಆತಂಕವಿದೆ. ಈ ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಯಬೇಕು ಎಂದು ಪ್ರಿಯಾಂಕಾ ಅವರು ಆಗ್ರಹಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳಿಂದ ನ್ಯಾಯ ಸಿಗದಿರುವ ಹಿನ್ನೆಲೆ ಪ್ರಿಯಾಂಕಾ ಅವರು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದು ನ್ಯಾಯ ಒದಗಿಸುವಂತೆ ಕೋರಿದ್ದಾರೆ. ಪತ್ರದಲ್ಲಿ ಜಾತಿ ತಾರತಮ್ಯ, ಮಕ್ಕಳ ಹಕ್ಕುಗಳು ಮತ್ತು ಬಾಲ ಕಾರ್ಮಿಕ ತಡೆ ಕಾನೂನುಗಳ ಉಲ್ಲಂಘನೆಯನ್ನು ಎತ್ತಿ ತೋರಿಸಿದ್ದಾರೆ ಎಂದು ವರದಿಯಾಗಿದೆ.

ಬಾಲಕನಿಂದ ಜಾತಿಯ ಕಾರಣಕ್ಕೆ ವಾಂತಿ ಸ್ವಚ್ಚ ಮಾಡಿಸಿದ್ದಾರೆ ಎಂಬ ವಿಚಾರ ಕೇರಳದಲ್ಲಿ ದೊಡ್ಡ ಚರ್ಚೆಯನ್ನು ಹುಟ್ಟು ಹಾಕಿದೆ. ಆದರೆ, ಅಧಿಕಾರಿಗಳು ಶಾಲೆಯಲ್ಲಿ ಮಕ್ಕಳಿಂದ ಸ್ವಚ್ಚತಾ ಕಾರ್ಯಗಳನ್ನು ಮಾಡಿಸುವುದು ಸಾಮಾನ್ಯ ವಿಷಯ ಎಂದಿದ್ದಾರೆ. ಶಿಕ್ಷಣ ಹೆಸರಿನಲ್ಲಿ ಮಕ್ಕಳ ಶೋಷಣೆಯನ್ನು ಸಾಮಾಣ್ಯೀಕರಿಸುವ ಮೂಲಕ ಕಾನೂನು ಜಾರಿ ಮಾಡಬೇಕಾದವರೇ ಉಲ್ಲಂಘಣೆ ಮಾಡುತ್ತಿದ್ದಾರೆ ಎಂದು ದಿ ಮೂಕನಾಯಕ್ ವರದಿ ಮಾಡಿದೆ.

ವರದಿಗಳ ಪ್ರಕಾರ, ಜಾತಿ ದೌರ್ಜನ್ಯದ ಬಳಿಕ ಬಾಲಕ ಪ್ರಣವ್ ಅವರನ್ನು ಖಾಸಗಿ ಶಾಲೆಯಿಂದ ವರ್ಗಾವಣೆ ಪಡೆದು, ಸರ್ಕಾರಿ ಶಾಲೆಗೆ ಸೇರಿಸಲು ಪೋಷಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಸೌಲಭ್ಯಕ್ಕಾಗಿ ದಾಖಲಾತಿ ಬೇಕು, ದಾಖಲಾತಿಗಳಿಂದಲೇ ಸೌಲಭ್ಯ ಎಂಬಂತಾಗಬಾರದು – ಡಾ. ಅಕ್ಕಯ್ ಪದ್ಮಶಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...