Homeಕರ್ನಾಟಕನೀತಿಸಂಹಿತೆ ಉಲ್ಲಂಘನೆ ಆರೋಪ: RR ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಪ್ರಕರಣ ದಾಖಲು

ನೀತಿಸಂಹಿತೆ ಉಲ್ಲಂಘನೆ ಆರೋಪ: RR ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಪ್ರಕರಣ ದಾಖಲು

ನಾಮಪತ್ರ ಸಲ್ಲಿಸಲು ಬಂದ ಅಭ್ಯರ್ಥಿಯ ವಿರುದ್ಧವೇ ನೀವು ಎಫ್.ಐ.ಆರ್ ದಾಖಲಿಸುತ್ತಿರಾ ಎಂದರೆ ಇದೆಂತಹಾ ಕೀಳು ಮಟ್ಟದ ನೀಚ ರಾಜಕಾರಣ?- ಡಿ.ಕೆ.ಶಿವಕುಮಾರ್

- Advertisement -
- Advertisement -

ಬೆಂಗಳೂರಿನ RR ನಗರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿನ್ನೆ ಕುಸುಮಾ ನಾಮಪತ್ರ ಸಲ್ಲಿಸಿದ್ದು, ಇಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪದಲ್ಲಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದಲ್ಲಿ ಉಪಚುನಾವಣೆಗೆ ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದು, ನಿನ್ನೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮೃತ ಐಎಎಸ್ ಅಧಿಕಾರಿ ಡಿ.ಕೆ.ರವಿ ಪತ್ನಿ ಕುಸುಮಾ ಅವರು ನಾಮಪತ್ರ ಸಲ್ಲಿಸಿದರು. ಇಲ್ಲಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಉಪಚುನಾವಣೆ: ಆರ್‌.ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ

ಟ್ವೀಟ್‌ನಲ್ಲಿ, “ನಾಮಪತ್ರ ಸಲ್ಲಿಸಲು ಬಂದ ಅಭ್ಯರ್ಥಿಯ ವಿರುದ್ಧವೇ ನೀವು ಎಫ್.ಐ.ಆರ್ ದಾಖಲಿಸುತ್ತಿರಾ ಎಂದರೆ ಇದೆಂತಹಾ ಕೀಳು ಮಟ್ಟದ ನೀಚ ರಾಜಕಾರಣ? ಬಾವುಟ ಹಿಡಿದು, ಅಭ್ಯರ್ಥಿಯನ್ನು ಹೊತ್ತು ಮೆರವಣಿಗೆ ಮಾಡಿಕೊಂಡು‌ ಬಂದವರ ವಿರುದ್ಧ ಪ್ರಕರಣ ಏಕೆ‌ ದಾಖಲಿಸಲಿಲ್ಲ? ನಮ್ಮ ಅಭ್ಯರ್ಥಿ ಯಾವುದೇ ರೀತಿಯಲ್ಲೂ ನೀತಿ ಸಂಹಿತೆ ಉಲ್ಲಂಘಿಸಿಲ್”ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್  ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ಕಾಂಗ್ರೆಸ್‌: ‘ಕೈ’ ನಾಯಕರಿಗೆ ಕಗ್ಗಂಟಾದ ಕೋಲಾರ

0
ಲೋಕಸಭೆಯ ಬಾಕಿ ಇದ್ದ ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬಳ್ಳಾರಿ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಚಿಕ್ಕಬಳ್ಳಾಪುರದಲ್ಲಿ ರಕ್ಷಾ ರಾಮಯ್ಯ ಅವರಿಗೆ ನೀಡಲಾಗಿದೆ. ಈ ಕ್ಷೇತ್ರದ...